ಎಚ್.ಎನ್.ವ್ಯಾಲಿ: ನೀರಿನ ಸಮಸ್ಯೆ ಶಾಶ್ವತ ಪರಿಹಾರ
Team Udayavani, Jun 27, 2019, 3:00 AM IST
ಗೌರಿಬಿದನೂರು: ಎಚ್.ಎನ್.ವ್ಯಾಲಿ ನೀರಿನಿಂದ ಅಂತರ್ಜಲ ಹೆಚ್ಚುವುದರ ಜೊತೆಗೆ ನಗರದ ನೀರಿನ ಸಮಸ್ಯೆ ಶಾಶ್ವತವಾಗಿ ಬಗೆಹರಿಯಲಿದೆ ಎಂದು ಕೃಷಿಸಚಿವ ಶಿವಶಂಕರರೆಡ್ಡಿ ಭರವಸೆ ನೀಡಿದರು. ನಗರಸಭೆ ವತಿಯಿಂದ ತಾಪಂ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಶಿವಶಂಕರ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕುಂದು ಕೊರತೆ ಸಭೆಯಲ್ಲಿ ಸಾರ್ವಜನಿಕರು ನೇರವಾಗಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿಗಳನ್ನು ನೀಡಿ ಸಮಸ್ಯೆ ಪರಿಹಾರಕ್ಕೆ ಮನವಿ ಮಾಡಿದರು.
ಮನವಿಗಳನ್ನು ಸ್ವೀಕರಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಶಂಕರರೆಡ್ಡಿ, ಗೌರಿಬಿದನೂರು ನಗರಸಭೆಯ ಅಧಿಕಾರಾವಧಿ ಮುಗಿದಿದ್ದು, ಆಡಳಿತಾಧಿಕಾರಿಗಳು ಅಧಿಕಾರ ನಡೆಸುತ್ತಿದ್ದಾರೆ ಆದ್ದರಿಂದ ಸಮಸ್ಯೆ ಸ್ಪಂದಿಸುವಲ್ಲಿ ಸ್ವಲ್ಪಮಟ್ಟಿಗೆ ತೊಂದರೆಯಾಗಿದೆ. ಸರ್ಕಾರ ಜನರ ಸಮಸ್ಯೆಗೆ ಎಲ್ಲಾ ರೀತಿಯಲ್ಲಿಯೂ ಸ್ಪಂದಿಸಲಿದ್ದು ಆದ್ಯತೆಯ ಮೇಲೆ ಪರಿಹರಿಸಲಾಗುವುದು ಎಂದರು. ಗೌರಿಬಿದನೂರು ನಗರದ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ.
ಪ್ರಮುಖವಾಗಿ ಹೊಸ ಚರಂಡಿಗಳ ನಿರ್ಮಾಣ ಹಾಗೂ ಮೋರಿಗಳ ನಿರ್ಮಾಣಕ್ಕಾಗಿ 7.5 ಕೋಟಿ ವೆಚ್ಚಮಾಡಲಾಗುತ್ತಿದ್ದು, ರಸ್ತೆಗಳ ಅಭಿವೃದ್ಧಿಗೆ ನಗರೋತ್ತಾನ-3ರಲ್ಲಿ 17 ಕೋಟಿ ಮಂಜೂರಾಗಿದ್ದು ಟೆಂಡರ್ ಹಂತದಲ್ಲಿದೆ ಜೊತೆಗೆ ಅಂತರ್ಜಲ ಮಟ್ಟ ಕುಸಿದಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಕಷ್ಟಕರವಾಗಿದ್ದು, ಈಗಾಗಲೇ12 ಬೋರ್ವೆಲ್ ಗಳಿಗೆ ಮಂಜೂರಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೊರೆದಿರುವ 8 ಕೊಳವೆ ಭಾವಿಗಳಿಗೆ ಪಂಪ್ ಮತ್ತು ಮೋಟಾರ್ ಅಳವಡಿಸಲು ಮಂಜೂರಾತಿ ಪಡೆಯಲಾಗಿದೆ ಎಂದರು.
