ಶಾಸಕರ ಮಧ್ಯಸ್ಥಿಕೆ: ಆಹಾರ ಧಾನ್ಯ ಎತ್ತುವಳಿ

ಶಿವಶಂಕರ ರೆಡ್ಡಿ ಮಧ್ಯಸ್ಥಿಕೆ, ನ್ಯಾಯಬೆಲೆ ಅಂಗಡಿ ಮಾಲೀಕರು-ಅಧಿಕಾರಿಗಳ ಮಧ್ಯೆದ ಸಂಘರ್ಷ ಇತ್ಯರ್ಥ

Team Udayavani, Nov 9, 2020, 4:30 PM IST

ಶಾಸಕರ ಮಧ್ಯಸ್ಥಿಕೆ: ಆಹಾರ ಧಾನ್ಯ ಎತ್ತುವಳಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿ ನಲ್ಲಿ ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರು ಮತ್ತು ಆಹಾರ ಇಲಾಖೆಯ ಅಧಿಕಾರಿಗಳ ನಡುವೆ ಭುಗಿಲೆದ್ದಿರುವ ವಿವಾದವನ್ನು ಶಾಸಕ ಎನ್‌.ಎಚ್‌. ಶಿವಶಂಕರ್‌ರೆಡ್ಡಿ ಅವರು ಇತ್ಯರ್ಥ ಮಾಡಿದ್ದು, ಶಾಸ ಕರ ಸಲಹೆ ಮೇರೆಗೆ ಅಂಗಡಿ ಮಾಲೀಕರು ಗೋದಾಮಿನಿಂದ ಆಹಾರಧಾನ್ಯವನ್ನು ಎತ್ತುವಳಿ ಮಾಡುತ್ತಿದ್ದಾರೆ.

ಸಮಸ್ಯೆ ಇತ್ಯರ್ಥಕ್ಕೆ ದೌಡು: ಗೌರಿಬಿದನೂರು ತಾಲೂಕಿನಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಅಂಗಡಿ ಮಾಲೀಕರ ಮಧ್ಯೆ ಸಂಘರ್ಷ ತಾರಕಕ್ಕೇರಿ ಸಗಟು ಗೋದಾಮಿನಿಂದ ಪಡಿತರ ಎತ್ತುವಳಿ ಮಾಡಲು ನಿರಾಕರಿಸಿದ 10 ಸರ್ಕಾರಿ ನ್ಯಾಯಬೆಲೆಅಂಗಡಿ ಮಾಲೀಕರ ಪರವಾನಿಗೆಯನ್ನು ಆಹಾರ ಇಲಾಖೆಯ ಉಪನಿರ್ದೇಶಕಿ ಸವಿತಾ ಅಮಾನತು ಗೊಳಿಸಿರುವ ಹಿನ್ನೆಲೆಯಲ್ಲಿ ಶಾಸಕ ಶಿವಶಂಕರ್‌ರೆಡ್ಡಿ ಮಧ್ಯ ಪ್ರವೇಶಿಸಿ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಿದ್ದಾರೆ.

ಗೋದಾಮಿನಿಂದ ಎತ್ತುವಳಿ: ನಿಗದಿತ ಸಮಯದಲ್ಲಿ ಆಹಾರಧಾನ್ಯಗಳನ್ನು ಎತ್ತುವಳಿ ಮಾಡಿಲ್ಲ ಎಂಬಕಾರಣಕ್ಕೆ 10 ಅಂಗಡಿ ಮಾಲೀಕರ ಪರವಾನಿಗೆ ರದ್ದುಗೊಳಿಸಿರುವ ಆದೇಶ ವಾಪಸ್ಸು ಪಡೆಯಬೇಕೆಂದುಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಅಧಿಕಾರಿಗಳು ಹಾಗೂ ಮಾಲೀಕರು ಪರಸ್ಪರ ಸಹಕಾರದಿಂದ ಬಡವರಿಗೆ ಸರ್ಕಾರ ನೀಡುತ್ತಿರುವ ಆಹಾರಧಾನ್ಯಗಳನ್ನು ವಿತರಿಸಲು ಕ್ರಮ ಕೈಗೊಳ್ಳ ಬೇಕೆಂದು ಸಲಹೆ ನೀಡಿದ್ದಾರೆ.ಇದರಿಂದ ಮನಪರಿವರ್ತನೆ ಮಾಡಿಕೊಂಡಿರುವ ಮಾಲೀಕರು ಗೋದಾಮಿನಿಂದ ಆಹಾರಧಾನ್ಯ ಎತ್ತುವಳಿ ಮಾಡಲು ಮುಂದಾಗಿದ್ದಾರೆ.

