ಕೋವಿಡ್ ನಿರ್ಮೂಲನೆಗೆ ಸದೃಢರಾಗಿ
Team Udayavani, Aug 16, 2020, 2:36 PM IST
ಶಿಡ್ಲಘಟ್ಟ: ಕೋವಿಡ್ ಸೋಂಕು ನಿಯಂತ್ರಿಸಲು ದೈಹಿಕ, ಮಾನಸಿಕವಾಗಿ ಸದೃಢರಾಗಬೇಕೆಂದು ಶಾಸಕ ವಿ. ಮುನಿಯಪ್ಪ ಸಲಹೆ ನೀಡಿದರು.
ನಗರದ ನೆಹರು ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿ, ಜನರ ನೆಮ್ಮದಿ ಕೆಡಿಸಿರುವ ಕೋವಿಡ್ ಸೋಂಕಿಗೆ ಲಸಿಕೆ ಕಂಡುಹಿಡಿಯುವ ಪ್ರಯತ್ನ ವಿಜ್ಞಾನಿಗಳಿಂದ ಆಗುತ್ತಿದೆ. ಆದರೂ, ಸೋಂಕಿನಿಂದ ಮಾನಸಿಕವಾಗಿ ಆತ್ಮಸ್ಥೈರ್ಯ ಕಳೆದುಕೊಂಡು, ಬೇರೆ ರೀತಿಯ ಕಾಯಿಲೆಗಳಿಂದ ಮೃತರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಸರ್ಕಾರದ ನಿರ್ದೇಶನ, ಆರೋಗ್ಯ ಇಲಾಖೆಯ ಸಿಬ್ಬಂದಿ ನೀಡುವ ಸಲಹೆ ಮತ್ತು ಸೂಚನೆಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ, ಆರೋಗ್ಯವಂತ ಸಮಾಜವವನ್ನು ನಿರ್ಮಿಸಿ ಕೋವಿಡ್ ಮುಕ್ತ ಮಾಡಬೇಕೆಂದು ಮನವಿಮಾಡಿದರು. ತಹಶೀಲ್ದಾರ್ ಕೆ.ಅರುಂಧತಿ ಧ್ವಜರೋಹಣ ನೆರವೇರಿಸಿದರು.
ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕಪಡೆದವರು, ಆರೋಗ್ಯ ಇಲಾಖೆ ಸೇರಿ ಕೋವಿಡ್ ವಾರಿಯರ್ಸ್‌ಗಳಿಗೆ ಶಾಸಕರು ಸನ್ಮಾನಿಸಿದರು. ಬಿಇಒ ಆರ್.ಶ್ರೀನಿವಾಸ್, ತಾಪಂ ಅಧ್ಯಕ್ಷ ಎಂ.ಕೆ.ರಾಜಶೇಖರ್, ಇಒ ಬಿ.ಶಿವ ಕುಮಾರ್, ನಗರಸಭಾ ಪೌರಾಯುಕ್ತ ಶ್ರೀನಿವಾಸ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎ.ನಾಗರಾಜ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಟಾರೆಡ್ಡಿ, ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ಮೂರ್ತಿ, ತಾಪಂ ಸದಸ್ಯೆ ಪಂಕಜ ನಿರಂಜನ್, ಸಿಡಿಪಿಒ ನಾಗವೇಣಿ, ನಗರಸಭಾ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.