Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…
ಬೆಳ್ಳಿ, ಬಂಗಾರ, ಹುಂಡಿ ಹಣ ಸಿಸಿಕ್ಯಾಮರ ಡಿವಿಆರ್ ದೋಚಿ ಪರಾರಿ
Team Udayavani, Oct 2, 2024, 7:32 PM IST
ಗುಡಿಬಂಡೆ: ತಾಲೂಕಿನ ದಪ್ಪರ್ತಿ ಗ್ರಾಮ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ಸುಮಾರು 8ರಿಂದ 9 ಲಕ್ಷ ಮೌಲ್ಯದ ಬೆಳ್ಳಿ, ಬಂಗಾರ, ಹುಂಡಿ ಹಣ ಸಿಸಿಕ್ಯಾಮರ ಡಿವಿಆರ್ ದೋಚಿ ಪರಾರಿಯಾಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಮಂಗಳವಾರ ರಾತ್ರಿ 1-30 ರ ಸಮಯದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವಸ್ಥಾನದಲ್ಲಿ ಅಳವಡಿಸಿದ್ದ ಸಿಸಿ ಟಿವಿಗಳನ್ನು ಬೇರೆ ಕಡೆಗೆ ತಿರುಗಿಸಿ, ವೈರ್‌ಗಳನ್ನು ಕಟ್ ಮಾಡಿ ಡಿವಿಆರ್‌ನ್ನು ಕದ್ದು, ದೇವಾಲಯ ಒಳಗೆ ಬಿರುವನಲ್ಲಿದ್ದ 2.75 ಕೆ.ಜಿ ಬೆಳ್ಳಿ ಕವಚ, 1 ಕೆಜಿ ಬೆಳ್ಳಿಯ ಪೂಜೆ ಸಾಮಾನು, 15 ಗ್ರಾಂ ಚಿನ್ನದ ತಾಳಿ ಮತ್ತು ಹುಂಡಿಯಲ್ಲಿದ್ದ ಸುಮಾರು 50 ಸಾವಿರ ಹಣ ಕಳವಾಗಿದ್ದು, ಒಟ್ಟಾರೆ ಸುಮಾರು 8 ರಿಂದ 9 ಲಕ್ಷ ಎಂದು ಅಂದಾಜಿಸಲಾಗಿದೆ.
ಬುಧವಾರ ಬೆಳಿಗ್ಗೆ ಸುಮಾರು 6 ಗಂಟೆ ಸಮಯದಲ್ಲಿ ದಪ್ಪರ್ತಿ ಗ್ರಾಮದ ವೆಂಕಟರೆಡ್ಡಿ ಕಸವನ್ನು ತಿಪ್ಪಗೆ ಹಾಕಲು ಹೋಗಿದ್ದಾಗ ದೇವಸ್ಥಾನದ ಕಾಂಪೌಂಡ್‌ಗೆ ಏಣಿಯನ್ನು ಹಾಕಿರುವುದು ಗಮನಿಸಿ ದೇವಸ್ಥಾನದ ಬಾಗಿಲು ಕಡೆ ನೋಡಿದಾಗ ಬಾಗಿಲು ತೆಗೆದಿರುವುದು ಗಮನಿಸಿದ ಅವರು ಕೂಡಲೇ ದೇವಾಲಯದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಮುರಳಿಗೆ ದೂರವಾಣಿ ಮೂಲಕ ಮಾಹಿತಿ ತಿಳಿಸಿದ್ದಾರೆ.
ಮಾಹಿತಿ ತಿಳಿದ ದೇವಾಲಯದ ಅರ್ಚಕರು, ಗ್ರಾಮಸ್ಥರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ನೋಡಿದಾಗ ಬಾಗಿಲು ತೆರೆದಿದ್ದು ಒಳಗೆ ಹೋಗಿ ನೋಡಿದಾಗ ದೇವಾಲಯದಲ್ಲಿ ಕಳ್ಳತನವಾಗಿರುವುದು ದೃಡಪಟ್ಟಿರುತ್ತದೆ.
ದೇವಾಲಯದ ಅರ್ಚಕ ವರ್ಲಕೊಂಡ ಕೆ.ವಿ.ವೆಂಕಟನರಸಿಂಹಾಚಾರ್ ಶನಿವಾರ ಬೆಳಿಗ್ಗೆ 9-00 ಗಂಟೆಯಲ್ಲಿ ಪೂಜೆ ಮುಗಿಸಿ ಎಂದಿನಂತೆ ದೇವಾಲಯದ ಬಾಗಿಲುಗಳನ್ನು ಹಾಕಿಕೊಂಡು ಹೋಗಿರುತ್ತಾರೆ. ಬುಧವಾರ ಬೆಳಿಗ್ಗೆ ಕಳ್ಳತನವಾಗಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ.
ಸ್ಥಳಕ್ಕೆ ಗುಡಿಬಂಡೆ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ನಯಾಜ್ ಬೇಗ್, ಸಬ್ ಇನ್ಸ್ ಪೆಕ್ಟರ್ ಗಣೇಶ್, ಬೆರಳಚ್ಚು ತಜ್ಞರು ಮತ್ತು ಶ್ವಾನದಳ, ಗುಡಿಬಂಡೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Gandhi Jayanthi:ರಾಷ್ಟ್ರಧ್ವಜ ಹಿಡಿದೇ ಸಿಎಂ ಸಿದ್ದರಾಮಯ್ಯ ಶೂ ಲೇಸ್ ಬಿಚ್ಚಿದ ಕಾರ್ಯಕರ್ತ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್‌ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ
Kannada ಸಾಹಿತ್ಯ ಸಮ್ಮೇಳನ 2 – 3 ವರ್ಷಕ್ಕೊಮ್ಮೆ ನಡೆಯಲಿ
MUST WATCH
ಹೊಸ ಸೇರ್ಪಡೆ
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.