ಬಾಗೇಪಲ್ಲಿಯಲ್ಲಿ ವಿದ್ಯಾರ್ಥಿಗಳಿಗೆ ಸಂಜೆ ತರಗತಿ ಆರಂಭಿಸಿದ ಪದವೀಧರ

ಮಕ್ಕಳು ಬೇಸಿಕ್ಸ್ ಮರೆತಿದ್ದಾರೆಂಬ ಕಳವಳ : ಮಾಡಪಲ್ಲಿ ನರಸಿಂಹಮೂರ್ತಿರಿಂದ  ನಿತ್ಯ 2, 3 ಗಂಟೆ ಪಾಠ

Team Udayavani, Jul 30, 2020, 7:12 PM IST

ಬಾಗೇಪಲ್ಲಿಯಲ್ಲಿ ವಿದ್ಯಾರ್ಥಿಗಳಿಗೆ ಸಂಜೆ ತರಗತಿ ಆರಂಭಿಸಿದ ಪದವೀಧರ

ವಿಶೇಷ ವರದಿ: ಕಾಗತಿ ನಾಗರಾಜಪ್ಪ

ಚಿಕ್ಕಬಳ್ಳಾಪುರ: ಕೋವಿಡ್ 19 ಸಂಕಷ್ಟದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಈ ವರ್ಷದ ಶೈಕ್ಷಣಿಕ ವರ್ಷವನ್ನು ಯಾವಾಗನಿಂದ ಆರಂಭಿಸಬೇಕೆಂಬ ಚಿಂತನೆಯಲ್ಲಿರುವಾಗಲೇ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಾಡಪಲ್ಲಿಯಲ್ಲಿ ಪದವೀಧರರೊಬ್ಬರು ತನ್ನೂರಿನ ಸರ್ಕಾರಿ ಶಾಲಾ ಮಕ್ಕಳು ಬೇಸಿಕ್ಸ್ ಮರೆಯುತ್ತಿದ್ದಾರೆಂದು ಹೇಳಿ ಮಕ್ಕಳಿಗೆ ಪಾಠ ಹೇಳಿಕೊಡಲು ಶುರು ಮಾಡಿದ್ದಾರೆ.

ಹೌದು, ಇಡೀ ಜಿಲ್ಲೆಯಲ್ಲಿ ಅತೀ ಹಿಂದುಳಿದ ತಾಲೂಕಾಗಿರುವ ಬಾಗೇಪಲ್ಲಿಯಲ್ಲಿ ಮೊದಲೇ ಸರ್ಕಾರಿ ಶಾಲಾ ಶಿಕ್ಷಕರ ಕೊರತೆ ಎದ್ದು ಕಾಣುತ್ತಿದೆ. ಶಾಲೆಗಳಿಗೂ ಮೂಲ ಸೌಕರ್ಯ ಅಷ್ಟೆಕಷ್ಟೇ.

ಆದರೆ ಕೋವಿಡ್ 19 ಸಂಕಷ್ಟದ ಹಿನ್ನಲೆಯಲ್ಲಿ ಶಾಲೆಗಳು ಇನ್ನೂ ಆರಂಭಗೊಳ್ಳದಿದ್ದಕ್ಕೆ ನಮ್ಮೂರು ವಿದ್ಯಾರ್ಥಿಗಳು ಬೇಸಿಕ್ಸ್ ಮರೆಯುತ್ತಿದ್ದಾರೆಂಬ ಕಳವಳ ವ್ಯಕ್ತಪಡಿಸಿ ಊರಿನ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ತರಗತಿಗಳನ್ನು ಆರಂಭಿಸುವ ಮೂಲಕ ಗಮನ ಸೆಳೆದಿದ್ದಾರೆ.

ಮಾಡಪಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 20 ಮಕ್ಕಳು ವಿದ್ಯಾಭ್ಯಾಸ  ಮಾಡುತ್ತಿದ್ದಾರೆ. ಸುಮಾರು 5 ವರ್ಷಗಳಿಂದ ಖಾಯಂ ಶಿಕ್ಷಕರಿಲ್ಲದೆ ಅತಿಥಿ ಶಿಕ್ಷಕರಿಂದಲೇ ಶಾಲೆ ನಡೆಸಲಾಗುತ್ತಿದೆ. ಖಾಯಂ ಶಿಕ್ಷಕರನ್ನು ನೇಮಿಸಿ ಎಂಬ ಗ್ರಾಮಸ್ಥರು ಹಕ್ಕೋತ್ತಾಯಕ್ಕೆ ಯಾರು ಸ್ಪಂದಿಸಿಲ್ಲ.

ಶಿಕ್ಷಕರಿಲ್ಲದೇ ವಿದ್ಯಾರ್ಥಿಗಳ ಸಂಖ್ಯೆಯು ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ. ಹೀಗಾಗಿ ಗ್ರಾಮದ ಬಿ.ಎ. ಬಿ.ಎಡ್ ಮುಗಿಸಿರುವ ಜೊತೆಗೆ ಐದು ವರ್ಷಗಳ ಹಿಂದೆ ಶಿಕ್ಷಕರಾಗಿ, ಕಾಲೇಜು ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ್ದ ನರಸಿಂಹಮೂರ್ತಿ ಈಗ ತಮ್ಮನೂರು ಶಾಲಾ ಮಕ್ಕಳಿಗೆ ಮೇಷ್ಟ್ರ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ದಿನವೀಡಿ ತನ್ನ ಕೆಲಸ, ಕಾರ್ಯಗಳಲ್ಲಿ ತೊಡಗಿಸಿ ಸಂಜೆ 2 ರಿಂ 3 ಗಂಟೆಗಳ ಕಾಲ ಗ್ರಾಮದ ವಿದ್ಯಾರ್ಥಿಗಳನ್ನು ಶಾಲೆಯಲ್ಲಿಯೇ ಸೇರಿಸಿ ಪಾಠ, ಪ್ರವಚನಗಳನ್ನು ಮಾಡುತ್ತಿದ್ದಾರೆ. ಮತ್ತು ಹೀಗೆ ಮಾಡುವ ಸಂದರ್ಭದಲ್ಲಿ ಮಕ್ಕಳೆಲ್ಲರೂ ಮಾಸ್ಕ್ ಧರಿಸಿ ಸೂಕ್ತ ಸಾಮಾಜಿಕ ಅಂತರವನ್ನು ಪಾಲಿಸುವುದನ್ನು ಮರೆತಿಲ್ಲ.

ನರಸಿಂಹಮೂರ್ತಿ ಅವರ ಈ ಕಾರ್ಯಕ್ಕೆ ಗ್ರಾಮದ ಪೋಷಕರು ಸಂತಸ ಪಡುತ್ತಿದ್ದಾರೆ. ಗ್ರಾಮದಲ್ಲಿ ಅಜ್ಜಿ ಮನೆಗೆ ಬಂದಿರುವ ಬೇರೆ ಊರಿನ ಮೊಮ್ಮಕ್ಕಳು, ಹಿರಿಯ, ಪ್ರೌಢಶಾಲಾ ವಿದ್ಯಾರ್ಥಿಗಳು ಸೇರಿದಂತೆ ಬೇರೆ ಬೇರೆ ತರಗತಿಗಳ ವಿದ್ಯಾರ್ಥಿಗಳು ಕಲಿಕೆಗೆ ಉತ್ಸುಕರಾಗಿದ್ದಾರೆ.

