ಜೀವವೈವಿಧ್ಯ ತಾಣವಾಗಿ ಗುರುತಿಸಿ: ಅನಂತ ಹೆಗಡೆ
Team Udayavani, Aug 30, 2020, 1:33 PM IST
ಗುಡಿಬಂಡೆ: ಪಟ್ಟಣದ ಸುರಸದ್ಮಗಿರಿ ಬೆಟ್ಟ ಹಾಗೂ ಎಲ್ಲೋಡು ಗ್ರಾಮದ ಶ್ರೀ ಲಕ್ಷ್ಮೀ ಆದಿನಾರಾಯಣಸ್ವಾಮಿ ಬೆಟ್ಟವನ್ನು ಸಂರಕ್ಷಣೆ ಮಾಡಲು ಸಮಿತಿಗಳು ಕ್ರಿಯಾಶೀಲವಾಗಿ ಕೆಲಸ ಮಾಡಿ ಜೀವ ವೈವಿಧ್ಯ ತಾಣವನ್ನಾಗಿ ಮಾಡಬೇಕು ಎಂದು ಕರ್ನಾಟಕ ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ತಿಳಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದಜೀವ ವೈವಿಧ್ಯ ಕಾಯ್ದೆ ಸಮಿತಿಗಳ ಸಮಾಲೋಚನಾ ಸಭೆಯಲ್ಲಿ ಈ ವೇಳೆ ಮಾತನಾಡಿದ ಅವರು, ಜೈವಿಕ ವೈವಿಧ್ಯ ಅಧಿನಿಯಮಗಳ ಪ್ರಕಾರ ಪ್ರತಿ ಪಂಚಾಯಿತಿಗಳಲ್ಲಿ ಕಡ್ಡಾಯವಾಗಿ ಜೀವ ವೈವಿಧ್ಯ ನಿರ್ವಹಣಾ ಸಮಿತಿ ರಚಿಸಬೇಕು. ಈ ಸಮಿತಿಯು ತನ್ನ ಅಧಿಕಾರ ವ್ಯಾಪ್ತಿ ಯಲ್ಲಿ ಜೀವ ವೈವಿಧ್ಯ ಸಂರಕ್ಷಣೆ, ಜೈವಿಕ ಸಂಪನ್ಮೂಲಗಳ ಸುಸ್ಥಿರ ಬಳಕೆ, ಜೀವಿಗಳ ಆವಾಸ ಸ್ಥಾನಗಳನ್ನು ಗುರುತಿಸುವಿಕೆ, ನದಿ ಮೂಲಗಳ ಗುರುತಿಸುವ ಹಾಗೂ ಸಂರಕ್ಷಣೆ ಸೇರಿದಂತೆ ಸ್ಥಳೀಯವಾಗಿ ಬೆಳೆಯಬಹುದಾದ ತೊಟಗಾರಿಕೆ, ಅರಣ್ಯ ಸಸಿಗಳ ಕುರಿತು ದಾಖಲಾತಿ ಮಾಡುವುದು ಈ ಸಮಿತಿಗಳ ಕೆಲಸವಾಗಿದೆ ಎಂದರು.
ನದಿ ಮೂಲಗಳು ಒತ್ತುವರಿ ಒತ್ತುವರಿ ತೆರವುಗೊಳಿಸಿದ ನಂತರ ಆ ಭಾಗದಲ್ಲಿ ಬೇಲಿ ಹಾಕುವ ಬದಲು ಅಚ್ಚುಕಟ್ಟು ಪ್ರದೇಶದಲ್ಲಿ ಉಪಯುಕ್ತವಾದ ಮರಗಳನ್ನು ಬೆಳೆಸುವುದರಿಂದ ಹಲವಾರು ಜೀವರಾಶಿಗಳಿಗೆ ಸಹಕಾರಿಯಾಗುತ್ತದೆ ಎಂದರು. ತಹಶೀಲ್ದಾರ್ ಸಿಗ್ಬತ್ತುಲ್ಲಾ, ತಾಪಂ ಇಒ ಚಂದ್ರಕಾಂತ್, ಅಧ್ಯಕ್ಷೆ ವರಲಕ್ಷ್ಮೀ, ಉಪಾಧ್ಯಕ್ಷಬೈರಾರೆಡ್ಡಿ, ಗ್ರಾಮ ವಿಕಾಸ ಸಂಸ್ಥೆಯ ಶ್ರೀಧರ್ ಸಾಗರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಕೃಷಿ, ತೋಟಗಾರಿಕೆ, ಸಾಮಾಜಿಕ ಹಾಗೂ ವಲಯ ಅರಣ್ಯ ಇಲಾಖೆ ಅಧಿಕಾರಿಗಳು, ಗ್ರಾಪಂ, ಪಿಡಿಒಗಳು ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.