ಹಾಲಿನ ದರ ಕಡಿತಕ್ಕೆ ರೈತ ಸಂಘ ಆಕ್ರೋಶ
Team Udayavani, Aug 4, 2020, 8:29 AM IST
ಶಿಡ್ಲಘಟ್ಟ: ಹಾಲಿನ ದರ ಕಡಿತಗೊಳಿಸಿರುವ ಹಾಲು ಒಕ್ಕೂಟದ ಮಹಾಮಂಡಳಿ ಆಡಳಿತ ಮಂಡಳಿಯ ನಿರ್ಧಾರ ಖಂಡಿಸಿ ರೈತ ಸಂಘ ಹಾಗೂ ಹಸಿರು ಸೇನೆ (ದಿ. ಪುಟ್ಟಣ್ಣಯ್ಯ ಬಣ) ಕಾರ್ಯಕರ್ತರು ನಂದಿಕ್ರಾಸ್‌ನ ಮೆಗಾ ಡೇರಿಯ ಮುಂದೆ ಪ್ರತಿಭಟನೆ ನಡೆಸಿದರು.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆ ನೀರು ಆಶ್ರಯಿಸಿಕೊಂಡ ರೈತರು ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಹಾಲು ಒಕ್ಕೂಟ ಆಡಳಿತ ಮಂಡಳಿ, ಲೀಟರ್ ಹಾಲಿಗೆ 4 ರೂ. ಕಡಿತಗೊಳಿಸಿ ರೈತರಿಗೆ ಗಾಯದ ಮೇಲೆ ಬರೆ ಎಳೆದಿದೆ ಎಂದು ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಟಿ.ಲಕ್ಷ್ಮಿನಾರಾಯಣರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಮತ್ತು ಹಾಲು ಒಕ್ಕೂಟ ಆಡಳಿತ ಮಂಡಳಿ ನಿರ್ದೇಶಕರು ಕೂಡಲೇ ಹಾಲಿನ ದರ ಕಡಿತಗೊಳಿಸಿರುವ ಆದೇಶ ಹಿಂಪಡೆಯಬೇಕೆಂದು ಎಂದಿನಂತೆ 4 ರೂ.ಸೇರಿಸಿ ಹಾಲು ಖರೀದಿ ಮಾಡಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಉಪಾಧ್ಯಕ್ಷ ಯಾಖೂಬ್ ಶರೀಫ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟ ಸ್ವಾಮಿ,ಉಪಾಧ್ಯಕ್ಷ ಟಿ.ಕೆ.ಅರುಣ್‌ಕುಮಾರ್, ಶಿಡ್ಲ ಘಟ್ಟದ ರವಿಪ್ರಕಾಶ್ ಹಾಗೂ ವಿವಿಧ ತಾಲೂಕುಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.