3 ವರ್ಷದೊಳಗೆ ನಿವೇಶನ ಹಂಚಿಕೆ
Team Udayavani, Mar 23, 2020, 3:00 AM IST
ಗುಡಿಬಂಡೆ: ಮೂರು ವರ್ಷದೊಳಗೆ ಕ್ಷೇತ್ರದ ಎಲ್ಲಾ ನಿವೇಶನ ರಹಿತರಿಗೆ ನಿವೇಶನ ನೀಡಲಾಗುವುದು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು. ತಾಲೂಕಿನ ಬೀಚಗಾನಹಳ್ಳಿ ಗ್ರಾಪಂನ ಧೂಮಕುಂಟಹಳ್ಳಿಯಲ್ಲಿ ಬೀಚಗಾನಹಳ್ಳಿ ಗ್ರಾಪಂ ವತಿಯಿಂದ ಆಶ್ರಯ ಯೋಜನೆಯಡಿ ನಿವೇಶನಗಳ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯಾರಿಗೆ ನಿವೇಶನ ಇಲ್ಲವೋ ಅಂತಹವರಿಗೆ ನೀಡಿ. ಕೆಲ ಗ್ರಾಮಗಳಲ್ಲಿ ಮುಖಂಡರಿಗೆ, ಬೇಕಾದವರಿಗೆ ಮಾತ್ರ ನಿವೇಶನ ನೀಡಲಾಗುತ್ತಿದೆ. ಪ್ರತಿ ಗ್ರಾಪಂ ಪಿಡಿಒಗಳು ನಿವೇಶನ ರಹಿತರಿಗೆ ಮಾತ್ರ ನಿವೇಶನ ಹಂಚಿಕೆ ಮಾಡಬೇಕು. ಅಕ್ರಮ ನಡೆದರೆ ನನ್ನ ಗಮನಕ್ಕೆ ತನ್ನಿ ಎಂದರು.
25 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಧೂಮಕುಂಟಹಳ್ಳಿಯ ನಿವೇಶನ ರಹಿತರಿಗೆ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿವೇಶನ ಯೋಜನೆಯಡಿ ಒಟ್ಟು 37 ಫಲಾನುಭವಿಗಳಿಗೆ ಮಂಜೂರಾಗಿದ್ದು, 25 ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ನೀಡಿದರು. ಉಳಿದವರಿಗೆ ಹಕ್ಕುಪತ್ರ ಬಂದ ನಂತರ ನೀಡಲಾಗುವುದು ಎಂದರು.
ನಿವೇಶನ ಜಾಗದಲ್ಲಿ ಉಳುಮೆ ಮಾಡುತ್ತಿರುವವರಿಗೆ ಬೇರೆ ಕಡೆ ಜಮೀನು ಗುರುತಿಸಿದರೆ ಅವರಿಗೆ ಜಮೀನು ಮಂಜೂರು ಮಾಡಿಸುವುದಾಗಿ ಭರವಸೆ ನೀಡಿದರು. ಬೀಚಗಾನಹಳ್ಳಿ ಗ್ರಾಪಂ ಉಪಾಧ್ಯಕ್ಷ ಬಿ.ಆರ್.ಮಹೇಶ್, ಮುಖಂಡ ಕೃಷ್ಣೇಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಬಾಲೇನಹಳ್ಳಿ ರಮೇಶ್ ಮಾತನಾಡಿದರು. ಈ ವೇಳೆ ತಾಪಂ ಅಧ್ಯಕ್ಷೆ ವರಲಕ್ಷಿ, ಬೀಚಗಾನಹಳ್ಳಿ ಗ್ರಾಪಂ ಅಧ್ಯಕ್ಷೆ ಶಿವಮ್ಮ, ಸದಸ್ಯರಾದ ಸಿ.ಗಂಗರಾಜು, ಕವಿತಾ,
ಕೆ.ದೇವಿಕಾ, ಡಿ.ಎನ್.ಜಯಲಕ್ಷಿ, ಡಿ.ಎ.ವೆಂಕಟೇಶಪ್ಪ, ಪಿಡಿಒ ಎ.ಆರ್.ಶ್ರೀನಿವಾಸ್, ಸಿಬ್ಬಂದಿ ಅಶೋಕ್, ಮಂಜುನಾಥ, ಹೌಸಿಂಗ್ ನೋಡಲ್ ಅಧಿಕಾರಿ ಡಿ.ಜಿ.ರಂಗಪ್ಪ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ರಮೇಶ್, ಮುಖಂಡರಾದ ರಮೇಶ್, ನರೇಂದ್ರ, ಮೂರ್ತಿ, ರಾಮಚಂದ್ರ, ರಿಯಾಜ್ ಪಾಷ, ಜೀವಿಕ ನಾರಾಯಣಸ್ವಾಮಿ, ಅಮರಾವತಿ, ರಾಮಾಂಜಿ ಸೇರಿದಂತೆ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.