ವೈದ್ಯಕೀಯ ವೆಚ್ಚ ಮರುಪಾವತಿಯಲ್ಲಿ ಅಕ್ರಮ
Team Udayavani, Jun 2, 2020, 7:00 AM IST
ಚಿಕ್ಕಬಳ್ಳಾಪುರ: ವೈದ್ಯಕೀಯ ವೆಚ್ಚ ಮರುಪಾವತಿ ಮಾಡುವ ವಿಷಯದಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಎಚ್. ವಂಶಿಕೃಷ್ಣ ಎಂಬಾತ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಹಿ ನಕಲು ಮಾಡಿ ಲಕ್ಷಾಂತರ ರೂ. ಅಕ್ರಮ ಬಿಲ್ ಪಾವತಿಗೆ ಅನುಮೋದನೆ ನೀಡಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಗೌರಿಬಿದನೂರಿನ 107 ಮಂದಿ ಶಿಕ್ಷಕರಿಗೆ ವಿಚಾರಣೆಗೆ ಹಾಜರಾಗುವಂತೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಏನಿದು ಪ್ರಕರಣ?: ಸರ್ಕಾರಿ ಅಧಿಕಾರಿಗಳಿಗೆ ಹಾಗೂ ನೌಕರರಿಗೆ ತಮಗೆ ತಗಲುವ ವೈ ವೆಚ್ಚವನ್ನು ಮರು ಪಾವತಿ ಮಾಡಿಕೊಳ್ಳಲು ಅವಕಾಶ ಇದ್ದು ಇದಕ್ಕೆ ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕರ ದೃಢೀಕರಣ ಅಗತ್ಯ. ಆದರೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ 107 ಮಂದಿ ಪ್ರಾಥಮಿಕ ಶಾಲಾ ಶಿಕ್ಷಕರ ವೈದ್ಯಕೀಯ ವೆಚ್ಚ ಮರು ಪಾವತಿಸುವ ವಿಚಾರದಲ್ಲಿ ಜಿಲ್ಲಾಸ್ಪತ್ರೆಯ ಪ್ರಥಮ ದರ್ಜೆ ಸಹಾಯಕ ವಂಶಿಕೃಷ್ಣ ಎಂಬಾತ ಶಸ್ತ್ರಚಿಕಿತ್ಸಕರ ಸಹಿ ನಕಲು ಮಾಡಿ ಅಕ್ರಮವೆಸಗಿರುವ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಆಸ್ಪತ್ರೆಯ ಶಸ್ತ್ರಚಿಕಿತ್ಸಕರು ಚಿಕ್ಕಬಳ್ಳಾಪುರ ನಗರ ಠಾಣೆ ಆರಕ್ಷಕ ಉಪ ನಿರೀಕ್ಷಕರಿಗೆ ಕೋರಿದ್ದರು.
ಶಿಕ್ಷಕರಿಗೆ ನೋಟಿಸ್: ಈಗ 2015 ಜೂನ್ 4ರಿಂದ 2018ರ ಜನವರಿ 1 ರವರೆಗೂ ವೈದ್ಯಕೀಯ ವೆಚ್ಚ ಮರು ಪಾವತಿ ಮಾಡಿಕೊಳ್ಳಲು ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕರ ಸಹಿಯನ್ನು ಆಸ್ಪತ್ರೆಯ ಪ್ರಥಮ ದರ್ಜೆ ಸಹಾಯಕ ನಕಲು ಮಾಡಿ 107 ಮಂದಿಗೆ ದೃಢೀಕರಣ ನೀಡಿರುವ ಹಿನ್ನೆಲೆಯಲ್ಲಿ 107 ಮಂದಿ ಶಿಕ್ಷಕರನ್ನು ವಿಚಾರಣೆಗೆ ಕರೆದಿದ್ದು, ಸೋಮವಾರ 15 ಮಂದಿ ಶಿಕ್ಷಕರು ವಿಚಾರಣೆಗೆ ಹಾಜರಾಗಿದ್ದರು. ಒಟ್ಟು 7 ದಿನಗಳನ್ನು ನಿಗದಿಪಡಿಸಿ ಶಿಕ್ಷಕರ ನ್ನು ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ವಿಚಾರಣೆಗೆ ಕರೆದಿದ್ದು, ಪ್ರಕರಣ ಸಾಕಷ್ಟು ಕುತೂಹಲ ಕೆರಳಿಸಿದೆ.
ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ವಂಶಿಕೃಷ್ಣ ಈ ಹಿಂದೆ ಶಸ್ತ್ರಚಿಕಿತ್ಸಕರ ಸಹಿ ನಕಲು ಮಾಡಿ ಕೆಲ ಶಿಕ್ಷಕರಿಗೆ ವೈದ್ಯಕೀಯ ವೆಚ್ಚ ಮರು ಪಾವತಿಗೆ ದೃಢೀಕರಣ ಮಾಡಿದ್ದು, ಈ ಬಗ್ಗೆ ಸೂಕ್ತ ವಿಚಾರಣೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ವಹಿಸುವಂತೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ.
-ಡಾ.ರಮೇಶ್, ಜಿಲ್ಲಾಸ್ಪತ್ರೆಯ ನಿವಾಸಿ ವೈದ್ಯರು
* ಕಾಗತಿ ನಾಗರಾಜಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ
ಡಿ. 31: ಸಾಸ್ತಾನ ಟೋಲ್ ವಿರುದ್ಧ ಬೃಹತ್ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.