ಲಾರಿಯಲ್ಲಿದ್ದ ಟೊಮೆಟೋ ಬಾಕ್ಸ್‌ನಲ್ಲಿ ಹಣ ಪತ್ತೆ

Team Udayavani, Oct 12, 2018, 1:04 PM IST

blore-9.jpg

ಚಿಂತಾಮಣಿ: ವ್ಯಕ್ತಿಯೊರ್ವನಿಗೆ ಡಿಕ್ಕಿ ಹೊಡೆದು ಪರಾರಿಯಾಗುತ್ತಿದ್ದ ಲಾರಿಯನ್ನು ಸೇರೆ ಹಿಡಿದ ಪೊಲೀಸರಿಗೆ ಲಾರಿಯಲ್ಲಿ ಒಂದು ಲಕ್ಷ ರೂ. ಹಣದ ಕಂತೆ ಸಿಕ್ಕದೆ. ಇದರಿಂದ ಅನುಮಾನಗೊಂಡ ಪೊಲೀಸ್‌ ಅಧಿಕಾರಿಗಳು ಲಾರಿಯಲ್ಲಿದ್ದ 300ಕ್ಕೂ ಹೆಚ್ಚು ಟೊಮೆಟೋ ಬಾಕ್ಸ್‌ಗಳನ್ನು ಪರಿಶೀಲನೆ ಮಾಡಿದ್ದಾರೆ.

ನಗರದ ಎಪಿಎಂಸಿ ಮಾರುಕಟ್ಟೆ ಬಳಿ ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದ ಮಾರುಕಟ್ಟೆಯ ಹಮಾಲಿಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಹೋದದ್ದ ಲಾರಿಯನ್ನು ನಗರ ಠಾಣ ಪೊಲೀಸ್‌ ಅಧಿಕಾರಿಗಳು ಲಾರಿಯನ್ನು ಪರಿಶೀಲಿಸಿದಾಗ ಟೊಮೆಟೋ ಬಾಕ್ಸ್‌ಗಳಲ್ಲಿ 500 ರೂ. ಮುಖ ಬೆಲೆಯ ಒಂದು ಲಕ್ಷ ಮೌಲ್ಯದ ಕಂತೆ ದೊರೆತಿದೆ ಎಂದು ತಿಳಿದು ಬಂದಿದೆ.
 
ಅಪಘಾತಕ್ಕೆ ಯುವ ಬಲಿ: ಚಿಂತಾಮಣಿ ನಗರದ ಟೊಮೆಟೋ ಮಾರುಕಟ್ಟೆಯಲ್ಲಿ ಖಾಲಿ ಟೊಮೆಟೋ ಬಾಕ್ಸ್‌ಗಳನ್ನು ಹೊತ್ತ ಮಧ್ಯಪ್ರದೇಶದ ಲಾರಿಯೊಂದು, ಮಾರುಕಟ್ಟೆಯಲ್ಲಿ ಕೂಲಿ ಕೆಲಸ ಮಾಡುವ ಶ್ರೀರಾಮನಗರದ ಹರೀಶ್‌ ಎಂಬ
ಯುವಕನಿಗೆ ಡಿಕ್ಕಿ ಹೊಡೆದ ಪರಿಣಾಮ, ಯುವಕನಿಗೆ ಗಂಭೀರ ಗಾಯವಾಗಿ ಆಸ್ಪತ್ರೆ ಸೇರಿದ್ದು. ಚಿಕಿತ್ಸೆ ಫ‌ಲಕಾರಿಯಾಗದೇ ಯುವಕ ಸಾವನ್ನಪ್ಪಿದ್ದಾನೆ. 

ಈ ಹಿನ್ನೆಲೆಯಲ್ಲಿ ಚಿಂತಾಮಣಿ ನಗರ ಠಾಣೆಯ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು, ನಗರ ಠಾಣೆಯ ಮುಂಭಾಗದಲ್ಲಿ ತಂದು ನಿಲ್ಲಿಸಿದ್ದಾರೆ. ಲಾರಿಯಿಂದ ಖಾಲಿ ಬಾಕ್ಸ್‌ಗಳನ್ನು ಮತ್ತೂಂದು ಲಾರಿಗೆ ತುಂಬಿಸುತ್ತಿದ್ದ ವೇಳೆ ಟೊಮೆಟೋ ಬಾಕ್ಸ್‌ ವೊಂದರಲ್ಲಿ ಒಂದು ಲಕ್ಷ ರೂ. ಹಣದ ಕಂತೆ ಪತ್ತೆಯಾಗಿದೆ. ಪೊಲೀಸರು ಅನುಮಾನಗೊಂಡು ಒಂದು ಲಕ್ಷ ಹಣವನ್ನು ವಶಕ್ಕೆ ಪಡೆದು, ಡಿವೈಎಸ್‌ಪಿ ನಾಗೇಶ್‌ ಹಾಗೂ ನಗರಠಾಣೆಯ ಆರಕ್ಷಕ ವೃತ್ತ ನಿರೀಕ್ಷಕ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಇಡೀ ಲಾರಿಯಲ್ಲಿನ ಎಲ್ಲಾ ಖಾಲಿ ಬಾಕ್ಸ್‌ಗಳನ್ನು ಪರಿಶೀಲನೆ ಮಾಡಿದ್ದಾರೆ. ಲಾರಿಯಲ್ಲಿ ದೊರೆತ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹಣ ಯಾರಿಗೆ ಸೇರಿದ್ದು ಎಂದು ಪರಿಶೀಲಿಸಿ, ಲಾರಿ ಮಾಲೀಕನ ವಿರುದ್ಧ ದೂರು ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

ಘಟನೆ ಸುತ್ತು ಹಲವು ಅನುಮಾನ: ಲಾರಿಯಲ್ಲಿ ದೊರೆತ ಹಣ ಯಾರಿಗೆ ಸೇರಿದ್ದು, ಹಣವನ್ನು ಯಾರಿಗೂ ತಿಳಿಯದೆ ಹಾಗೆ ಟೊಮೆಟೋ ಬಾಕ್ಸ್‌ಗಳಲ್ಲಿ ಸಾಗಿಸುವ ಉದ್ದೇಶವೇನು? ಹಿಂದಿನ ದಿನಗಳಲ್ಲಿಯೂ ಈ ರೀತಿ ಹಣ ಸಾಗಾಣೆ ಮಾಡುತ್ತಿದ್ದರಾ? ಕಳ್ಳದಾರಿಯಲ್ಲಿ ಹಣ ಸಾಗಿಸುವ ಅವಶ್ಯವಾದರೂ ಏನು? ಎಂಬ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಟೊಮೆಟೋ ವ್ಯಾಪಾರಸ್ಥರು ಸಕ್ರಮವಾಗಿ ತೆರಿಗೆ ಪಾವತಿಸದೆ ಸರ್ಕಾರದ ಕಣ್ಣಿಗೆ ಮಣ್ಣೆರಚಿ ತಮ್ಮಗೆ ಬರುವ ಲಾಭ ಮತ್ತು ವ್ಯವಹಾರದ ಹಣವನ್ನು ಗುಟ್ಟಾಗಿ ಟೊಮೆಟೋ ಬಾಕ್ಸ್‌ಗಳಲ್ಲಿ ಸಾಗಿಸುತ್ತಿರಬಹುದು ಎಂಬ ಹಲವು ರೀತಿಯಲ್ಲಿ ಸಾರ್ವಜನಿಕರು ಚರ್ಚಿಸುತ್ತಿದ್ದಾರೆ.

ಟಾಪ್ ನ್ಯೂಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.