ಟೈರ್‌ ಕಳ್ಳರನ್ನು ಹಿಡಿದು ತಂದು ವಾಪಸ್ಸು ಕಳಿಸಿದ್ರು!

ಕಳವು ಪ್ರಕರಣದಲ್ಲಿ ಬಂಧಿಸಿದ್ದರೂ ಪ್ರಕರಣ ದಾಖಲಿಸದೇ ಬಿಟ್ಟಿರುವ ಆರೋಪ

Team Udayavani, May 6, 2020, 2:07 PM IST

ಟೈರ್‌ ಕಳ್ಳರನ್ನು ಹಿಡಿದು ತಂದು ವಾಪಸ್ಸು ಕಳಿಸಿದ್ರು!

ಚಿಕ್ಕಬಳ್ಳಾಪುರ ನಗರ ಠಾಣೆ ಆವರಣದಲ್ಲಿ ಪೇದೆ ಹರೀಶ್‌ ನಿಲ್ಲಿಸಿ ಹೋಗಿರುವ ಲಾರಿಯೊಂದು ಪೊಲೀಸರ ಅಕ್ರಮ ಬಯಲು ಮಾಡಿದೆ.

ಚಿಕ್ಕಬಳ್ಳಾಪುರ: ಬೇಲಿಯೇ ಎದ್ದು ಹೊಲ ಮೇಯ್ದ ಕಥೆ ಇದು. ಲಕ್ಷಾಂತರ ರೂ. ಮೌಲ್ಯದ ಲಾರಿ ಟೈರುಗಳ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಖಚಿತ ಮಾಹಿತಿ ಆಧರಿಸಿ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪಿಎಸ್‌ಐ ಚೇತನ್‌ ಕುಮಾರ್‌ ಮಾರ್ಗದರ್ಶನದಲ್ಲಿ ಠಾಣೆ ಅಪರಾಧ ವಿಭಾಗದ ಪೇದೆಗಳಾದ ಹರೀಶ್‌, ರಮಣಾರೆಡ್ಡಿ ಮತ್ತಿತರ ತಂಡ ಹಲವು ದಿನಗಳ ಹಿಂದೆ ಬಂಧಿಸಿದ್ದು, ತದ ನಂತರ ಪ್ರಕರಣ ದಾಖಲಿಸದೇ ಆರೋಪಿಗಳೊಂದಿಗೆ ಶಾಮೀಲಾಗಿ ಠಾಣೆಯಿಂದ ಬಿಟ್ಟು ಕಳುಹಿಸಿದ್ದಾರೆಂಬ ಗಂಭೀರ ಆರೋಪ ಕೇಳಿ ಬಂದಿದೆ.

ಲಾರಿ ತಂದು ನಿಲ್ಲಿಸಿದ್ದು ಅನುಮಾನ: ಕಳೆದ ಮಾ.23 ರಂದು ಪೇದೆ ಹರೀಶ್‌ ಕೆಎ-40, ಎ.8858 ಹತ್ತು ಚಕ್ರದ ಲಾರಿಯನ್ನು ನಗರ ಠಾಣೆ ಆವರಣದಲ್ಲಿ ತಂದು ನಿಲ್ಲಿಸಿ ಹೋದಾಗ ಮಾಲೀಕರು ಬಂದು ಲಾರಿ ಬಿಡುವಂತೆ ಕೇಳಿದಾಗ ಈ ಟೈರು ಕಳವು ಪ್ರಕರಣ ಬೆಳಕಿಗೆ ಬಂದಿದೆ. ಇಡೀ ಘಟನೆಯ ಪ್ರಮುಖ ಸೂತ್ರಧಾರಿ ಹರೀಶ್‌ ಎಂಬಾತನಾಗಿದ್ದು, ಅದಕ್ಕೆ ಮೇಲಾಧಿಕಾರಿಗಳ ಗಮನಕ್ಕೆ ತರದೇ ಗ್ರಾಮಾಂತರ ಠಾಣೆ ಪಿಎಸ್‌ಐ ಚೇತನ್‌ ಕುಮಾರ್‌ ಟೈರು ಕಳವು ಆರೋಪಿಗಳನ್ನು ಬಂಧಿಸಿ ಠಾಣೆಗೆ ಕರೆ ತಂದು ಬಳಿಕ ಅವರೊಂದಿಗೆ ಶಾಮೀಲಾಗಿ
ಬಿಡುಗಡೆ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ.

ವರದಿ ಕೇಳಿದ ಎಸ್ಪಿ: ಬಂಧಿಸಿದ್ದ ಕಳ್ಳರ ಮೇಲೆ ಯಾವುದೇ ಪ್ರಕರಣ ದಾಖಲಿಸದೇ ಅವರನ್ನು ಠಾಣೆಯಿಂದ ಬಿಡುಗೊಳಿಸಿದ ವಿಷಯದ ಬಗ್ಗೆ ಎಸ್ಪಿ ಜಿ. ಕೆ.ಮಿಥುನ್‌ ಕುಮಾರ್‌ ತನಿಖೆಗೆ  ಆದೇಶಿಸಿದ್ದಾರೆ.

ತನಿಖೆ: ಈ ಕುರಿತು ಉದಯವಾಣಿ, ಎಸ್ಪಿ ಜಿ.ಕೆ. ಮಿಥುನ್‌ ಕುಮಾರ್‌ರನ್ನು ಸಂಪರ್ಕಿಸಿದಾಗ ಅವರು, ಈ ಬಗ್ಗೆ ಮಾಹಿತಿ ನನ್ನ ಗಮನಕ್ಕೂ ಬಂದಿದ್ದು, ತನಿಖೆ ನಡೆಸಲಾಗುತ್ತಿದೆ. ತನಿಖೆ ವರದಿ ಬಂದ ಬಳಿಕ ಸಮಗ್ರ ಮಾಹಿತಿ ತಿಳಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

10-gudibande

Gudibande: ಕಲ್ಯಾಣಿಯಲ್ಲಿ ಬಿದ್ದು ಯುವಕ ಸಾವು

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.