Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Team Udayavani, May 4, 2024, 2:57 PM IST

10

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕಳೆದ ವರ್ಷ ತೀವ್ರ ಮಳೆ ಕೊರತೆಯಿಂದ ಬರಗಾಲಕ್ಕೆ ಅಪಾರ ಪ್ರಮಾಣದಲ್ಲಿ ಬೆಳೆ ಕಳೆದುಕೊಂಡ ರೈತರಿಗೆ ಇಲ್ಲಿವರೆಗೂ ಅರೆಬರೆ ಪರಿಹಾರ ಸಿಕ್ಕಿದ್ದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಬರ ಪರಿಹಾರ ಹಣ ರೈತರು ಎದುರು ನೋಡುವಂತಾಗಿದೆ.

ಕಳೆದ ಸಾಲಿನಲ್ಲಿ ಜಿಲ್ಲಾದ್ಯಂತ ಬರೋಬ್ಬರಿ 75,208.20 ಹೆಕ್ಟೇರ್‌ ಪ್ರದೇಶದಲ್ಲಿ ರೈತರು ಮಳೆ ಕೊರತೆಯಿಂದ ವಿವಿಧ ಬೆಳಗಳನ್ನು ಕಳೆದುಕೊಂಡು ಸಂಕಷ್ಟಕ್ಕಿಡಾಗಿದ್ದರು. ಆದರೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಲಿಲ್ಲ ಎಂದು ತಾತ್ಕಲಿಕವಾಗಿ ತಲಾ 2000 ರೂ, ಪರಿಹಾರ ವಿತರಿಸಿದರೂ ರೈತರಿಗೆ ಬೆಳೆ ನಷ್ಟ ಪರಿಹಾರ ಪೂರ್ತಿ ಜಮೆ ಇನ್ನೂ ಆಗಲೇ ಇಲ್ಲ.

ರಾಜ್ಯ ಸರ್ಕಾರ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ನಷ್ಟಕ್ಕೀಡಾಗಿರುವ ಒಟ್ಟು 75,208.20 ಹೆಕ್ಟೇರ್‌ ಪೈಕಿ ಇಲ್ಲಿವರೆಗೂ 68,551.67 ಹೆಕ್ಟೇರ್‌ ಪ್ರದೇಶದಲ್ಲಿ ಬರ ಪರಿಹಾರ ನೀಡಿದ್ದು, ಒಟ್ಟು 97,278 ರೈತರಿಗೆ ಪರಿಹಾರ ಸಿಕ್ಕಿದೆ. ಇಲ್ಲಿವರೆಗೂ 9 ಕಂತುಗಳಲ್ಲಿ ಜಿಲ್ಲೆಯ ರೈತರಿಗೆ ರಾಜ್ಯ ಸರ್ಕಾರ ತಲಾ 2,000 ರೂ, ಒಳಗೆ ಒಟ್ಟು 17.71 ಕೋಟಿ ರೂ, ಬರ ಪರಿಹಾರ ಹಣವನ್ನು ರೈತರ ಖಾತೆಗಳಿಗೆ ಜಮೆ ಮಾಡಿದರೂ ಇನ್ನೂ 6,656 ಹೆಕ್ಟೇರ್‌ ಪ್ರದೇಶದ ರೈತರಿಗೆ ಬರ ಪರಿಹಾರ ಬಂದಿಲ್ಲ. ಅಲ್ಲದೇ ಎನ್‌ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರವೇ  ಪ್ರತಿ ಹೆಕ್ಟೇರ್‌ಗೆ 8,500 ರೂ., ಬರ ಪರಿಹಾರ ಸಿಗಬೇಕಿದ್ದು ಈಗ ಕೇವಲ ರಾಜ್ಯ ಸರ್ಕಾರ 2,000 ರೂ, ತಾತ್ಕಲಿಕ ಪರಿಹಾರ ಬಿಟ್ಟರೆ ಕೇಂದ್ರದಿಂದ ಒಂದು ನೈಯಾಪೈಸೆ ಕೂಡ ರೈತರಿಗೆ ಸಿಕ್ಕಿಲ್ಲ.

