Shocking: ಮದ್ಯದ ಅಮಲಿನಲ್ಲಿ ಹೆತ್ತ ತಾಯಿ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೆ ಯತ್ನಿಸಿದ ಮಗ
Team Udayavani, Aug 6, 2024, 11:25 AM IST
ಗುಡಿಬಂಡೆ: ತಾಲ್ಲೂಕಿನ ಉಲ್ಲೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿನ್ನಹಳ್ಳಿ ಗ್ರಾಮದಲ್ಲಿ ಭಾನುವಾರ(ಆಗಸ್ಟ್ 4) ರಾತ್ರಿ ಮದ್ಯದ ಅಮಲಿನಲ್ಲಿ ಮಗನೇ ತಾಯಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.
ತಾಯಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ಅವರನ್ನು ಮನೆ ಹಿಂಭಾಗದ ತಿಪ್ಪೆಗುಂಡಿಗೆ ಎಸೆದು ಪರಾರಿ ಆಗಿದ್ದಾನೆ.
ನೆರೆಹೊರೆಯವರು ಈ ವಿಚಾರವನ್ನು ಪೊಲೀಸರಿಗೆ ತಲುಪಿಸಿದ್ದಾರೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಆರೋಪಿಗೆ ವಿವಾಹವಾಗಿದ್ದು ಆತನ ಪತ್ನಿ ದೂರವಿದ್ದಾಳೆ ಎನ್ನಲಾಗುತ್ತಿದೆ. ಈತ ತಂದೆ ತಾಯಿಯ ಜೊತೆ ವಾಸಿಸುತ್ತಿದ್ದ. ಸಂತ್ರಸ್ತೆಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಸೋಮವಾರ ರಾತ್ರಿ ಗುಡಿಬಂಡೆ ಠಾಣೆಗೆ ಡಿವೈಎಸ್‌ಪಿ ಶಿವಕುಮಾರ್ ಭೇಟಿ ನೀಡಿ ಪ್ರಕರಣದ ಮಾಹಿತಿ ಪಡೆದರು. ಆಸ್ಪತ್ರೆಗೂ ಭೇಟಿ ನೀಡಿ ಆರೋಪಿಯ ತಂದೆಯಿಂದ ಮಾಹಿತಿ ಕಲೆ ಹಾಕಿದ್ದಾರೆ.
ಗುಡಿಬಂಡೆ ಪೊಲೀಸರು ಆರೋಪಿಯನ್ನು ಬಂದಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Channapatna: ಮಚ್ಚಿನಿಂದ ಹೊಡೆದು ಯುವಕನ ಹತ್ಯೆ… ತಡರಾತ್ರಿ ಪೊಲೀಸರಿಗೆ ಶರಣಾದ ಸಂಬಂಧಿಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.