ಕೈ ಸರ್ಕಾರದಲ್ಲಿ ಈಡೇರುತ್ತಾ ಜಿಲ್ಲಾ ಗೆಜೆಟಿಯರ್‌ ಕನಸು!

Team Udayavani, Jul 18, 2023, 3:52 PM IST

ಕೈ ಸರ್ಕಾರದಲ್ಲಿ ಈಡೇರುತ್ತಾ ಜಿಲ್ಲಾ ಗೆಜೆಟಿಯರ್‌ ಕನಸು!

ಚಿಕ್ಕಬಳ್ಳಾಪುರ: ಜಿಲ್ಲೆಯ ಜನ ಜೀವನ, ಆಡಳಿತ ರಾಜಕೀಯ ಹೀಗೆ ವಿವಿಧ ಕ್ಷೇತ್ರಗಳ ಸಮಗ್ರತೆಯ ಬಗ್ಗೆ ಮಾಹಿತಿ ಒದಗಿಸುವ ಗೆಜೆಟಿಯರ್‌ ರಚನೆ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದು, ಕಾಂಗ್ರೆಸ್‌ ಸರ್ಕಾರದಲ್ಲಿ ಆದರೂ ಜಿಲ್ಲೆಗೆ ಅವಶ್ಯಕವಾಗಿರುವ ಗೆಜೆಟಿಯರ್‌ ಕನಸು ಈಡೇರುತ್ತಾ ಎಂಬುದನ್ನು ಕಾದು ನೀಡುವಂತಾಗಿದೆ.

ಹೌದು, ಕೋಲಾರ ಜಿಲ್ಲೆಯ ಭಾಗವಾಗಿದ್ದ ಚಿಕ್ಕಬಳ್ಳಾಪುರ ಉಪ ವಿಭಾಗ 2007 ರಲ್ಲಿ ಪ್ರತ್ಯೇಕವಾಗಿ ಜಿಲ್ಲೆಯಾಗಿ ರಚನೆಗೊಂಡು ಒಂದೂವರೆ ದಶಕ ಕಳೆದಿದೆ. ಆದರೆ ಇಲ್ಲಿವರೆಗೂ ಕೂಡ ಜಿಲ್ಲೆಯ ಸಮಗ್ರ ಚಿತ್ರಣವನ್ನು ಕಟ್ಟಿಕೊಡುವ ಗೆಜೆಟಿಯರ್‌ಗೆ ಇನ್ನೂ ಕಾಲ ಕೂಡಿ ಬಾರದೇ ಇರುವುದು ಮಾತ್ರ ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಬೇಸರ ಮೂಡಿಸಿದೆ.

