ಉನ್ನತ ಶಿಕ್ಷಣ ಗ್ರಾಮೀಣಕ್ಕೂ ವಿಸ್ತರಿಸಬೇಕು
Team Udayavani, Jul 5, 2020, 6:50 AM IST
ಚಿಕ್ಕಬಳ್ಳಾಪುರ: ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ತಾಲೂಕಿನ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಇನ್ಸಿಟ್ಯೂಟ್ ಆಫ್ ಹ್ಯೂಮನ್ ಎಕ್ಸಲೆನ್ಸ್ ಸಂಸ್ಥೆಗೆ ಎರಡು ಹೊಸ ಕ್ಯಾಂಪಸ್ಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಅನುಮತಿ ಪತ್ರವನ್ನು ಡಿಸಿಎಂ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಸದ್ಗುರು ಶ್ರೀ ಮಧುಸೂದನ್ ಸಾಯಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅಶ್ವತ್ಥ ನಾರಾಯಣ, ಶಿಕ್ಷಣಕ್ಕಾಗಿ ಸತ್ಯಸಾಯಿ ಶಿಕ್ಷಣ ಸಂಸ್ಥೆ ಗಳು ನೀಡುತ್ತಿರುವ ಕೊಡುಗೆ ಎಲ್ಲರಿಗೂ ಮಾದರಿ. ಈ ನಿಟ್ಟಿನಲ್ಲಿ ಇಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಅತ್ಯುತ್ತಮ, ಗುಣಮಟ್ಟದ ಶಿಕ್ಷಣ ಸಿಗುತ್ತದೆ ಎಂಬುದ ರಲ್ಲಿ ಯಾವುದೇ ಅನುಮಾನವೇ ಇಲ್ಲ ಎಂದರು. ಉನ್ನತ ಶಿಕ್ಷಣವನ್ನು ಹಿಂದುಳಿದ ಮತ್ತು ಗ್ರಾಮೀಣ ಪ್ರದೇಶಗಳಿಗೂ ವ್ಯಾಪಕವಾಗಿ ವಿಸ್ತರಿಸಬೇಕು ಎಂಬುದು ಸರ್ಕಾರದ ಕನಸು.
ವೈಯಕ್ತಿಕವಾಗಿಯೂ ಇದು ನನಗೆ ಇಷ್ಟವಾದ ಕೆಲಸ. ನಮ್ಮ ಹಳ್ಳಿಗಳ ಮಕ್ಕಳಿಗೆ ಸುಲಭವಾಗಿ ಉನ್ನತ ಶಿಕ್ಷಣ ಕೈಗೆಟುಕುವಂತಿರಬೇಕು. ಅಂತಹ ಉದಾತ್ತ ಉದ್ದೇಶವನ್ನು ಇಟ್ಟುಕೊಂಡೇ ಸತ್ಯ ಸಾಯಿ ಸಂಸ್ಥೆಗೆ ಕ್ಯಾಂಪಸ್ಗಳನ್ನು ಮಂಜೂರು ಮಾಡ ಲಾಗಿದೆ. ಶಿಕ್ಷಣದಿಂದ, ಅದರಲ್ಲೂ ಮೌಲ್ಯಯುತ ಕಲಿಕೆಯಿಂದ ಪರಿವರ್ತನೆ ಸಾಧ್ಯ. ಅದನ್ನು ಈ ಸಂಸ್ಥೆ ತೋರಿಸಿಕೊಟ್ಟಿದೆ.
ಒಳಿತು ಯಾವುದು, ಕೆಡಕು ಯಾವುದು ಎಂಬುದನ್ನು ಕಲಿಕೆಯ ಹಂತದಲ್ಲೇ ಅರಿತುಕೊಂಡರೆ ಮುಂದಿನ ಜೀವನ ಉಜ್ವಲವಾಗಿರುತ್ತದೆ ಎಂದು ಪ್ರತಿಪಾದಿಸಿದರು. ಜಿಪಂ ಅಧ್ಯಕ್ಷ ಚಿಕ್ಕನರಸಿಂಹಯ್ಯ, ಅಪರ ಜಿಲ್ಲಾಧಿ ಕಾರಿ ಆರತಿ, ತಹಶೀಲ್ದಾರ್ ನಾಗೇಶ್, ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ನ ಗೋವಿಂದರೆಡ್ಡಿ, ಸಂಜೀವ ಕರಾಯಶೆಟ್ಟಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.