ಅಕ್ರಮವಾಗಿ ರಕ್ತ ಚಂದನ ತುಂಡುಗಳ ಸಾಗಾಟ; ಆರೋಪಿಗಳನ್ನು ಬಂಧಿಸಿದ ಅರಣ್ಯ ಸಿಬಂದಿ
Team Udayavani, Oct 22, 2020, 8:32 PM IST
ಚಿಕ್ಕಬಳ್ಳಾಪುರ : ಆಂಧ್ರ ಪ್ರದೇಶದಿಂದ ಅಕ್ರಮವಾಗಿ ರಕ್ತ ಚಂದನದ ತುಂಡುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಗಳು ಅರಣ್ಯ ಇಲಾಖೆಯ ಅಧಿಕಾರಿಗಳಿಂದ ತಪ್ಪಿಸಿಕೊಳ್ಳಲು ಹೋಗಿ ವಾಹನ ಉರುಳಿ ಒಬ್ಬ ಕಾಲು ಮುರಿದುಕೊಂಡು ಮತ್ತೊಬ್ಬ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 7ರ ದೊಡ್ಡಪೈಲಗುರ್ಕಿ ಸಮೀಪ ಸಂಭವಿಸಿದೆ.
ಅರಣ್ಯ ಇಲಾಖೆಯ ಅಧಿಕಾರಿಗಳ ಕಾರ್ಯಚರಣೆಯಿಂದ ಭಯ ಭೀತಗೊಂಡು ವಾಹನ ಹಳ್ಳಕ್ಕೆ ಉರುಳಿದ ಪರಿಣಾಮ ವಾಹನದಲ್ಲಿದ್ದ ಆಂದ್ರಪ್ರದೇಶದ ಕಡಪ ಜಿಲ್ಲೆಯ ಮುದ್ದಿರೆಡ್ಡಿ ನಾಯಕ್ ಎಂಬಾತನಿಗೆ ಕಾಲಿಗೆ ಪೆಟ್ಟು ಬಿದ್ದಿದ್ದು ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರದ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಮತ್ತೊಬ್ಬ ಆರೋಪಿ ಕೋಲಾರ ಜಿಲ್ಲೆಯ ಕಟ್ಟಿಕೇನಹಳ್ಳಿಯ ಬೇಗ್ ಉರುಫ್ ಬಾಷ ಎಂಬಾತನನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.
ಸಾರ್ವಜನಿಕರಿಂದ ಬಂದ ಖಚಿತ ಮಾಹಿತಿಯೊಂದಿಗೆ ಡಿ.ಎಫ್.ಓ ಅರ್ಸಲನ್ ಅವರ ಮಾರ್ಗದರ್ಶನದಲ್ಲಿ ಆರ್‍ಎಫ್‍ಓ ತನ್ವೀರ್ ಅಹಮದ್ ಮತ್ತು ಸಿಬ್ಬಂದಿ ವೆಂಕಟೇಶ್, ಅವಿನಾಶ್ ಒಳಗೊಂಡ ತಂಡ ಚಿಕ್ಕಬಳ್ಳಾಪುರದ ವಾಪಸಂದ್ರದ ಬಳಿ ವಾಹನವನ್ನು ನಿಲ್ಲಿಸಲು ಸೂಚಿಸಿದಾಗ ಅದನ್ನು ಲೆಕ್ಕಿಸದೇ ಮುಂದೆ ಸಾಗಿದ್ದಾರೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಕಾರ್ಪಿಯೊ ವಾಹನವನ್ನು ಹಿಂಬಾಲಿಸಿದ್ದಾರೆ ಈ ವೇಳೆಯಲ್ಲಿ ಆರೋಪಿಗಳ ವಾಹನ ಹಳ್ಳದಲ್ಲಿ ಉರುಳಿ ಬಿದ್ದಿದೆ ಇದರಿಂದ ಒಬ್ಬನ ಕಾಲು ಗಾಯಗೊಂಡಿದೆ ಮತ್ತೊಬ್ಬ ಪಾರಾಗಿದ್ದಾನೆ.
ನಂಬರ್ ಪ್ಲೇಟ್‍ಗಳ ಬದಲಾವಣೆ: ಆಂಧ್ರದಿಂದ ಅಕ್ರಮವಾಗಿ ರಕ್ತ ಚಂದವನ್ನು ಸಾಗಾಣಿಕೆ ಮಾಡಿ ಸಿಕ್ಕಿ ಬಿದ್ದಿರುವ ಆರೋಪಿಗಳ ವಾಹನದಲ್ಲಿ ಆಂಧ್ರಪ್ರದೇಶದ ಸಂಖ್ಯೆಗಳನ್ನು ಹೊಂದಿರುವ ನಂಬರ್ ಪ್ಲೇಟ್‍ಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿಗಳು ಕರ್ನಾಟಕದಲ್ಲಿ ಮತ್ತು ಆಂಧ್ರದಲ್ಲಿ ಪ್ರತ್ಯೇಕ ನಂಬರ್ ಪ್ಲೇಟ್‍ಗಳನ್ನು ಬಳಸಿ ವಾಹನ ಚಲಾಯಿಸುತ್ತಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.