ಶಿಕ್ಷಣ, ವಿಜ್ಞಾನಕ್ಕೆ ಹಣ ನೀಡಿ ಪ್ರತಿಭೆ ಸೃಷ್ಟಿಸಿ

Team Udayavani, Feb 8, 2018, 3:44 PM IST

chikk.jpg

ಚಿಕ್ಕಬಳ್ಳಾಪುರ: ದೇಶದ ಭವಿಷ್ಯ ಹಳ್ಳಿ ಮಕ್ಕಳ ತಲೆ ಮೇಲಿದ್ದು, ಮಕ್ಕಳಿಗೆ ಉತ್ತಮ ಅವಕಾಶ ಕಲ್ಪಿಸಿದರೆ ದೊಡ್ಡ ಮಟ್ಟದಲ್ಲಿ ಪ್ರತಿಭಾವಂತರಾಗಿ ಹೊರಹೊಮ್ಮು ವುದರಲ್ಲಿ ಅನುಮಾನವಿಲ್ಲ. ಆದರೆ, ಸರ್ಕಾರಗಳು ಶಿಕ್ಷಣ ಹಾಗೂ ವಿಜ್ಞಾನ ಕ್ಷೇತ್ರಗಳಿಗೆ ಕೊಡುವ ಉತ್ತೇ ಜನ, ಬೆಂಬಲ ತೀರಾ ಕಡಿಮೆ ಎಂದು ಖ್ಯಾತ ವಿಜ್ಞಾನಿ, ಭಾರತ ರತ್ನ ಪುರಸ್ಕತ ಸಿ.ಎನ್‌.ಆರ್‌. ರಾವ್‌ ಬೇಸರ ವ್ಯಕ್ತಪಡಿಸಿದರು.

ನಗರದ ಹೊರ ವಲಯದ ಎಸ್‌ ಜೆಸಿಐಟಿ ಕಾಲೇ ಜಿನ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಡಳಿತ ಜಿಲ್ಲೆಯ ವಿದ್ಯಾರ್ಥಿಗಳೊಂದಿಗೆ ಬುಧವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತ ನಾಡಿದರು.

ಕಡಿಮೆ ಉತ್ತೇಜನ: ದೇಶದ ಒಟ್ಟಾರೆ ಜಿಡಿಪಿಯಲ್ಲಿ ಶೇ.2.50 ರಷ್ಟನ್ನು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಬೇಕು. ಆ ಕೆಲಸವನ್ನು
ಸರ್ಕಾರಗಳು ಮಾಡುತ್ತಿಲ್ಲ. ವಿಜ್ಞಾನಕ್ಕೂ ಸಹ ಜಿಡಿಪಿಯಲ್ಲಿ ಕನಿಷ್ಠ ಶೇ.1 ರಷ್ಟು ನೀಡುತ್ತಿಲ್ಲ. ನಮ್ಮ ಸುತ್ತಲೂ ಇರುವ ಏಷ್ಯಾ ರಾಷ್ಟ್ರಗಳಲ್ಲಿ ಶಿಕ್ಷಣ ಹಾಗೂ ವಿಜ್ಞಾನ ಕ್ಷೇತ್ರಕ್ಕೆ ಸಿಗುವ ಉತ್ತೇಜನ, ಬೆಂಬಲಕ್ಕಿಂತ ಭಾರತದಲ್ಲಿ ಅತಿ ಕಡಿಮೆ ಸಿಗುತ್ತಿದೆ.

ನಮ್ಮಲ್ಲಿ ಪರೀಕ್ಷೆಗೆ ಸಿಗುವ ಆದ್ಯತೆ ಶಿಕ್ಷಣಕ್ಕೆ ಸಿಗುತ್ತಿಲ್ಲ. ಕಳ್ಳೇ ಕಾಯಿ ಕೊಟ್ಟರೆ ಕೋತಿಗಳು ಬರು ತ್ತೇವೆ ಎಂಬ ಗಾದೆ ಮಾತು ಇದೆ. ಆದ್ದರಿಂದ ಸರ್ಕಾರ ಗಳು ಶಿಕ್ಷಣ, ವಿಜ್ಞಾನಕ್ಕೆ ಹೆಚ್ಚಿನ ಹಣವನ್ನು ಖರ್ಚು ಮಾಡಿ ಪ್ರತಿಭೆಗಳನ್ನು ತಯಾರಿಸಬೇಕೆಂದರು. 

ಕರ್ನಾ‌ಟಕ ಪ್ರೋತ್ಸಾಹ: ಜೀವನದಲ್ಲಿ ಧೈರ್ಯ ಇರಬೇಕು, ಸಂಗೀತ, ಕಲೆ, ಸಾಹಿತ್ಯ, ಪತ್ರಿಕೋದ್ಯಮ ಏನೇ ಇರಲಿ ಸಣ್ಣ
ವಿಷಯದಲ್ಲಿಯೂ ಮುಂದೆ ಬರಬೇಕು, ಕಷ್ಟಪಟ್ಟು ಒಳ್ಳೆ ಕೆಲಸ ಮಾಡಬೇಕು, ಸಾಧನೆ ಎನ್ನುವುದು ತಪಸ್ಸು ಇದ್ದಂತೆ,
ಇಲ್ಲಿಯೆ ಸ್ವರ್ಗ, ನರಕ ಎರಡು ಇದೆ. ದೇಶದಲ್ಲಿರುವ ಕೋಟ್ಯಂತರ ಮಕ್ಕಳು ಮುಂದೆ ಬರಲು ಅವಕಾಶ ಮಾಡಿಕೊಟ್ಟರೆ ದೇಶದ ಭವಿಷ್ಯ ಉಜ್ವಲಗೊಳ್ಳುತ್ತದೆ. ದೇಶಕ್ಕೆ ಹೋಲಿಸಿದರೆ ಕರ್ನಾಟಕ ಸರ್ಕಾರವೇ ಹೆಚ್ಚು ವಿಜ್ಞಾನ, ತಂತ್ರಜ್ಞಾನಕ್ಕೆ ಪ್ರೋತ್ಸಾಹ ನೀಡುತ್ತಿವೆ ಎಂದರು.