ಹಣ ಮಂಜೂರು: ಗೌರಿಬಿದನೂರು ನಗರದ ಆಚಾರ್ಯ ಕಾಲೇಜು ಮೈದಾನದ ಪಕ್ಕದಲ್ಲಿ ಮನೆಗಳನ್ನು ಕಟ್ಟಿಕೊಂಡಿರುವ ಜನರಿಗೆ ಸ್ಲಂಬೋರ್ಡ್ ನಿಂದ ಹಕ್ಕುಪತ್ರ ನೀಡಲು ಕ್ರಮಕೈಗೊಳ್ಳಲಾಗಿದೆ. ಬರ್ಜಾನುಕುಂಟೆ ಬಳಿ ನಿರ್ಮಾಣ ಮಾಡಿರುವ 600 ನಿವೇಶನಗಳಲ್ಲಿ 210 ನಿವೇಶನಗಳು ಮಂಜೂರಾಗಿದ್ದು ಹಣ ಕಟ್ಟಿರುವವರಿಗೆ ಅದರ ಹಕ್ಕು ಪತ್ರಗಳನ್ನು ವಿತರಿಸಲಾಗುವುದು ಉಳಿದ ನಿವೇಶನಗಳನ್ನು ಹಂತಹಂತವಾಗಿ ಮಂಜೂರು ಮಾಡಿಸಲಾಗುವುದು ಎಂದರು.
ನಗರ ವ್ಯಾಪ್ತಿಯ ಉಪ್ಪಾರಕಾಲೋನಿಯ ಬಳಿ ಕೆರೆಯಲ್ಲಿ ಮನೆ ಕಟ್ಟಿರುವ ಹಾಗೂ ಕರೇಕಲ್ಲಹಳ್ಳಿ ಕೆರೆಯಲ್ಲಿ ನಿರ್ಮಿಸಿರುವ ಅನಧಿಕೃತ ಮನೆಗಳನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸುವುದಿಲ್ಲ ಅವರಿಗೆ ಮಂಜೂರಾತಿ ಮಾಡಿಸಲು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಸರ್ಕಾರದ ಮಟ್ಟದಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗುವುದು. ರೈಲ್ವೆ ನಿಲ್ದಾಣದ ಬಳಿ ನಿರ್ಮಾಣವಾಗುತ್ತಿರುವ ಮೇಲ್ಸೇತುವೆ ಕಾಮಗಾರಿ 2ರಿಂದ 3ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು ಗುಂಡಾಪುರ ಕಾದಲವೇಣಿ ಕಡೆ ಸಂಚರಿಸುವ ಜನರಿಗೆ ಅನುಕೂಲವಾಗಲಿದೆ ಎಂದರು.
ಚಿಕ್ಕಬಳ್ಳಾಪುರ-ಮಧುಗಿರಿಗೆ ರಸ್ತೆ: ಕಂದಾಯ ಭೂಮಿಯಲ್ಲಿ ಮನೆಗಳನ್ನು ನಿರ್ಮಿಸಿ ಕೊಂಡಿರುವವರಿಗೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ 94 ಸಿಸಿ ಕಾನೂನಿನ ಪ್ರಕಾರ ಮಂಜೂರಾತಿ ಪತ್ರವನ್ನು ನೀಡಲು ತಹಶೀಲ್ದಾರ್ ಎಲ್ಲ ರೀತಿಯ ತಯಾರಿಸಿ ನಡೆಸಿದ್ದು, ಹಕ್ಕು ಪತ್ರ ನೀಡಲು ತಯಾರಿಸಿ ನಡೆಸಿದ್ದಾರೆ. ಮಾದವ ನಗರದ ಬಳಿಯಿಂದ ಎಪಿಎಂಸಿ ಬಳಿ ವರೆಗೆ ರಸ್ತೆ ಕಾಮಗಾರಿ ನಡೆಯುತಿದ್ದು ಬೈಪಾಸ್ ರಸ್ತೆಗೆ ಮೇಲ್ಸೇತುವೆ ನಿರ್ಮಾಣವಾಗುತ್ತಿದ್ದು ಚಿಕ್ಕಬಳ್ಳಾಪುರ ರಸ್ತೆಯಿಂದ ಮಧುಗಿರಿ ರಸ್ತೆಗೆ ನೇರವಾಗಿ ತೆರಳಬಹುದು ಎಂದರು.
ನಗರದಲ್ಲಿ ಕೇಂದ್ರೀಯ ವಿದ್ಯಾಲಯವನ್ನು ಕಳೆದ ವರ್ಷ ಪ್ರಾರಂಭಿಸಲಾಗಿದ್ದು ಈ ಶಾಲೆಯ ಕಟ್ಟಡ ಹಾಗೂ ಮೈದಾನಕ್ಕಾಗಿ ಮಂಚನಹಳ್ಳಿ ರಸ್ತೆಯಲ್ಲಿ ಹತ್ತು ಎಕರೆ ಭೂಮಿಯನ್ನು ಪಡೆಯಲಾಗಿದ್ದು ಕಟ್ಟಡ ಕಾಮಗಾರಿ ಪ್ರಾರಂಭವಾಗಲಿದೆ.ಮರಳೂರು ಬಳಿ ಸರ್ಕಾರಿ ಪಾಲಿಟೆಕ್ನಿಕ್ ಪ್ರಾರಂಭವಾಗಲಿದೆ ಎಂದು ತಿಳಿಸಿದರು.
