ಪದವಿ ಜತೆಗೆ ಕೌಶಲ್ಯ ಇರಲಿ
Team Udayavani, May 16, 2019, 3:00 AM IST
ಚಿಕ್ಕಬಳ್ಳಾಪುರ: ಇಂದಿನ ಸ್ಪರ್ಧಾತ್ಮ ಜಗತ್ತಿನಲ್ಲಿ ಉದ್ಯೋಗವಾಕಾಶಗಳನ್ನು ಗಿಟ್ಟಿಸಿಕೊಳ್ಳಲು ಕೇವಲ ಪದವಿ ಗಳಿಸಿದರೆ ಸಾಲದು, ಕೌಶಲ್ಯಗಳು ಕೂಡ ಮುಖ್ಯವಾಗುತ್ತವೆ. ಆದರೆ ಇತ್ತೀಚಿನ ದಿನಗಳಲ್ಲಿ ಪದವಿ ಪಡೆಯುವ ವಿದ್ಯಾರ್ಥಿಗಳು ಕೌಶಲ್ಯಗಳ ಕಡೆ ಗಮನ ಕೊಡುತ್ತಿಲ್ಲ ಎಂದು ಬಿಜಿಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಡಾ.ಎನ್.ಶಿವರಾಮರೆಡ್ಡಿ ಎಂದು ಬೇಸರ ವ್ಯಕ್ತಪಡಿಸಿದರು.
ನಗರದ ಹೊರ ವಲಯದ ಎಸ್‌ಜೆಸಿಐಟಿ ಕ್ಯಾಂಪಸ್‌ನ ಬಿಜಿಎಸ್‌ಐಂಎಸ್ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಬಿಜಿಎಸ್‌ಐಎಂಎಸ್ ಅಂತಿಮ ಸೆಮಿಸ್ಟರ್ ಬಿಬಿಎ ಹಾಗೂ ಬಿ.ಕಾಂ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಸಾಧನೆ ಹಿಂದೆ ಶ್ರಮ: ಕಲಿಕೆ ನಿಂತ ನೀರು ಆಗಬಾರದು. ಹುಟ್ಟಿನಿಂದ ಸಾವಿನವರೆಗೂ ಮನುಷ್ಯ ಕಲಿಯುವುದು ಇರುತ್ತದೆ. ಜೀವನದಲ್ಲಿ ಯಾವುದೂ ಕೂಡ ಸುಲಭವಾಗಿ ಕೈಗೆಟುಕುವುದಿಲ್ಲ. ಸಾಧನೆ ಹಿಂದೆ ಪರಿಶ್ರಮ ಇರುತ್ತದೆ. ಐಎಎಸ್, ಐಪಿಎಸ್ ಹುದ್ದೆಗಳನ್ನು ಅಲಂಕರಿಸುವವರ ಹಿಂದೆ ಅವಿರತ ಶ್ರಮ ಅಡಗಿರುತ್ತದೆ ಎಂದರು.
ಶಿಸ್ತು ಸಂಯಮ ಇರಲಿ: ದೇಶದ ಅತ್ಯುನ್ನತ ಶಿಕ್ಷಣ ಸಂಸ್ಥೆಗಳಾದ ಐಐಟಿ, ಐಐಎಂಗಳಲ್ಲಿ ಹಗಲು ರಾತ್ರಿ ಪಾಠ ನಡೆಯುತ್ತವೆ. ವಿದ್ಯಾರ್ಥಿಗಳು ನಿರಂತರವಾಗಿ ಅಧ್ಯಯನಶೀಲರಾಗಬೇಕು. ಜೀವನದಲ್ಲಿ ವಿದ್ಯಾರ್ಥಿಗಳಿಗೆ ಶಿಸ್ತು, ಸಂಯಮ, ಸಂಸ್ಕೃತಿ, ಸಂಸ್ಕಾರ ರೂಢಿಸಿಕೊಂಡರೆ ಭವಿಷ್ಯದ್ಯದಲ್ಲಿ ಕೂಡ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು. ಕಾಲೇಜು ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಉಪನ್ಯಾಸಕರು ಮಾರ್ಗದರ್ಶನವಾಗಿರುತ್ತಾರೆ. ಆದರೆ ಕಾಲೇಜು ಬಿಟ್ಟ ನಂತರ ನಿಮಗೆ ನೀವೇ ದಾರಿದೀಪವಾಗಬೇಕೆಂದು ಸಲಹೆ ನೀಡಿದರು.
ಬಿಜಿಎಸ್ ಐಎಮ್‌ಎಸ್ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ್ ಬಾಬು ಮಾತನಾಡಿ, ಪದವಿ ಪೂರೈಸಿದ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ನಿರ್ಧಾರವನ್ನು ತೆಗೆದುಕೊಳ್ಳಲು ಸೂಕ್ತ ಸಮಯ. ಸರಿಯಾದ ಮಾರ್ಗದರ್ಶನದಲ್ಲಿ ಮುನ್ನಡೆದರೆ ವಿದ್ಯಾರ್ಥಿಗಳ ಬದುಕು ಸುಂದರವಾಗಿರುತ್ತದೆ. ಜೀವನದಲ್ಲಿ ವಿದ್ಯಾರ್ಥಿಗಳು ದೊಡ್ಡ ದೊಡ್ಡ ಕನಸುಗಳನ್ನು ಇಟ್ಟುಕೊಂಡು ಮುನ್ನಡೆಯಬೇಕು. ಸದ್ಗುಣಗಳನ್ನು ಬೆಳೆಸಿಕೊಂಡಾಗ ಮಾತ್ರ ಒಳ್ಳೆಯ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯ ಎಂದರು.
ಕಾಲೇಜಿನ ಶಿಕ್ಷಣ ನಿರ್ದೇಶಕ ದೊಡ್ಡೇಗೌಡ, ಕಾಲೇಜಿನ ಬಿ.ಕಾಂ ವಿಭಾಗದ ಮುಖ್ಯಸ್ಥ ಪೊ›.ನರಸಿಂಹುಲು, ಬಿಬಿಎ ವಿಭಾಗದ ಮುಖ್ಯಸ್ಥ ಪ್ರೊ.ರವಿಚಂದ್ರ ಸೇರಿದಂತೆ ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಗೆ ಪುರಸ್ಕಾರ ವಿತರಣೆ: ಬೀಳ್ಕೊಡುಗೆ ಸಮಾರಂಭದಲ್ಲಿ ವಾರ್ಷಿಕ ಕ್ರೀಡಾಕೂಟದಲ್ಲಿ ಹಾಗೂ ಹಿಂದಿನ ಸೆಮಿಸ್ಟರ್‌ಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತರಿಗೆ ಹಾಗೂ ಅಂತರ್‌ಕಾಲೇಜು – ಅಂತರ್ ವಿಶ್ವವಿದ್ಯಾಲಯ ಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಮತ್ತು ಟ್ರೋಫಿಗಳನ್ನು ನೀಡಿ ಅಭಿನಂದಿಸಿದರು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕಾಲೇಜಿನ ಹಳೆ ವಿದ್ಯಾರ್ಥಿಗಳನ್ನು ಸಹ ಸನ್ಮಾನಿಸಲಾಯಿತು. ಕಾಲೇಜಿನ ಕಿರಿಯ ವಿದ್ಯಾರ್ಥಿಗಳಿಂದ ಹಿರಿಯ ವಿದ್ಯಾರ್ಥಿಗಳಿಗೆ ಅನೇಕ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.