ವರ್ಷ ಸಮೀಪಿಸಿದರೂ ಪರಿಹಾರ ಇಲ್ಲ: ಬರ ಪರಿಹಾರ ವಿಚಾರದಲ್ಲಿ ಕೇಂದ್ರ, ರಾಜ್ಯ ಸರ್ಕಾರದ ನಡುವೆ ಕಾನೂನು ಸಮರ ನಡೆದಿದ್ದು ವಿಚಾರ ಸುಪ್ರೀಂಕೋಟ್‌ ì ಮೆಟ್ಟಲೇರಿದ್ದು ಎಲ್ಲರಿಗೂ ಗೊತ್ತಿರುವ ವಿಚಾರವೇ ಆದರೂ ಕೇಂದ್ರ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿರುವ ಬರ ಪರಿಹಾರ ಹಣದಲ್ಲಿ ಜಿಲ್ಲೆಯ ರೈತರಿಗೆ ಪರಿಹಾರ ಹಣ ಬರುವುದು ಯಾವಾಗ ಎನ್ನುವ ವಿಚಾರ ಚರ್ಚೆಗೆ ಗ್ರಾಸವಾಗಿದೆ. ರೈತರು ಬೆಳೆ ಕಳೆದುಕೊಂಡು ಒಂದು ವರ್ಷ ಕಳೆಯುತ್ತಿದೆ. ಈಗ ಮುಂಗಾರು ಹಂಗಾಮು ಶುರುವಾಗಲು ದಿನಗಣನೆ ಶುರುವಾಗಿದೆ. ರೈತರು ಮುಂದಿನ ಕೃಷಿ ಚಟುವಟಿಕೆಗಳಿಗೆ ಸದ್ದಿಲ್ಲದೇ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರವಾಗಲಿ ಅಥವ ರಾಜ್ಯ ಸರ್ಕಾರವಾಗಲಿ ಎನ್‌ಡಿಆರ್‌ಎಫ್ ಪ್ರಕಾರ ರೈತರಿಗೆ ಸಿಗಬೇಕಾದ ಬರ ಪರಿಹಾರ ಹಣವನ್ನು ಇನ್ನೂ ಸಂಪೂರ್ಣ ಜಮೆ ಮಾಡುವಲ್ಲಿ ವಿಫ‌ಲವಾಗಿರುವುದು ಸಹಜವಾಗಿಯೆ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರವೇ ಬರ ಘೋಷಣೆ ಮಾಡಿ, ಕೇಂದ್ರದಿಂದ ಬರ ಅಧ್ಯಯನ ತಂಡ ಆಗಮಿಸಿ ಬರ ವೀಕ್ಷಣೆ ಮಾಡಿ ಹೋದರೂ ಪರಿಹಾರ ಹಣ ರೈತರಿಗೆ ಸಂಪೂರ್ಣ ಸಿಕ್ಕಿಲ್ಲ.

ತಾಲೂಕುವಾರು ಬೆಳೆ ನಷ್ಟ, ಪರಿಹಾರ ಮೊತ್ತ

ತಾಲೂಕು      ಬೆಳೆ ನಷ್ಟ(ಹೇಕ್ಟರ್‌)            ಬೆಳೆ ನಷ್ಟ(ಲಕ್ಷಗಳಲ್ಲಿ)

ಚಿಕ್ಕಬಳ್ಳಾಪುರ           9,039  768.31

ಗೌರಿಬಿದನೂರು          15,037 1,278.16

ಗುಡಿಬಂಡೆ      7,156  608.26

ಬಾಗೇಪಲ್ಲಿ     16320 1387.2

ಚಿಂತಾಮಣಿ   17476 1485.46

ಶಿಡ್ಲಘಟ್ಟ       10180 865.3

ಒಟ್ಟು  75,208.20       6410

ಬರ ಪರಿಹಾರ ಪಡೆದು ರೈತರ ವಿವರ

ತಾಲೂಕಿನ    ಒಟ್ಟು ರೈತರು          ಮೊತ್ತ (ಕೋಟಿಗಳಲ್ಲಿ)

ಗೌರಿಬಿದನೂರು          28,698 5,21,73,975

ಚಿಕ್ಕಬಳ್ಳಾಪುರ           12,524 2,20,05,225

ಗುಡಿಬಂಡೆ      7,199  1,32,84,569

ಬಾಗೇಪಲ್ಲಿ     14,983 2,81,52,879

ಶಿಡ್ಲಘಟ್ಟ       15,448 2,79.04,414

ಚಿಂತಾಮಣಿ   18,426 3,35,48,093

ಒಟ್ಟು  97,278 17,70,69,155

-ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.