ಹಸಿವು ಮುಕ್ತ ಕರ್ನಾಟಕ ಸಂಕಲ್ಪ
Team Udayavani, Feb 12, 2019, 7:25 AM IST
ಶಿಡ್ಲಘಟ್ಟ: ರಾಜ್ಯದಲ್ಲಿ ಎಲ್ಲಾ ಬಡವರಿಗೆ ಅನ್ನಭಾಗ್ಯ ಹಾಗೂ ಇಂದಿರಾ ಕ್ಯಾಂಟೀನ್ ಮೂಲಕ ಅಗ್ಗದ ದರದಲ್ಲಿ ತಿಂಡಿ-ಊಟದ ವ್ಯವಸ್ಥೆ ಮಾಡುವ ಸಂಕಲ್ಪ ಸರ್ಕಾರ ಮಾಡಿದೆ ಎಂದು ಶಾಸಕ ವಿ.ಮುನಿಯಪ್ಪ ಹೇಳಿದರು.
ನಗರದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿ, ಕೂಲಿ ಕಾರ್ಮಿಕರು ಬಡವರಿಗೆ ಇಂದಿರಾ ಕ್ಯಾಂಟೀನ್‌ನಲ್ಲಿ ಕಡಿಮೆ ಬೆಲೆಯಲ್ಲಿ ರುಚಿ, ಶುಚಿಯಾದ ತಿಂಡಿ ಊಟ ದೊರೆಯಲಿದೆ ಎಂದು ಹೇಳಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯವನ್ನು ಹಸಿವು ಮುಕ್ತ ಮಾಡಲು ಕೈಗೊಂಡಿರುವ ಕ್ರಾಂತಿಕಾರಿ ಯೋಜನೆಯನ್ನು ಹಾಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಂದು ವರಿಸಿ ಬಡವರಿಗೆ ಅನುಕೂಲ ಕಲ್ಪಿಸಿದ್ದಾರೆ.
ಜೊತೆಗೆ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕೋಲಾರ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವಿ.ಸುಬ್ರಮಣಿ, ಮಾಜಿ ಸದಸ್ಯ ಎನ್.ಮುನಿಯಪ್ಪ, ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ನಾಗರಾಜ್, ಜಿಪಂ ಉಪಾಧ್ಯಕ್ಷೆ ನಿರ್ಮಲಾ, ನಗರಸಭೆ ಅಧ್ಯಕ್ಷ ಅಪ್ಸರ್‌ಪಾಷ, ಉಪಾಧ್ಯಕ್ಷೆ ಪ್ರಭಾವತಿಸುರೇಶ್, ಜಿಲ್ಲಾ ಯೋಜನಾ ನಿರ್ದೇಶಕ ಡಾ.ಭಾಸ್ಕರ್,
ನಗರಸಭೆ ಪೌರಾಯುಕ್ತ ಚಲಪತಿ, ತಹಶೀಲ್ದಾರ್ ಅಜಿತ್ ಕುಮಾರ್ ರೈ, ಇಒ ಶಿವ ಕುಮಾರ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಭೀಮೇಶ್, ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ಗುಡಿಯಪ್ಪ, ನಗರಸಭೆ ಮಾಜಿ ಅಧ್ಯಕ್ಷ ಕೆ.ಎನ್.ಜಗನ್ನಾಥ್, ಮೈನಾರಿಟಿ ಕಾಂಗ್ರೆಸ್ ಅಧ್ಯಕ್ಷ ಅಮ್ಜದ್, ನಗರಸಭಾ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.