ಖಡಕ್‌ ನಿರ್ಧಾರ: 10 ಅಂಗಡಿಗಳ ಪರವಾನಿಗೆ ಅಮಾನತ್ತುಗೊಳಿಸಿದ್ದ ವರದಿಯೂ ನ.8ರಂದು “ಉದಯವಾಣಿ’ ಸಮಗ್ರ ವರದಿ ಪ್ರಕಟಿಸಿದ್ದರಿಂದ ಜಿಲ್ಲೆಯಲ್ಲಿ ಸಂಚಲನಕ್ಕೆ ಕಾರಣವಾಗಿತ್ತು. ಆಹಾರ ಇಲಾಖೆ ಸಚಿವ ಗೋಪಾಲಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಾಮಾಜಿಕ ಜಾಲತಾಣ ಮೂಲಕ ಗಮನ ಸೆಳೆಯುವಂತಹ ಕೆಲಸ ಮಾಡಲಾಗಿದೆ. ಒಟ್ಟಾರೆ ಆಹಾರ ಇಲಾಖೆಯ ಉಪ ನಿರ್ದೇಶಕರು ಕೈಗೊಂಡ ಖಡಕ್‌ ನಿರ್ಧಾರದಿಂದ ಬಿರುಗಾಳಿ ಎಬ್ಬಿಸಿದೆ.

ಅಮಾನತು ಆದೇಶ ಹಿಂಪಡೆದಿಲ್ಲ: ಸವಿತಾ :  ಗೋದಾಮಿನಿಂದ ಆಹಾರಧಾನ್ಯಗಳನ್ನು ಎತ್ತುವಳಿ ಮಾಡಲು ನಿರ್ಲಕ್ಷ್ಯ ವಹಿಸಿರುವ10 ಸರ್ಕಾರಿ ನ್ಯಾಯಬೆಲೆ ಅಂಗಡಿಗಳ ಪರವಾನಿಗೆ ಅಮಾನತುಗೊಳಿಸಿದ್ದೇವೆ. ಪಡಿತರ ಚೀಟಿದಾರರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಸುಮಾರು27 ಅಂಗಡಿ ಮಾಲೀಕರು ಆಹಾರಧಾನ್ಯಗಳನ್ನು ಎತ್ತುವಳಿ ಮಾಡಿದ್ದಾರೆ ಎಂದು ಆಹಾರ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ಉಪನಿರ್ದೇಶಕಿ ಪಿ.ಸವಿತಾ ತಿಳಿಸಿದರು. ಈ ಸಂಬಂಧ ಉದಯವಾಣಿಗೆ ಪ್ರತಿಕ್ರಿಯಿಸಿದ ಅವರು,ಕ್ಷೇತ್ರದ ಶಾಸಕರು ಸಮಸ್ಯೆಕುರಿತು ಸಮಾಲೋಚನೆ ನಡೆಸಿದ್ದಾರೆ. ಜಿಲ್ಲಾಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಅವರ ಆದೇಶದ ಮೇರೆಗೆ ಮುಂದಿನಕ್ರಮಕೈಗೊಳ್ಳುತ್ತೇವೆ. ಪ್ರಸ್ತುತ ಅಮಾನತ್ತುಗೊಳಿಸಿರುವ ಆದೇಶವನ್ನು ವಾಪಸ್ಸು ಪಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಅಧಿಕಾರಿಗಳಿಂದ ಸಂಘ ವಿಭಜಿಸುವ ಹುನ್ನಾರ :  ಕ್ಷೇತ್ರದ ಶಾಸಕರ ಸಲಹೆ ಮೇರೆಗೆ ಗೋದಾಮಿನಿಂದ ಆಹಾರಧಾನ್ಯಗಳನ್ನು ಎತ್ತುವಳಿ ಮಾಡಿ ನಾಗರಿಕರಿಗೆ ವಿತರಿಸಲುಕ್ರಮಕೈಗೊಂಡಿದ್ದೇವೆ. ಸರ್ಕಾರಿ ನ್ಯಾಯಬೆಲೆ ಅಂಗಡಿಗಳ ಮಾಲೀಕರು ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಅಸಭ್ಯವಾಗಿ ವರ್ತಿಸಿಲ್ಲ. ಜೊತೆಗೆ ಅವಹೇಳನೆ ಸಹ ಮಾಡಿಲ್ಲ ಎಂದು ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ರಾಮಚಂದ್ರಪ್ಪ ತಿಳಿಸಿದರು. ಈ ಸಂಬಂಧ ಉದಯವಾಣಿಗೆ ಪ್ರತಿಕ್ರಿಯಿಸಿದ ಅವರು, ಆಹಾರ ಇಲಾಖೆಯ ಅಕಾರಿಗಳ ಕಾರ್ಯವೈಖರಿ ವಿರೋಧಿಸಿದ್ದೇವೆ. ಅಧಿಕಾರಿಗಳು ಸಂಘವನ್ನು ಒಡೆಯುವ ಹುನ್ನಾರ ನಡೆಸಿದ್ದಾರೆ. ಸಾರ್ವಜನಿಕರಿಗೆ ತೊಂದರೆ ಆಗಬಾರದೆಂದು ಆಹಾರಧಾನ್ಯ ಎತ್ತುವಳಿ ಮಾಡಿದ್ದೇವೆ ಎಂದು ತಿಳಿಸಿದರು.

