GruhaLakshmi: ತಾಲೂಕಿನ 949 ಮಹಿಳೆಯರಿಗೆ ಬರದ ಗೃಹಲಕ್ಷ್ಮಿ ಹಣ
Team Udayavani, Sep 25, 2023, 4:33 PM IST
ಗುಡಿಬಂಡೆ: ರಾಜ್ಯ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವ ಪಂಚ ಗ್ಯಾರಂಟಿ ಭಾಗ್ಯಗಳನ್ನು ಘೋಷಣೆ ಮಾಡಿ, ಅ ಧಿಕಾರಕ್ಕೆ ಬಂದ ಮೇಲೆ ಒಂದೊಂದೇ ಭಾಗ್ಯಗಳನ್ನು ಜಾರಿ ಮಾಡಿದ್ದು, ಅದರಂತೆ ಗೃಹಿಣಿಯರಿಗಾಗಿ ಜಾರಿ ಮಾಡಲಾದ ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಅದ್ಧೂರಿಯಾಗಿ ಚಾಲನೆ ನೀಡಿದರು. ಆದರೆ, ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿ ಒಂದು ತಿಂಗಳು ಕಳೆದರೂ ತಾಲೂಕಿನ 949 ಗೃಹಿಣಿಯರಿಗೆ ಗೃಹಲಕ್ಷ್ಮಿಯೋಜನೆಯ ಹಣ ಮಾತ್ರ ಇನ್ನೂ ಜಮಾ ಆಗಿಲ್ಲ. ಹಣ ಖಾತೆಗೆ ಬರದ ಕಾರಣ ಅರ್ಜಿ ಸಲ್ಲಿಸಿದ್ದ ಮಹಿಳೆಯರು ಸೈಬರ್ ಸೆಂಟರ್ ಗಳಿಗೆ ಅಲೆದಾಡುತ್ತಿರುವ ದೃಶ್ಯಗಳು ತಾಲೂಕಿನಲ್ಲಿ ಸಾಮಾನ್ಯವಾಗಿವೆ.
ತಾಲೂಕಿನಲ್ಲಿ 10 ಸಾವಿರಕ್ಕೂ ಹೆಚ್ಚು ಅರ್ಜಿ: ಗುಡಿಬಂಡೆ ತಾಲೂಕಿನ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ ಮೇಲೆ ಇಲ್ಲಿಯವರೆಗೂ 10,520 ಮಹಿಳೆಯರು ಅರ್ಜಿಗಳನ್ನು ಸಲ್ಲಿಸಿದ್ದಾರೆ.
9 ಸಾವಿರ ಜನರಿಗೆ ಯೋಜನೆ ಹಣ: ತಾಲೂಕಿನಲ್ಲಿ ಅರ್ಜಿ ಸಲ್ಲಿಸಿಕೊಂಡಿದ್ದ ಒಟ್ಟು 10,520 ಫಲಾನುಭವಿಗಳ ಪೈಕಿ ಒಂದನೇ ಮಾಹೆಯ ಯೋಜನೆಯ ಹಣ 9,571 ಫಲಾನುಭವಿಗಳ ಖಾತೆಗೆ ಜಮಾಗೊಂಡಿದ್ದು, ಇನ್ನೂ 949 ಫಲಾನುಭವಿಗಳಿಗೆ ಹಣ ಬರಬೇಕಾಗಿದೆ. ಖಾತೆಗಳ ಪರಿಶೀಲನೆ: ತಾಲೂಕಿನಲ್ಲಿ ಇನ್ನೂ ಸಹ 949 ಫಲಾನುಭವಿಗಳಿಗೆ ಹಣ ವರ್ಗಾವಣೆ ಯಾಗಬೇಕಾಗಿದ್ದು, ಈ ಫಲಾನುಭವಿಗಳಿಗೆ ಹಣ ಜಮಾ ಮಾಡಲು 885 ಅರ್ಜಿದಾರರ ಖಾತೆಗಳ ಪರಿಶೀಲನೆಯಲ್ಲಿದ್ದರೇ, 64 ಅರ್ಜಿದಾರರ ಬ್ಯಾಂಕ್ ಖಾತೆಗಳು ಆಧಾರ್ ಜೋಡಣೆ ಮತ್ತು ಇತರೆ ತಾಂತ್ರಿಕ ತೊಂದರೆಯಲ್ಲಿಯವೆ ಎಂದು ತಿಳಿದಿದ್ದು, ಅರ್ಜಿದಾರರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರು ದೂರವಾಣಿ ಕರೆ ಮಾಡಿ, ಬ್ಯಾಂಕ್ ಖಾತೆಗಳನ್ನು ಸರಿಪಡಿಸಿಕೊಳ್ಳುವಂತೆ ತಿಳಿಸುತ್ತಿದ್ದಾರೆ ಎನ್ನಲಾಗಿದೆ.
2ಕಂತು ಹಣ ಜಮಾ: ಗೃಹಲಕ್ಷ್ಮಿಯೋಜನೆಗೆ ಅರ್ಜಿ ಸಲ್ಲಿಸಿಕೊಂಡು ಮೊದಲನೆ ಕಂತು ಬಾರದೆ ಇರುವ ಮಹಿಳೆಯರು ತಮ್ಮ ಬ್ಯಾಂಕ್ ಖಾತೆ ಹಾಗೂ ಆಧಾರ್ ಕಾರ್ಡ್ ಲಿಂಕ್ ಗಳನ್ನು ಸರಿಪಡಿಸಿಕೊಂಡರೇ, ಒಂದನೇ ಕಂತು ಬಾರದೇ ಇರುವ ಮಹಿಳೆಯರಿಗೆ ಎರಡು ಕಂತಿನ ಹಣ ಅವರ ಖಾತಗೆ ಜಮಾ ಆಗಲಿದೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿಕೊಂಡಿರುವ ಫಲಾನುಭವಿಗಳಲ್ಲಿ ಯಾರಿಗೆ ಮೊದಲ ಮಾಹೆಯ ಹಣ ಬಂದಿಲ್ಲ ಅಂತಹವರು ತಮ್ಮ ಬ್ಯಾಂಕ್‌ಗಳಲ್ಲಿ ಇ-ಕೆವೈಸಿ ಹಾಗೂ ಆಧಾರ್ ಜೋಡಣೆ ಮಾಡಿಕೊಂಡರೆ ಯೋಜನೆ ಹಣ ಜಮಾ ಆಗಲಿದೆ. ಅಶ್ವತ್ಥಮ್ಮ, ಜಿಲ್ಲಾ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಚಿಕ್ಕಬಳ್ಳಾಪುರ
-ನವೀನ್ ಕುಮಾರ್.ಎನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.