ರೈತರ ಉತ್ಪನ್ನ ಸರ್ಕಾರ ಖರೀದಿಸಲಿ: ಡಿ.ಕೆ.ಶಿವಕುಮಾರ್
Team Udayavani, Apr 24, 2020, 4:42 PM IST
ಶಿಡ್ಲಘಟ್ಟ: ಕೋಲಾರ-ಚಿಕ್ಕಬಳ್ಳಾಪುರ ಸಹಿತ ರಾಜ್ಯದ ರೈತರು ಬೆಳೆದಿರುವ ತರಕಾರಿ-ಹೂ ಹಣ್ಣುಗಳನ್ನು ಕೇಳುವವರು ಇಲ್ಲದಂತಾಗಿದೆ. ಸರ್ಕಾರ ಕೂಡಲೇ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯ ನಿರ್ವಹಿಸ ಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು.
ಬೆಂಗಳೂರಿನಲ್ಲಿ ಕೆಪಿಸಿಸಿ ಕೋವಿಡ್ -19 ಪರಿಹಾರ ನಿಧಿಗೆ ಶಾಸಕ ವಿ.ಮುನಿಯಪ್ಪ ಅವರಿಂದ 2.5 ಲಕ್ಷ ರೂ. ಪರಿಹಾರದ ಡಿಡಿ ಸ್ವೀಕರಿಸಿ ಮಾತನಾಡಿದ ಅವರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಂತ ರ್ಜಲ ಮಟ್ಟ 1500 ರಿಂದ 1800 ಅಡಿಗೆ ಕುಸಿದಿದೆ. ಆದರೂ ಸಹ ರೈತರು ಬೆಳೆದಿರುವ ತರಕಾರಿ,ದ್ರಾಕ್ಷಿ, ಕ್ಯಾಪ್ಸಿಕಾಂ, ಹೂ ಹಣ್ಣುಗಳು ಕೇಳುವವರು ಇಲ್ಲದಂತಾ ಗಿದೆ. ಇದೇ ಪರಿಸ್ಥಿತಿಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳ ರೈತರು ಅನುಭವಿಸುತ್ತಿದ್ದಾರೆ. ಆದರೆ ಸರ್ಕಾರ ರೈತರು ಎಷ್ಟು ಎಕರೆ ಪ್ರದೇಶದಲ್ಲಿ ಏನು ಬೆಳೆ ಇಟ್ಟಿದ್ದಾರೆ ಎಂಬುದು ಪರಿಶೀಲಿಸಲು ಗೋಜಿಗೆ ಹೋಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಶಾಸಕ ಹಾಗೂ ಮಾಜಿ ಸಚಿವ ವಿ. ಮುನಿಯಪ್ಪ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರು ರಾಜ್ಯದ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ರೈತರ ತೋಟಗಳಿಗೆ ತೆರಳಿ ತರಕಾರಿ ಖರೀದಿಸಿ ಕ್ಷೇತ್ರದ ಜನರಿಗೆ ಉಚಿತವಾಗಿ ವಿತರಿಸಿ ಮಾದರಿ ಸೇವೆ ಮಾಡುತ್ತಿದ್ದಾರೆ. ಸರ್ಕಾರ ಸಹ ಇದೇ ಮಾದರಿಯಲ್ಲಿ ರೈತರು ಬೆಳೆದಿರುವ ಉತ್ಪನ್ನಗಳನ್ನು ಖರೀದಿಸಿ ಜೊತೆಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಕೆವಿಕೆ ನಿರ್ದೇಶಕ ವಿ. ಸುಬ್ರಹ್ಮಣಿ, ಡಿಸಿಸಿ ಅಧ್ಯಕ್ಷ ಕೇಶವರೆಡ್ಡಿ, ಪ್ರಧಾನ ಕಾರ್ಯದರ್ಶಿ ಮಧುಸೂದನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.