ಸನ್ಮಾನ: ಜಿಲ್ಲಾಡಳಿತ ವಿದ್ಯಾರ್ಥಿಗಳೊಂದಿಗೆ  ಹಮ್ಮಿ ಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿ. ಎನ್‌.ಆರ್‌.ರಾವ್‌ರನ್ನು ಜಿಲ್ಲಾಡಳಿತದ ಪರವಾಗಿ ಸನ್ಮಾನಿಸಲಾಯಿತು.  ಬೆಂಗಳೂರು ಸೂಸೈಡ್‌ ಬ್ಯಾಂಕ್‌ ದೇಶದಲ್ಲಿಯೇ ಬೆಂಗಳೂರು ಸೊಸೈಡ್‌ ಬ್ಯಾಂಕ್‌ ಆಗಿದೆ. ಇಲ್ಲಿನವರಿಗೆ ಹಣದ ಹುಚ್ಚು ಜಾಸ್ತಿ, ಸಂಶೋಧನೆ ಅಂದ್ರೆ ಹಿಂದೆ ಮುಂದೆ ನೋಡುತ್ತಾರೆ. ಹಣದ ಹಿಂದೆ ಬೀಳುವುದು ಜಾಸ್ತಿ, ಹಣ ಜಾಸ್ತಿಯಾದರೆ ಏನು ದಿಕ್ಕು ತೋಚದೇ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಹಳ್ಳಿಯ ಜನರಲ್ಲಿರುವ ಪ್ರತಿಭೆ ಕಲಿಕೆಯ ಆಸಕ್ತಿ ನಗರ ಪ್ರದೇಶದ ಮಕ್ಕಳಗಿಲ್ಲ.
 
ಸರ್ಕಾರಗಳು ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕಲಿಸಬೇಕು. ಮಾತೃಭಾಷೆ ಶಿಕ್ಷಣ ಬಹಳ ಮುಖ್ಯ. ಆದ್ದರಿಂದ ಕನ್ನಡ ಕಲಿಯುವುದು ಅಗತ್ಯ. ಜೊತೆಗೆ ಇಂಗ್ಲಿಷ್‌ ಕೂಡ ಕಲಿಯಬೇಕು. ಕನ್ನಡ ಕಲಿತ ಮಕ್ಕಳಲ್ಲಿ ಸೃಜನಶೀಲತೆ ಹೆಚ್ಚಿರುತ್ತದೆ. ಎಂದು ಸಿಎನ್‌ಆರ್‌ ರಾವ್‌ ತಿಳಿಸಿದರು.

77 ಗೌರವ ಡಾಕ್ಟರೆಟ್‌ ಪದವಿ 26ನೇ ವಯಸ್ಸಿಗೆ ನಾನು ಇಂಡಿ ಯನ್‌ ಸೈನ್ಸ್‌ ಅಕಾಡೆಮಿ ಸದಸ್ಯ ನಾಗಿದ್ದೆ. ದೇಶ, ವಿದೇಶದಲ್ಲಿ ಕೆಲಸ ಮಾಡಲು ಸಾಕಷ್ಟು ಅವಕಾಶಗಳು ಇದ್ದವು. ಆದರೂ ತಾನು ಬೆಂಗಳೂರಿಗೆ ಬಂದು ಕೆಲಸ ಮಾಡಿದೆ. ತಮಗೆ 77 ಗೌರವ ಡಾಕ್ಟರೆಟ್‌ ಪದವಿಗಳು ಸಮ್ಮನೆ ಹುಡುಕಿಕೊಂಡು ಬರಲಿಲ್ಲ. ಯಾವುದೇ ಕ್ಷೇತ್ರವಾಗಲಿ ಕಠಿಣವಾಗಿ ಕಷ್ಟಪಟ್ಟು ಕೆಲಸ ಮಾಡಬೇಕು. ಆಗ ಅವಕಾಶ ಗಳು ಹುಡುಕಿಕೊಂಡು ಬರುತ್ತೇವೆ. ಸಂಶೋಧನೆಗೆ ವಯಸ್ಸು ಅಡ್ಡಿಯಾಗುವುದಿಲ್ಲ. ಆಸಕ್ತಿ, ದೃಢತೆ, ಕಠಿಣ ಪರಿಶ್ರಮ ಬೇಕು. ಆದರೆ, ಬೆಂಗಳೂರಿನ ಹುಡುಗರಲ್ಲಿ ಅದು ಇಲ್ಲ. ಆಸ್ತಕ್ತಿ ಇರುವ ಹಳ್ಳಿ ಮಕ್ಕಳಿಗೆ ಉತ್ತೇಜನ ಸಿಗುತ್ತಿಲ್ಲ ಎಂದು ಸಿ.ಎನ್‌.ಆರ್‌.
ರಾವ್‌ ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.