ಏನಿದು ಗೆಜೆಟಿಯರ್‌?: ಜಿಲ್ಲೆಯ ಭೌಗೋಳಿಕ ಲಕ್ಷಣಗಳಿಂದ ಹಿಡಿದು ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ, ಆರೋಗ್ಯ, ಉದ್ಯೋಗ ವಿಚಾರಗಳ ಬಗ್ಗೆ ಅಂಕಿ, ಅಂಶಗಳೊಂದಿಗೆ ಚಿತ್ರಗಳ ಸಮೇತ ಅಲ್ಲಿನ ಜನ ಜೀವನ ಬಗೆ, ಆಚರಿಸುವ ಕಲೆ, ಸಂಸ್ಕೃತಿ, ಸಂಪ್ರದಾಯ, ಪಾಲಿಸುವ ಆಚಾರ, ವಿಚಾರ, ಜಾತ್ರೆ, ಸಂತೆ, ಶೈಕ್ಷಣಿಕ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಗ್ರಾಮಗಳು, ಜಾತಿ ಜನ ಸಮುದಾಯಗಳ ಆಚರಣೆಗಳ ಬಗ್ಗೆ ಸಮಗ್ರವಾಗಿ ವಿವರಗಳನ್ನು ದಾಖಲಿಸುವ ಮೂಲಕ ಜಿಲ್ಲೆಯ ಜನ ಜೀವನದ ಕುರಿತು ಸಮಗ್ರವಾದ ಚಿತ್ರಣವನ್ನು ಕಟ್ಟಿ ಕೊಟ್ಟು ಪರಿಚಯಿಸುವುದೇ ಗೆಜೆಟಿಯರ್‌ ಉದ್ದೇಶ. ಆದರೆ, ಗೆಜೆಟಿಯರ್‌ ಜಿಲ್ಲೆಯಾಗಿ ಚಿಕ್ಕಬಳ್ಳಾಪುರ 15 ವರ್ಷ ಕಳೆದರೂ ಇನ್ನೂ ಮುದ್ರಣಗೊಂಡಿಲ್ಲ. ಹೀಗಾಗಿ ಜಿಲ್ಲೆಗೆ ಹೊಸದಾಗಿ ಬರುವ ಅಧಿಕಾರಿಗಳಿಗೆ ಜಿಲ್ಲೆಯ ಬಗ್ಗೆ ಸಮಗ್ರವಾಗಿ ತಿಳಿದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಜಿಲ್ಲೆಗೆ ಯಾವುದೇ ಅಧಿಕಾರಿ ಬಂದರೂ ಗೆಜೆಟಿಯರ್‌ ನ್ನು ಓದಿ ಬಳಿಕ ತಮ್ಮ ಕೆಲಸ ಕಾರ್ಯಗಳನ್ನು ಆರಂಭಿಸುವುದು ವಾಡಿಕೆ. ಆದರೆ ಜಿಲ್ಲೆಯ ಪಾಲಿಗೆ ಗೆಜೆಟಿಯರ್‌ ಕೈಗೂಡದೇ ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಕಾರ್ಯಾಗಾರ ನಡೆಸಿ ಸುಮ್ಮನಾದರು: ಈ ಹಿಂದೆ ಜಿಲ್ಲೆಯಲ್ಲಿ ಗೆಜೆಟಿಯರ್‌ ರಚನೆಗೆ ಜಿಲ್ಲಾಡಳಿತ ಭವನದಲ್ಲಿ ಜಿಲ್ಲೆಯ ಲೇಖಕರ, ಚಿಂತಕರ, ಸಾಹಿತಿಗಳ, ಬರಹಗಾರರ, ಕಾಲೇಜು ಉಪನ್ಯಾಸಕರ ಸಭೆ ಕರೆದು ಗೆಜೆಟಿಯರ್‌ ರಚನೆ ಬಗ್ಗೆ ಕಾರ್ಯಾಗಾರ ನಡೆಯಿತು. ಆದರೆ ಕೆಲಸ ಕಾರ್ಯಗಳು ಮಾತ್ರ ಇಲ್ಲಿವರೆಗೂ ಈಡೇರದೇ ಜಿಲ್ಲೆಯ ಪಾಲಿಗೆ ಇನ್ನೂ ಗೆಜೆಟಿಯರ್‌ ಬರೀ ಕನಸಾಗಿಯೇ ಉಳಿದಿದ್ದು, ಬಿಡುಗಡೆ ಭಾಗ್ಯ ಯಾವಾಗ ಎಂಬುದು ಯಕ್ಷಪ್ರಶ್ನೆಯಾಗಿದೆ.

ಜಿಲ್ಲೆಯ ಗೆಜೆಟಿಯರ್‌ ರಚನೆ ಬಗ್ಗೆ ಸಾಕಷ್ಟು ಜಬ್ದಾವಾರಿ ನನಗೆ ವಹಿಸಿದ್ದರು. ಆದರೆ ಕಾರಣಾಂತರಗಳಿಂದ ಗೆಜೆಟಿಯರ್‌ನ್ನು ಕಾಲಮಿತಿಯೊಳಗೆ ತರಲು ಸಾಧ್ಯವಾಗಿಲ್ಲ. ಗೆಜೆಟಿಯರ್‌ ರಚನೆಗೆ ಪೂರಕವಾದ ಮಾಹಿತಿಯನ್ನು ಈಗಾಗಲೇ ಸಂಗ್ರಹಿಸಲಾಗಿದೆ. ಆದರೆ ಅಂತಿಮವಾಗಿ ತಿದ್ದುಪಡಿಯಾಗಿ ಗೆಜೆಟಿಯರ್‌ ಮುದ್ರಣಗೊಳ್ಳಬೇಕಿದೆ. ಒಂದೆರೆಡು ತಿಂಗಳಲ್ಲಿ ಗೆಜೆಟಿಯರ್‌ ಮುದ್ರಣಗೊಳ್ಳುವ ನಿರೀಕ್ಷೆ ಇದೆ. ●ಡಾ.ಕೋಡಿರಂಗಪ್ಪ, ಕಸಾಪ ಜಿಲ್ಲಾಧ್ಯಕ್ಷರು, ಚಿಕ್ಕಬಳ್ಳಾಪುರ

ಜಿಲ್ಲೆಗೆ ಸಂಬಂಧಿಸಿದಂತೆ ಗೆಜೆಟಿ ಯರ್‌ ರಚನೆ ಬಗ್ಗೆ ಸಂಬಂಧಪಟ್ಟ ಅಧಿಕಾರಿ ಗಳೊಂದಿಗೆ ಚರ್ಚೆ ನಡೆಸಿ ಗೆಜೆಟಿಯರ್‌ ಸಿದ್ಧಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ●ಪಿ.ಎನ್‌.ರವೀಂದ್ರ, ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ

-ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.