ಕೋವಿಡ್ 3ನೇ ಅಲೆಯ ಭೀತಿ ನಡುವೆಯೂ ಸುರಸದ್ಮಗಿರಿ ಪ್ರವಾಸಿಗರಿಂದ ಫುಲ್
Team Udayavani, Aug 1, 2021, 6:49 PM IST
ಗುಡಿಬಂಡೆ: ಕೋವಿಡ್ 3ನೇ ಅಲೆಯ ಆತಂಕದ ನಡುವೆಯೂ ವಾರಾಂತ್ಯದಲ್ಲಿ ಸುರಸದ್ಮಗಿರಿ ಬೆಟ್ಟಕ್ಕೆ ಬರುವ ಪ್ರವಾಸಿಗರು ಸಂಖ್ಯೆ ಕಡಿಮೆಯಾಗಿಲ್ಲ.
ಬೆಂಗಳೂರಿಗೆ ಕೂಗಳತೆಯ ದೂರದಲ್ಲಿರುವ ನಂದಿ ಬೆಟ್ಟ ನಂತರದ ಪ್ರವಾಸಿ ತಾಣಗಳಾದ ಗುಡಿಬಂಡೆ ಅಮಾನಿ ಭೈರಸಾಗರ ಮತ್ತು ವಾಟದ ಹೊಸಹಳ್ಳಿ ಕೆರೆ, ಹಾಗೂ ಸುರಸದ್ಮಗಿರಿ ಬೆಟ್ಟ ಒಂದು ದಿನದ ಪ್ರವಾಸಕ್ಕೆ ಹೇಳಿ ಮಾಡಿಸಿದ ಸ್ಥಳಗಳಾಗಿದ್ದು ಶನಿವಾರ ಮತ್ತು ಭಾನುವಾರದಂದು ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.
ಕೋವಿಡ್ 3ನೇ ಅಲೆ ಭೀತಿಯಿದ್ದರು ಪ್ರವಾಸಿಗರು ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಅಮಾನಿಭೈರಸಾಗರ ಕೆರೆ ಮತ್ತು ಸುರಸದ್ಮಗಿರಿ ಬೆಟ್ಟಕ್ಕೆ ಭೇಟಿ ನೀಡುತ್ತಿದ್ದು, ಕೋವಿಡ್ ಮುಕ್ತ ವಾಗಿರುವ ಗುಡಿಬಂಡೆ ತಾಲ್ಲೂಕಿನಲ್ಲಿ ಪುನಃ ಪ್ರಕರಣಗಳು ಹೆಚ್ಚಾಗುವ ಭಯ ಸ್ಥಳೀಯರಲ್ಲಿ ಆವರಿಸಿದೆ.
ಸ್ವಚ್ಛತೆ ಕಾಪಾಡುವಲ್ಲಿ ವಿಫಲ: ವಾರಾಂತ್ಯದಲ್ಲಿ ಸುರಸದ್ಮಗಿರಿ ಬೆಟ್ಟಕ್ಕೆ ಮತ್ತು ಅಮಾನಿಭೈರಸಾಗರ ಕೆರೆಗೆ ಭೇಟಿ ನೀಡುವ ಪ್ರವಾಸಿಗರು ಬಿಸಾಡುವ ಪ್ಲಾಸ್ಟಿಕ್ ಮತ್ತು ಇತರೆ ತ್ಯಾಜ್ಯ ಗಳನ್ನು ಸ್ವಚ್ಛಗೊಳಿಸಲು ಪಟ್ಟಣ ಪಂಚಾಯಿತಿ ಮುಂದಾಗಿಲ್ಲ.
ಪ್ರವಾಸೋದ್ಯಮ ತಾಣ ಮಾಡಲು ಮನವಿ: ಬೆಂಗಳೂರಿಗೆ ಕೂಗಳತೆಯ ದೂರದಲ್ಲಿರುವ ಸುರಸದ್ಮಗಿರಿ ಬೆಟ್ಟ ಮತ್ತು ಅಮಾನಿಭೈರಸಾಗರ ಕೆರೆಯ ಸೌಂದರ್ಯ ಸವಿಯಲು ಪ್ರವಾಸಿಗರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇವುಗಳನ್ನು ಪ್ರವಾಸೋದ್ಯಮ ತಾಣಗಳನ್ನಾಗಿ ಮಾಡುವಂತೆ ಸ್ಥಳೀಯರ ಒತ್ತಾಯವಾಗಿದೆ.
ಪಾರ್ಕಿಂಗ್ ವ್ಯವಸ್ಥೆ ಇಲ್ಲ: ಸುರಸದ್ಮ ಗಿರಿ ಬೆಟ್ಟಕ್ಕೆ ವಾರಾಂತ್ಯದಲ್ಲಿ ನೂರು ಸಂಖ್ಯೆಯಲ್ಲಿ ದ್ವಿಚಕ್ರ ವಾಹನ ಮತ್ತು ಕಾರ್‌ಗಳಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ವಾಹನಗಳ ನಿಲುಗಡೆಗೆ ಸೂಕ್ತ ಸ್ಥಳವಿಲ್ಲದೆ ಪರದಾಡುವಂತಾಗಿದೆ.
ಮೂಲ ಸೌಕರ್ಯಗಳ ಕೊರತೆ: ಇಲ್ಲಿಗೆ ಬರುವ ಪ್ರವಾಸಿಗರಿಗೆ ಪಟ್ಟಣದಲ್ಲಿ ಸರಿಯಾದ ಶೌಚಾಲಯಲದ ವ್ಯವಸ್ಥೆ ಇಲ್ಲದೆ, ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.
ಪ್ರವಾಸೋದ್ಯಮ ಇಲಾಖೆಯ ನಿರ್ಲಕ್ಷ: ಶಾಸಕರು ಅಮಾನಿಬೈರಸಾಗರ ಕೆರೆ ಮತ್ತು ಸುರಸದ್ಮಗಿರಿ ಬೆಟ್ಟ ಅಭಿವೃದ್ದಿಗಾಗಿ ಸುಮಾರು 1.5 ಕೋಟಿ ಅನುದಾನ ಬಿಡುಗಡೆ ಮಾಡಿಸಿ ವರ್ಷಗಳೇ ಕಳೆಯುತ್ತಿದ್ದರು, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಮಾತ್ರ ಜಾಣ ಕುರುಡುತನ ತೋರಿ, ಸ್ಥಳಗಳನ್ನು ಅಭಿವೃದ್ದಿಯಿಂದ ಕುಂಟಿತ ಗೊಳಿಸಿದ್ದಾರೆ.
ಅಮಾನಿಭೈರಸಾಗರ ಕೆರೆ ಮತ್ತು ಸುರಸದ್ಮಗಿರಿ ಬೆಟ್ಟವನ್ನು ಪ್ರವಾಸೋದ್ಯಮ ಇಲಾಖೆಗೆ ಸೇರ್ಪಡೆ ಮಾಡಿಕೊಂಡು ಅಭಿವೃದ್ಧಿ ಪಡಿಸಲು ಸರ್ಕಾರ ಸೂಚಿಸುತ್ತಿದ್ದರು, ಅಧಿಕಾರಿಗಳು ವಿಳಂಭ ದೋರಣೆ ಅನುಸರಿಸುತ್ತಿದ್ದಾರೆ ಎಂದು ಪದ್ಮಾವತಿ, ಬಿ.ಜೆ.ಪಿ ಮುಂಖಡೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.