25 ಅಂಗಡಿ ಮಾಲೀಕರರಿಂದ ಎತ್ತುವಳಿ :  ಅಂಗಡಿ ಮಾಲೀಕರ ಪರವಾನಿಗೆ ಅಮಾನತುಗೊಳಿಸಿದ ಬಳಿಕ ಶಾಸಕರ ಮಧ್ಯೆ ಪ್ರವೇಶದಿಂದ ಸಮಸ್ಯೆ ಇತ್ಯರ್ಥವಾಗುವ ಲಕ್ಷಣಗಳುಕಂಡು ಬರುತ್ತಿದ್ದು, ಈಗಾಗಲೇ ಸುಮಾರು25 ರಿಂದ27 ಮಂದಿಗೆ ಗೋದಾಮಿನಿಂದ ಆಹಾರ ಧಾನ್ಯಗಳನ್ನು ಎತ್ತುವಳಿ ಮಾಡಿದ್ದಾರೆ ಎಂದು ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ. ಗೌರಿಬಿದನೂರು ತಾಲೂಕಿನಲ್ಲಿ111 ಸರ್ಕಾರಿ ನ್ಯಾಯಬೆಲೆ ಅಂಗಡಿಗಳಿದ್ದು, ಮುಂದಿನ ವಾರದೊಳಗೆ ಎಲ್ಲಾ ಅಂಗಡಿ ಮಾಲೀಕರು ಆಹಾರಧಾನ್ಯವನ್ನು ಎತ್ತುವಳಿ ಮಾಡುವ ಸಾಧ್ಯತೆಯಿದೆ.

ಆಹಾರ ಇಲಾಖೆ ಅಧಿಕಾರಿಗಳು ಮತ್ತು ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರ ಸಭೆ ನಡೆಸಿ ಸಮಸ್ಯೆ ಇತ್ಯರ್ಥ ಮಾಡಿದ್ದೇನೆ. ಅಂಗಡಿಗಳ ಪರವಾನಿಗೆ ಅಮಾನತು ಆದೇಶ ವಾಪಸ್ಸು ಪಡೆಯಲು ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕ್ಷೇತ್ರದಲ್ಲಿ ಬಡವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿಕ್ರಮ ಕೈಗೊಳ್ಳಲಾಗಿದೆ. ಎನ್‌.ಎಚ್‌.ಶಿವಶಂಕರ್‌ರೆಡ್ಡಿ, ಶಾಸಕರು ಗೌರಿಬಿದನೂರು ಕ್ಷೇತ್ರ

ಟಾಪ್ ನ್ಯೂಸ್

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.