ಮಣ್ಣು ಪರೀಕ್ಷೆ ಆಧಾರಿತ ರಸಗೊಬ್ಬರ ಬಳಸಿದರೆ ಹೆಚ್ಚು ಇಳುವರಿ
Team Udayavani, Jun 20, 2019, 3:00 AM IST
ಚಿಕ್ಕಬಳ್ಳಾಪುರ: ರೈತರು ಯಾವುದೇ ಬೆಳೆ ತೆಗೆಯಬೇಕಾದರೂ ಮಣ್ಣು ಪರೀಕ್ಷೆ ಆಧಾರಿತ ರಸಗೊಬ್ಬರಗಳ ಸಮತೋಲನ ಬಳಕೆಯಿಂದ ಮಣ್ಣಿನ ಆರೋಗ್ಯ ಕಾಪಾಡಲು ಸಾಧ್ಯ. ಇದರಿಂದ ರೈತರಿಗೆ ಬೇಸಾಯದ ಖರ್ಚು ಕಡಿಮೆಯಾಗುವುದಲ್ಲದೇ ಗುಣಮಟ್ಟದ ಇಳುವರಿಯಿಂದ ಅಧಿಕ ಲಾಭ ಪಡೆಯಬಹುದು ಎಂದು ಕುರುಬೂರು ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಡಾ.ಬಿ.ಗಾಯತ್ರಿ ತಿಳಿಸಿದರು.
ಜಿಲ್ಲೆಯ ಕುರುಬೂರು ಕೃಷಿ ವಿಜ್ಞಾನ ಕೇಂದ್ರದಲ್ಲಿ ಬುಧವಾರ ಜಿಲ್ಲೆಯ ರೈತರಿಗೆ ಪ್ರಮುಖ ಬೆಳೆಗಳಲ್ಲಿ ರಸಗೊಬ್ಬರ ಅಸಮತೋಲನ ಬಳಕೆ ಕುರಿತು ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಸಗೊಬ್ಬರಗಳ ಬಳಕೆಯಿಂದ ಭೂಮಿಯ ಫಲವತ್ತತೆ ಕ್ಷಿಣಿಸುವ ಸಾಧ್ಯತೆ ಹೆಚ್ಚಾಗಿರುವುದರಿಂದ ರೈತರು ರಸಗೊಬ್ಬರಗಳ ಸಮತೋಲನ ಕಾಯ್ದುಕೊಳ್ಳುವುದು ಮುಖ್ಯ ಎಂದರು.
ಒಮ್ಮೆ ಮಣ್ಣಿನ ಫಲವತತ್ತೆ ಕುಸಿದರೆ ಅದರ ಪುನಶ್ಚೇತನ ಬಹಳ ಕಷ್ಟ. ರೈತರು ಡಿಎಪಿ ರಸಗೊಬ್ಬರವನ್ನು ಹೆಚ್ಚಾಗಿ ಬಳಸುವುದು ಸೂಕ್ತವಲ್ಲ ಹಾಗೂ ಪೊಟ್ಯಾಷ್‌ನ ಬಳಕೆಗೆ ಒತ್ತು ನೀಡಬೇಕು. ರೈತರಿಗೆ ಯಾವ ಬೆಳೆಗೆ ಯಾವ ಗೊಬ್ಬರ ಬಳಸಬೇಕು, ರಾಸಾಯನಿಕ ಹಾಗೂ ಜೈವಿಕ ಗೊಬ್ಬರಗಳ ಬಳಕೆ ಕುರಿತು ರೈತರಿಗೆ ಸೂಕ್ತ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಿಜ್ಞಾನಿಗಳಾದ ಡಾ.ಆರ್.ಮಂಜುನಾಥ, ಬೇಸಾಯಶಾಸ್ತ್ರದ ವಿಜ್ಞಾನಿಗಳಾದ ವಿಶ್ವನಾಥ್ ಕೊಟ್ಟಿಗೆ ಗೊಬ್ಬರವನ್ನು ಟ್ರೆçಕೋಡರ್ಮದೊಂದಿಗೆ ಉಪಚರಿಸಿ ಮಣ್ಣಿಗೆ ಸೇರಿಸುವ ತಂತ್ರಜ್ಞಾನದ ಬಗ್ಗೆ ತಿಳಿಸಿ ಮಣ್ಣಿನಿಂದ ಹರಡುವ ರೋಗಗಳನ್ನು ನಿಯಂತ್ರಿಸಬಹುದು ಎಂದು ತಿಳಿಸಿದರು. ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮ ಸಹಾಯಕಿ ಅರುಣಾ, ಸಿಬ್ಬಂದಿ ವರ್ಗದವರು ಹಾಗೂ ಜಿಲ್ಲೆಯ 30 ರೈತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.