ತರಕಾರಿ, ಹೂ ಕೇಳುವರು ಇಲ್ಲದೇ, ರೈತ ಕಂಗಾಲು
ವರ್ತಕರು ಬಾರದೆ ಎಪಿಎಂಸಿಯಲ್ಲೇ ಉಳಿದ ಟನ್‌ಗಟ್ಟಲೆ ತರಕಾರಿ
Team Udayavani, May 1, 2021, 3:15 PM IST
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಸರ್ಕಾರ ಜನತಾ ಕರ್ಫ್ಯೂ ಜಾರಿಗೊಳಿಸಿದೆ. ಇದರ ಪರಿಣಾಮ ಮಾರುಕಟ್ಟೆಯಲ್ಲಿ ತರಕಾರಿ, ಹೂವು ಖರೀದಿಗೆ ವರ್ತಕರು ಬಾರದೇ ಲೋಡ್‌ಗಟ್ಟಲೇ ತರಕಾರಿ ಉಳಿದುಕೊಳ್ಳುತ್ತಿದೆ. ಇದರಿಂದ ಜಿಲ್ಲೆಯ ರೈತರು ಕಂಗಾಲಾಗಿದ್ದಾರೆ.
ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರೇಷ್ಮೆ, ಹೈನುಗಾರಿಕೆ ಜೊತೆಗೆ ತರಕಾರಿ ಉತ್ಪಾದನೆಯಲ್ಲಿ ಖ್ಯಾತಿ ಹೊಂದಿರುವ ಜಿಲ್ಲೆಯಲ್ಲಿ ರೈತರು ಸಾಲ ಮಾಡಿ ಬೆಳೆದ ಬೆಳೆಗೆ ಸೂಕ್ತ ಬೆಲೆ ಇರಲಿ ಕನಿಷ್ಠ ಕೂಲಿ ಹಣವೂ ಸಿಗದೇ, ಪರದಾಡುವಂತಾಗಿದೆ. ಜಿಲ್ಲೆಯಲ್ಲಿ ಟೊಮೆಟೋ ಬೆಲೆ ಕುಸಿದು, ರೈತರು ಮಾರುಕಟ್ಟೆಗೆ ಸಾಗಿಸಲು ಖರ್ಚು ಸಹ ಭರಿಸಲು ಸಾಧ್ಯವಾಗದೆ ತೋಟದಲ್ಲೇ ಬಿಡುತ್ತಿದ್ದಾರೆ. ನೀರಾವರಿ ಸೌಲಭ್ಯದಿಂದ ವಂಚಿತಗೊಂಡಿರುವ ಅತಿ ಹೆಚ್ಚು ಅಂತರ್ಜಲ ಬಳಕೆ ಮಾಡುವ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಭಾವದಿಂದ ರೈತರ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರ ಮತ್ತು ಜಿಲ್ಲಾಡಳಿತ ಮಧ್ಯಪ್ರವೇಶ ಮಾಡಬೇಕೆಂಬ ಆಗ್ರಹ ಕೇಳಿಬಂದಿದೆ.
ಕೇಳುವವರೇ ಇಲ್ಲ: ಕೋವಿಡ್ ಸೋಂಕು ನಿಯಂತ್ರಿಸಲು ಸರ್ಕಾರ ಜನತಾ ಕರ್ಫ್ಯೂ ಜಾರಿಗೊಳಿಸಿದೆ. ಮತ್ತೂಂದೆಡೆ ನಾಗರಿಕರಿಗೆ ಅಗತ್ಯ ವಸ್ತುಗಳ ಖರೀದಿಮಾಡಲು ಬೆಳಗ್ಗೆ 6ರಿಂದ 10 ಗಂಟೆಯವರೆಗೆ ಅವಕಾಶ ಒದಗಿಸಿದೆ. ಈ ಅವಧಿ ಯಲ್ಲಿ ನಗರದ ಎಪಿಎಂಸಿಗೆ ಬರುವ ಹೂಕೋಸು, ಸೌತೆಕಾಯಿ ಸಹಿತ ತರಕಾರಿ ಕೇಳವರು ಇಲ್ಲದಂತಾಗಿದೆ. ಇದರಿಂದ ರೈತರು ದಿಕ್ಕುತೋಚದೆ ನಿತ್ಯ ಸಂಕಷ್ಟ ಎದುರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಸಮಯ ಅವಕಾಶ ಕಲ್ಪಿಸಿ: ರಾಜ್ಯ ಸರ್ಕಾರ ಮಾರು ಕಟ್ಟೆಯಲ್ಲಿ ತರಕಾರಿ ಮತ್ತಿತರರ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸಿದೆ. ಆದರೆ, ಸಮಯ ಬೆಳಗ್ಗೆ 6ರಿಂದ 10 ಗಂಟೆಗೆ ಮಾತ್ರ ಸೀಮಿತ ಗೊಳಿಸಿದ್ದರಿಂದ ವರ್ತಕರು ಬರಲು ಸಮಯ ಅವಕಾಶ ಇಲ್ಲದಂತಾಗಿದೆ. ನಿಗದಿ ತ ಅವ ಧಿಯೊಳಗೆ ಮಾರು ಕಟ್ಟೆ ಬಂದ್ ಮಾಡಲು ಅಧಿ ಕಾರಿಗಳು ಕ್ರಮಕೈ ಗೊಳ್ಳುತ್ತಿರುವುದರಿಂದ ಸಂಜೆವರೆಗೆ ತರಕಾರಿ ಮಾರಾಟ ಮಾಡಲು ಅವಕಾಶ ಕಲ್ಪಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.
ಕೋವಿಡ್ ಸೋಂಕು ನಿಯಂತ್ರಿಸಲು ಸರ್ಕಾರ ಜನತಾ ಕರ್ಫ್ಯೂ ಜಾರಿಗೊಳಿಸಿದರಿಂದ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಹಾಲು ಉತ್ಪಾದಕರಿಗೆ, ಗ್ರಾಹಕರಿಗೆ ಅನುಕೂಲ ಕಲ್ಪಿಸುವ ಸರ್ಕಾರ ಆದೇಶವನ್ನು ಪರಿಷ್ಕರಿಸಿ ರಾತ್ರಿ 8 ಗಂಟೆಯವರೆಗೆ ಸಮಯಾವಕಾಶಒದಗಿಸಿದೆ. ಹಾಲಿನ ಮಳಿಗೆ ತೆರೆದಿರುವ ಮಾದರಿಯಲ್ಲಿ ಎಪಿಎಂಸಿಯಲ್ಲೂ ರಾತ್ರಿ 8 ಗಂಟೆಯವರೆಗೆ ತರಕಾರಿ ಉತ್ಪನ್ನ ಮಾರಾಟ ಮಾಡಲು ವ್ಯವಸ್ಥೆ ಕಲ್ಪಿಸಿ, ಬೆಂಬಲ ಬೆಲೆಯಲ್ಲಿ ಖರೀದಿ ಮಾಡುವ ವ್ಯವಸ್ಥೆ ಮಾಡಬೇಕು. – ಭಕ್ತರಹಳ್ಳಿ ಬೈರೇಗೌಡ, ಪ್ರಧಾನ ಕಾರ್ಯದರ್ಶಿ, ರೈತ ಸಂಘ ಹಾಗೂ ಹಸಿರುಸೇನೆ (ಕೋಡಹಳ್ಳಿ ಚಂದ್ರಶೇಖರ್ ಬಣ)
– ತಮೀಮ್‌ಪಾಷ ಎಂ.ಎ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.