ಕೃಷಿ ಹೊಂಡಕ್ಕೆ ಬಿದ್ದ ಬಾಲಕ ಬಚಾವ್: ರಕ್ಷಣೆಗೆ ಇಳಿದ ತಂದೆ, ತಾತ ಮೃತ್ಯು
ಚಿಂತಾಮಣಿಯ ಅಂಕಾಲಮಡಗು ಗ್ರಾಮದಲ್ಲಿ ಹೃದಯ ವಿದ್ರಾವಿಕ ಘಟನೆ
Team Udayavani, Jun 29, 2023, 7:46 PM IST
ಚಿಂತಾಮಣಿ(ಚಿಕ್ಕಬಳ್ಳಾಪುರ): ಕೃಷಿ ಹೊಂಡಕ್ಕೆ ಕಾಲು ಜಾರಿ ಬಿದ್ದ ಬಾಲಕನೊಬ್ಬ ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾದರೂ ಆತನ ರಕ್ಷಣೆಗೆಂದು ಕೃಷಿ ಹೊಂಡಕ್ಕೆ ಇಳಿದ ತಂದೆ ಹಾಗೂ ತಾತ ಕೃಷಿ ಹೊಂಡದಲ್ಲಿ ಸಿಲುಕಿ ಹೊರ ಬಾರಲಾಗದೇ ಅಸುನೀಗಿರುವ ಹೃದಯ ವಿದ್ರಾವಿಕ ಘಟನೆಯೊಂದು ಗುರುವಾರ ತಾಲೂಕಿನ ಅಂಕಾಲಮಡಗು ಗ್ರಾಮದಲ್ಲಿ ನಡೆದಿದೆ.
ಕೃಷಿ ಹೊಂಡಕ್ಕೆ ಕಾಲು ಜಾರಿ ಬಿದ್ದು ಬಚಾವ್ ಆದ ಬಾಲಕನನ್ನು ಗ್ರಾಮದ ಸಂಜಯ್ ರೆಡ್ಡಿ ಬಿನ್ ಚೌಡರೆಡ್ಡಿ (14) ಎಂದು ಗುರುತಿಸಲಾಗಿದ್ದು ಬಾಲಕನ ರಕ್ಷಣೆಗೆಂದು ಕೃಷಿ ಹೊಂಡಕ್ಕೆ ಇಳಿದು ವಿಧಿಯಾಟಕ್ಕೆ ಬಲಿಯಾದವರನ್ನು ಗ್ರಾಮದ ವೆಂಕಟರೆಡ್ಡಿ (70) ಹಾಗೂ ಅವರ ಪುತ್ರ ಚೌಡರೆಡ್ಡಿ (45) ಎನ್ನುವವರಾಗಿದ್ದಾರೆ.
ಪೊಲೀಸರ ಭೇಟಿ
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಕೆಂಚಾರ್ಲಹಳ್ಳಿ ಗ್ರಾಮಾಂತರ ಠಾಣೆ ಆರಕ್ಷಕ ವೃತ್ತ ನಿರೀಕ್ಷಕ ಪುರುಷೋತ್ತಮ್ ಹಾಗೂ ಬಟ್ಲಹಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕ ಪುನೀತ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ. ಮೃತದೇಹಗಳನ್ನು ಕೃಷಿ ಹೊಂಡದಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಒಪ್ಪಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.