ಕಂದಾಯ ಇಲಾಖೆ ಸಂಬಂಧ ಹೆಚ್ಚು ಅರ್ಜಿ: ತಹಶೀಲ್ದಾರ್ ಶ್ರೀನಿವಾಸ್ ಮಾತನಾಡಿ, ನಗರವ್ಯಾಪ್ತಿಯ ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸಲು ಇಂದು ಕುಂದುಕೊರತೆ ಸಭೆಯನ್ನು ನಡೆಸಲಾಗುತ್ತಿದ್ದು ಮನವಿ ಸಲ್ಲಿಸುವ ನಾಗರೀಕರಿಗೆ ಸ್ಥಳದಲ್ಲಿಯೇ ಆಯಾ ಇಲಾಖೆಯ ಸಂಬಂಧ ಪಟ್ಟ ಅಧಿಕಾರಿಗಳಿಗೆ ನೀಡಿ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಭಾಗ್ಯಲಕ್ಷ್ಮಿ ಬಾಂಡ್, ಮನೆಮಂಜೂರಾತಿ ಪತ್ರ, ಉದ್ದಿಮೆ ಪರವಾನಿಗೆ ಪತ್ರ, ಮನಸ್ವಿನಿ ಪತ್ರ, ಹಕ್ಕು ಪತ್ರ ಸೇರಿದಂತೆ ವಿವಿಧ ಸವಲತ್ತುಗಳನ್ನು ಸಚಿವರು ವಿತರಿಸಿದರು. ಒಟ್ಟು 233 ಅರ್ಜಿಗಳು ಬಂದಿದ್ದವು. ಶೇ. 90 ರಷ್ಟು ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿದ್ದು ಬಂದಿದೆ ಎಂದು ತಹಸೀಲ್ದಾರ್ ಮತ್ತು ಪೌರಾಯುಕ್ತರು ತಿಳಿಸಿದರು.
ಸಭೆಯಲ್ಲಿ ನಗರಸಭೆ ಆಯುಕ್ತ ಉಮಾಕಾಂತ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮೇಶ್, ನಗರಸಭೆ ಮಾಜಿ ಅಧ್ಯಕ್ಷ ನರಸಿಂಹಮೂರ್ತಿ, ಕಲೀಂಉಲ್ಲಾ, ಮುಖಂಡರಾದ ಪ್ರಕಾಶ್‌ರೆಡ್ಡಿ, ಶಫೀಕ್‌ಖಾನ್, ಗೋಪಿನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ, ಮಾಜಿ ಅಧ್ಯಕ್ಷ ನರಸಿಂಹಮೂರ್ತಿ, ಗೀತಾಜಯಂಧರ್, ಮರಳೂರು ಹನುಮಂತರೆಡ್ಡಿ, ವಿ.ರಮೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸೆಪ್ಟೆಂಬರ್ ವೇಳೆಗೆ ನೀರು: ಗೌರಿಬಿದನೂರು ಪಟ್ಟಣದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಹೆಬ್ಟಾಳದ ಎಚ್.ಎನ್.ವ್ಯಾಲಿ ನೀರನ್ನು 3ನೇ ಹಂತದಲ್ಲಿ ಶುದ್ಧೀಕರಿಸಿ ನಗರ ಸಮೀಪದ ಕಿಂಡಿಬಳಿಗೆ ತಂದು ಅಲ್ಲಿಂದ 8 ಕೆರೆಗಳಿಗೆ ನೀರು ತುಂಬಿಸಲಾಗುವುದು ಕೆರೆಗಳಲ್ಲಿ ನೀರು ತುಂಬಿದಲ್ಲಿ ಕೊಳವೇ ಭಾವಿಗಳಲ್ಲಿ ಅಂತರ್ಜಲ ಹೆಚ್ಚಿ ನೀರು ಮರುಪೂರಣವಾಗಲಿದು ಗೌರಿಬಿದನೂರು ನಗರದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ. ಸೆಪ್ಟೆಂಬರ್ ವೇಳೆಗೆ ನೀರು ಹರಿಯಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.