ಅಕ್ರಮ ಗ್ಯಾಸ್ ರಿಫಿಲ್ಲಿಂಗ್: ಸಿಲಿಂಡರ್‌ಗಳ ವಶ
Team Udayavani, Jan 18, 2022, 1:12 PM IST
ಚಿಕ್ಕಬಳ್ಳಾಪುರ: ಅನಧಿಕೃತವಾಗಿ ಗ್ಯಾಸ್ ರಿಫಿಲ್ಲಿಂಗ್ ಮಾಡಿ ಸರಬರಾಜು ಮತ್ತು ಮಾರಾಟ ಕೇಂದ್ರದಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ ನಡೆಸಿಗೃಹ, ವಾಣಿಜ್ಯ ಬಳಕೆ ಸಿಲಿಂಡರ್‌ಗಳನ್ನು ವಶಕ್ಕೆಪಡೆದು. ಆರೋಪಿಯನ್ನು ಬಂಧಿಸಿ, ಕೋರ್ಟ್‌ಜಾಮೀನಿನ ಮೇಲೆ ಬಿಡುಗಡೆ ಮಾಡಿರುವ ಘಟನೆತಾಲೂಕಿನ ರೆಡ್ಡಿಗೊಲ್ಲವಾರಹಳ್ಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಆಹಾರ ಇಲಾಖೆ ಶಿರಸ್ತೇದಾರ್ ಬಿ.ಜಿ.ಗೌತಮ್ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ, ಓರ್ವನನ್ನು ವಶಕ್ಕೆ ಪಡೆದು, ಆತನ ಎರಡುವಾಹನಗಳಲ್ಲಿದ್ದ ಗೃಹ, ವಾಣಿಜ್ಯ ಬಳಕೆ ಸಿಲಿಂಡರ್‌ವಶಕ್ಕೆ ಪಡೆದಿದೆ. ಬಂಧಿತ ರೆಡ್ಡಿಗೊಲ್ಲವಾರಹಳ್ಳಿಯ ಜಿ.ಆರ್.ಸುನೀಲ್ ಕೋರ್ಟ್ ಜಾಮೀನಿನ ಮೇಲೆಬಿಡುಗಡೆ ಆಗಿದ್ದಾರೆ ಎಂದು ಪೆರೇಸಂದ್ರ ಪಿಎಸ್‌ಐ ಮಂಜುನಾಥ್ ತಿಳಿಸಿದ್ದಾರೆ.
ಏನಿದು ಪ್ರಕರಣ: ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲವಾರಹಳ್ಳಿ ಗ್ರಾಮದಲ್ಲಿ ಜಿ.ಆರ್.ಸುನೀಲ್ ಎಂಬಾತ ಅನಧಿಕೃತವಾಗಿ ಗ್ಯಾಸ್ ಸಿಲಿಂಡರ್‌ಗಳನ್ನು ಮಾರಾಟ ಮಾಡುತ್ತಿರುವ ಕುರಿತು ಬಂದ ಖಚಿತಮಾಹಿತಿ ಮೇರೆಗೆ ದಿಢೀರ್ ದಾಳಿ ನಡೆಸಿ, 12 ಖಾಲಿವಾಣಿಜ್ಯ ಬಳಕೆ ಸಿಲಿಂಡರ್ ಅಲ್ಲದೆ, 6 ಗೃಹ ಬಳಕೆ ಖಾಲಿ ಸಿಲಿಂಡರ್, 64 ತುಂಬಿದ ವಾಣಿಜ್ಯ ಬಳಕೆ ಸಿಲಿಂಡರ್ ವಶಕ್ಕೆ ಪಡೆಯಲಾಗಿದೆ ಎಂದು ಆಹಾರ ಇಲಾ ಖೆಯ ಶಿರಸ್ತೇದಾರ್ ಬಿ.ಜಿ.ಗೌತಮ್ ಪೆರೇಸಂದ್ರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಜಿ.ಆರ್.ಸುನೀಲ್ ಎಂಬಾತನನ್ನುವಿಚಾರಿಸಿದಾಗ ತಾನು ವಾಯುಪುತ್ರ ಎಂಟರ್‌ಪ್ರೈಸಸ್ ಎಂಬ ಸಂಸ್ಥೆಯಡಿ ಬೆಂಗಳೂರಿನ ಪೂರ್ಣಾದ್ರಿ ಎಂಟರ್‌ಪ್ರೈಸಸ್ ಗ್ಯಾಸ್ ವಿತರಕರಿಂದ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಖರೀದಿ ಮಾಡಿ, ಚಿಕ್ಕಬಳ್ಳಾಪುರ ಮತ್ತು ಪೆರೇಸಂದ್ರ ಸುತ್ತಮುತ್ತಲಿನಹೋಟೆಲ್, ಅಂಗಡಿಗಳಿಗೆ ಮಾರಾಟಮಾಡುತ್ತಿರುವುದಾಗಿ ತಿಳಿಸಿದ್ದಾನೆ. ಜಿ.ಆರ್.ಸುನೀಲ್‌ಹಾಜರು ಪಡಿಸಿದ ದಾಖಲೆ ಪರಿಶೀಲಿಸಿದಾಗ ಆತ ತನ್ನ ವಾಯುಪುತ್ರ ಎಂಟರ್‌ಪ್ರೈಸಸ್ ಅಡಿಯಲ್ಲಿಬೆಂಗಳೂರಿನ ಎನ್‌ಬಿಇ ಎಂಟರ್‌ಪ್ರೈಸಸ್‌ನಿಂದಕಮರ್ಷಿಯಲ್ ಗ್ಯಾಸ್ ಸಿಲಿಂಡರ್‌ಗಳನ್ನು ಮ್ಯಾನ್ಯುವಲ್ ಬಿಲ್ ಮೂಲಕ ಪಡೆದು ಸರಬರಾಜು ಮತ್ತು ಮಾರಾಟ ಮಾಡುತ್ತಿರುವುದನ್ನು ಸ್ಪಷ್ಟವಾಗಿದೆ.
ಆರೋಪಿಗೆ ಕೋರ್ಟ್ ಜಾಮೀನು: ಅಲ್ಲದೆ, ಸುನೀಲ್‌ಕುಮಾರ್ ಅವರ ಮನೆ ಮುಂದಿನ ಕಟ್ಟಡದಲ್ಲಿ ಗ್ಯಾಸ್ ಸಿಲಿಂಡರ್ ಸಂಗ್ರಹ ಮಾಡಿದ್ದು,ಇದಕ್ಕೆ ಯಾವುದೇ ಅನುಮತಿ ಅಥವಾ ಪರವಾನಗಿ ಹೊಂದಿರುವುದಕ್ಕೆ ದಾಖಲೆ ನೀಡಿಲ್ಲ. ಪ್ರಕರಣಕ್ಕೆಸಂಬಂಧಪಟ್ಟಂತೆ ಜಿ.ಆರ್.ಸುನೀಲ್ ಅವರ ತಂದೆರಾಮಕೃಷ್ಣಪ್ಪ ಹಾಗೂ ಸಹೋದರ ಅನಿಲ್ ವಿರುದ್ಧ ಸಹ ದೂರು ದಾಖಲಾಗಿದೆ.
ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲವಾರಹಳ್ಳಿ ಗ್ರಾಮದಲ್ಲಿ ಜಿ.ಆರ್.ಸುನೀಲ್ ಎಂಬಾತ ಅನಧಿಕೃತವಾಗಿ ಸಿಲಿಂಡರ್ ಸರಬರಾಜು ಮಾಡುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಕಾನೂನು ರೀತಿಯ ಕ್ರಮ ಜರುಗಿಸಿದ್ದಾರೆ. –ಸವಿತಾ, ಉಪನಿರ್ದೇಶಕಿ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.