ನಮ್ಮ ಸಾರ್ವಜನಿಕ ಶಿಕ್ಷಣ ಇಲಾಖೆ ಮಾಡಬೇಕಾಗಿದ್ದ ಕೆಲಸವನ್ನು ವ್ಯಕ್ತಿಯೊಬ್ಬರು ಸ್ವಯಂ ಪ್ರೇರಿತವಾಗಿ ಬಂದು ಮಕ್ಕಳಿಗೆ ಪಾಠ ಮಾಡುತ್ತಿರುವುದಕ್ಕೆ ಅವರಿಗೆ ಅಭಿನಂದನೆಗಳು. ಬಾಗೇಪಲ್ಲಿಯಲ್ಲಿಯತಂಹ ಗಡಿ ತಾಲೂಕಿನಲ್ಲಿ ಮಧ್ಯಮ ವರ್ಗದ ಮಕ್ಕಳಿಗೆ ಕಲಿಕೆ ನಿರಂತರವಾಗಿ ಇರಲಿ ಎನ್ನುವ ಆಶಯದಿಂದ ನರಸಿಂಹಮೂರ್ತಿ ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ.
– ಎಸ್.ಜಿ.ನಾಗೇಶ್, ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ.

ಮಕ್ಕಳಿಗೆ ಗೆಳೆಯರಿಂದ ಕಲಿಕೋಪಕರಣ
ನರಸಿಂಹಮೂರ್ತಿ, ಗ್ರಾಮದ ಕೆಲ ಗೆಳೆಯರ ಮನವೊಲಿಸಿ ಸದ್ಯಕ್ಕೆ ಕಲಿಯುತ್ತಿರುವ ಮಕ್ಕಳಿಗೆ ನೋಟ್ ಪುಸ್ತಕ, ಪೆನ್ ಗಳು, ಪೆನ್ಸಿಲ್ ಗಳಿಗೆ, ಜಾಮಿಟ್ರಿ ಪೆಟ್ಟಿಗೆಗಳ ನೆರವು ನೀಡಲಾಗಿದೆ.  ಸಂಜೆ ಶಾಲೆಗೆ ಬರುವ ಮಕ್ಕಳ ಕಲಿಕೆ ಅನುಕೂಲವಾಗಲು ಅಭ್ಯಾಸ ಪುಸ್ತಕಗಳು, ವಿವಿಧ ಚಟುವಟಿಕೆಗಳಿಗೆ ಸಂಬಂಧಿಸಿದ ಸಲಕರಣೆಗಳನ್ನು ಹಾಗೂ ಮಕ್ಕಳು ನೆಲದಲ್ಲಿ ಕೂತು ಪಾಠ ಕೇಳುತ್ತಿರುವುದರಿಂದ ಇವರಿಗೆ ಪೀಠೋಪಕರಣಗಳು, ಆಟಿಕೆಗಳನ್ನು ದಾನಿಗಳಿಂದ ನಿರೀಕ್ಷಿಸಿದ್ದಾರೆ. ಶಾಲೆಯ ಗೋಡೆಗಳಿಗೆ ಹೊಸ ಹಾಗೂ ಆಕರ್ಷಕವಾಗಿ ವರ್ಲಿ ಕಲೆ ಬಿಡಿಸಲು ಚಿಂತಿಸಿದ್ದಾರೆ.

ಇಲ್ಲಿನ ಮಕ್ಕಳಿಗೆ ಸರ್ಕಾರಿ ಶಾಲೆಯಲ್ಲಿ ಓದಬೇಕೆಂಬ ಆಸೆ ಇದ್ದರೂ ಸವಾಲುಗಳೇ ಹೆಚ್ಚು. ಇಲ್ಲಿಗೆ ಖಾಯಂ ಶಿಕ್ಷಕರ ನಿಯೋಜನೆ ಮಾಡಬೇಕಿದೆ. ಶಾಲೆ ಆರಂಭ ತಡವಾಗಿದೆ. ಮಕ್ಕಳು ಬೇಸಿಕ್ಸ್ ಮರೆಯಬಾರದೆಂದು ಸಂಜೆ ವೇಳೆ ತರಗತಿ ನಡೆಸುತ್ತಿದ್ದೇನೆ. ಮಕ್ಕಳಿಂದ ಉತ್ತಮ ಸ್ಪಂದನೆ ಸಿಕ್ಕಿದೆ.
– ಮಾಡಪಲ್ಲಿ ನರಸಿಂಹಮೂರ್ತಿ, ಪದವೀಧರ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.