Chikkaballapur; ಮಾಜಿ ಸಚಿವ ಶಿವಶಂಕರ ರೆಡ್ಡಿ ಬಿಜೆಪಿಗೆ?
Team Udayavani, Feb 19, 2024, 11:11 PM IST
ಚಿಕ್ಕಬಳ್ಳಾಪುರ: ಮಾಜಿ ಸಚಿವ ಗೌರಿಬಿದನೂರಿನ ಎನ್.ಎಚ್.ಶಿವಶಂಕರ ರೆಡ್ಡಿಗೆ ಬಿಜೆಪಿ ಗಾಳ ಹಾಕಿದೆಯೆಂಬ ಮಾತು ಬಲವಾಗಿ ಕೇಳಿ ಬರುತ್ತಿದ್ದು, ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ರೆಡ್ಡಿ ಬಿಜೆಪಿ ಸೇರ್ಪಡೆ ವಿಚಾರ ಜಿಲ್ಲೆಯ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಕೆ.ಎಚ್.ಪುಟ್ಟಸ್ವಾಮಿ ಗೌಡ ವಿರುದ್ಧ ಸೋತ ಬಳಿಕ ಎನ್.ಎಚ್.ಶಿವಶಂಕರ ರೆಡ್ಡಿ ಕಾಂಗ್ರೆಸ್ನಿಂದ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಟ್ಟರೆ ಸ್ಪರ್ಧಿಸುವುದಾಗಿ ಹೇಳಿಕೊಂಡಿದ್ದರು. ಆದರೆ ಈಗ ಬಿಜೆಪಿ ನಾಯಕರು ಅವರಿಗೆ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡುವ ಭರವಸೆ ನೀಡಿದ್ದಾರೆ ಎನ್ನಲಾಗುತ್ತಿದೆ.
ವರ್ಗಾವಣೆ, ನಿಗಮ ಮಂಡಳಿ, ನಾಮ ನಿರ್ದೇಶನಗಳಲ್ಲಿ ಪಕ್ಷೇತರ ಶಾಸಕ ಪುಟ್ಟಸ್ವಾಮಿ ಗೌಡ ಬೆಂಬಲಿಗರಿಗೆ ಕಾಂಗ್ರೆಸ್ ನಾಯಕರು ಹೆಚ್ಚು ಅವಕಾಶ ಕಲ್ಪಿಸುತ್ತಿರುವುದು ಶಿವಶಂಕರ ರೆಡ್ಡಿ ಅವರನ್ನು ಕೆರಳಿಸಿದೆ ಎನ್ನಲಾಗಿದೆ. ರಾಜ್ಯಸಭಾ ಚುನಾವಣೆ ಬಳಿಕ ಪ್ರತಿಕ್ರಿಯಿಸುವುದಾಗಿ ರೆಡ್ಡಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!
Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ
Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್ಗೆ 1.22 ಕೋಟಿ ದಂಡ
Chikkaballapur: ಕೈ ಚೆಲ್ಲಿದ ಜನಪ್ರತಿನಿಧಿಗಳು: ಸುಂಕ ವಸೂಲಿಗೆ ನಗರಸಭೆ ಟೆಂಡರ್!
COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Channapatna By-Election: ಯೋಗೇಶ್ವರ್ ಎನ್ಡಿಎ ಅಭ್ಯರ್ಥಿ?
Belagavi:ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…
Gujarat: ನಕಲಿ ಪೊಲೀಸ್ ಆಯ್ತು, ಅರೆಸ್ಟ್ ಆಯ್ತು.. ಈಗ ನಕಲಿ ಕೋರ್ಟ್!
Hockey: ಜರ್ಮನಿ ವಿರುದ್ಧ “ಪ್ಯಾರಿಸ್ ಪ್ರತಿಕಾರ’ಕ್ಕೆ ಸಿದ್ಧತೆ
IT: ಈ ವರ್ಷದ ಮೊದಲಾರ್ಧದಲ್ಲಿ ಅಗ್ರ 5 ಐಟಿ ಸಂಸ್ಥೆಗಳಲ್ಲಿ 13 ಸಾವಿರ ನೇಮಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.