ಪ್ರಜಾಪ್ರಭುತ್ವದಲ್ಲಿ ಹಣ ಬಲ ಸೋಲಲಿ, ಜನಬಲ ಗೆಲ್ಲಲಿ

Team Udayavani, Nov 18, 2019, 3:00 AM IST

prajaprabhu

ಚಿಕ್ಕಬಳ್ಳಾಪುರ: ತಮ್ಮ ಸ್ವಾರ್ಥ ರಾಜಕೀಯ ಲಾಭಕ್ಕಾಗಿ ಮತದಾರರಿಗೆ ಸೀರೆ, ಮದ್ಯ, ಹಣ ನೀಡುವ ಮಾಫಿಯಾ ರಾಜಕಾರಣಿಗಳಿಗೆ ಮತ ಹಾಕದೇ ಸಾರ್ವಜನಿಕರ ಸಮಸ್ಯೆಗಳನ್ನು ವಿಧಾನಸಭೆ ಕಲಾಪಗಳಲ್ಲಿ ಚರ್ಚೆ ಮಾಡುವಂತಹ ವ್ಯಕ್ತಿಯನ್ನು ಆಯ್ಕೆ ಮಾಡಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವಂತಹ ಬಿಎಸ್ಪಿಗೆ ಮತ ನೀಡುವಂತೆ ಬಿಎಸ್ಪಿ ಅಭ್ಯರ್ಥಿ ದೇವನಹಳ್ಳಿ ಡಿ.ಆರ್‌.ನಾರಾಯಣಸ್ವಾಮಿ ಮನವಿ ಮಾಡಿದರು.

ತಾಲೂಕಿನ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಂಚೇನಹಳ್ಳಿಯಲ್ಲಿ ಭಾನುವಾರ ಉಪಚುನಾವಣೆ ಹಿನ್ನೆಲೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿ ಉಪ ಚುನಾವಣೆಯಲ್ಲಿ ಮತದಾರರು ಹಣ, ಆಮಿಷಕ್ಕೆ ಒಳಗಾಗದೆ ಕ್ಷೇತ್ರದ ಎಲ್ಲಾ ಸಮುದಾಯಗಳ ಅಭಿವೃದ್ಧಿಗಾಗಿ ಸೂಕ್ತ ವ್ಯಕ್ತಿಗೆ ಮತದಾನ ಮಾಡಿ ಎಂದರು. ಅನರ್ಹ ಶಾಸಕರು ವ್ಯಾಪಾರದ ದೃಷ್ಟಿಯಿಂದ ಅಲೋಚನೆ ಮಾಡುತ್ತಾರೆ. ವಿನಾಃ ಸಾರ್ವಜನಿಕರ ಕುಂದುಕೊರತೆ ಬಗ್ಗೆ ಕನಿಷ್ಠ ಆಸಕ್ತಿ ತೋರುತ್ತಿಲ್ಲ. ಚುನಾವಣೆಯಲ್ಲಿ ಕೋಟಿಗಟ್ಟಲೆ ಹಣ ಸುರಿದು ಮತ ಗಳಿಸಿದ ನಂತರ ಯಾರೂ ಅವರನ್ನು ಪ್ರಶ್ನಿಸುವಂತಿಲ್ಲ ಎಂದರು.

ಸಹೋದರತೆ ಸಿದ್ಧಾಂತ: ಸತತ ಬರಗಾಲಕ್ಕೆ ತುತ್ತಾಗಿರುವ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ, ಶಾಶ್ವತ ಕುಡಿಯುವ ನೀರಾವರಿ ಯೋಜನೆ ಜಾರಿ ಮತ್ತು ಎಲ್ಲಾ ಸಮಾಜದ ಬಂಧುಗಳನ್ನು ಸಹೋದರತೆಯ ಸಿದ್ಧಾಂತದ ಮೇಲೆ ಒಂದುಗೂಡಿಸಿ ಸಮ ಸಮಾಜ ನಿರ್ಮಿಸುವ ಉದ್ದೇಶ ಹೊಂದಿರುವ ಏಕೈಕ ಪಕ್ಷ ಬಿಎಸ್ಪಿ. ಈ ಬಾರಿ ಜನರು ಬಿಎಸ್ಪಿ ಪಕ್ಷಕ್ಕೆ ಆದ್ಯತೆ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಉಪ ಚುನಾವಣೆಯಲ್ಲಿ ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿ ಅಭ್ಯರ್ಥಿಗಳಿಗಿಂತ ಬಿಎಸ್ಪಿ ಅಭ್ಯರ್ಥಿಯನ್ನು ಎಲ್ಲಾ ಸಮುದಾಯ ಜನ ಬೆಂಬಲಿಸಲಿದ್ದಾರೆ.

ಕ್ಷೇತ್ರದ ಜನತೆ ಬಿಜೆಪಿ ಮತ್ತು ಕಾಂಗ್ರೆಸ್‌ ದುರಾಡಳಿತದಿಂದ ಬೇಸತ್ತಿದ್ದಾರೆ ಎಂದರು. ಪ್ರಚಾರ ಸಭೆಯಲ್ಲಿ ಬಿಎಸ್ಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಪಿ.ವಿ.ನಾಗಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ಅಪ್ಸರ್‌ ಪಾಷಾ, ಉಪಾಧ್ಯಕ್ಷರಾದ ಬಾಗೇಪಲ್ಲಿ ವೆಂಕಟೆಶ್, ದೇವಪ್ಪ, ಜಿಲ್ಲಾ ಸಂಯೋಜಕ ಎಂ.ಮುನಿಕೃಷ್ಣಯ್ಯ, ಕಾರ್ಯದರ್ಶಿ ಕೆ. ಮೂರ್ತಿ, ಕಾರ್ಯಕರ್ತರಾದ ಬಾಲಕೃಷ್ಣ, ಹರೀಶ, ತಮಟೆ ಮೂರ್ತಿ, ಮೂರ್ತಿ, ಬಾಲಕೃಷ್ಣಪ್ಪ, ಮಂಜುನಾಥ, ಶಿವಪ್ಪ ಉಪಸ್ಥಿತರಿದ್ದರು.

ಚಿಕ್ಕಬಳ್ಳಾಪುರ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಪಕ್ಷಗಳ ಸುಳ್ಳು ಭರವಸೆಗಳನ್ನು ನೋಡಿ ಕ್ಷೇತ್ರದ ಜನ ಮೋಸ ಹೋಗಿದ್ದಾರೆ. ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಸಮುದಾಯಗಳು ಈ ಬಾರಿ ಬಿಎಸ್ಪಿಯನ್ನು ಬೆಂಬಲಿಸಲಿದ್ದಾರೆ. ಈ ಬಾರಿ ಬಿಎಸ್ಪಿ ಅಭ್ಯರ್ಥಿ ಗೆಲುವು ಖಚಿತ.
-ಡಿ.ಆರ್‌.ನಾರಾಯಣಸ್ವಾಮಿ, ಬಿಎಸ್ಪಿ ಅಭ್ಯರ್ಥಿ

ಟಾಪ್ ನ್ಯೂಸ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.