ಮಹಾಕಾವ್ಯ ರಾಮಾಯಣ ಎಂದಿಗೂ ಪ್ರಸ್ತುತ: ಸಚಿವ
ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್
Team Udayavani, Oct 22, 2021, 4:31 PM IST
ಚಿಕ್ಕಬಳ್ಳಾಪುರ: ಮಹರ್ಷಿ ವಾಲ್ಮೀಕಿ ವಿರಚಿತ ರಾಮಾಯಣ ಶ್ರೇಷ್ಠ ಮಹಾಕಾವ್ಯವಾಗಿದೆ. ಮನುಷ್ಯ ಭೂಮಿ ಮೇಲೆ ಇರುವವರೆಗೂ ಈ ಕಾವ್ಯವು ಪ್ರಸ್ತುತವಾಗಿರಲಿದೆ ಎಂದು ಆರೋಗ್ಯ, ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಪಂ, ಪರಿಶಿಷ್ಟ ಪಂಗಡ ಇಲಾಖೆ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಯಾವುದೇ ವ್ಯಕ್ತಿ ಜ್ಞಾನಾರ್ಜನೆ ಮೂಲಕ ಉನ್ನತ ಸಾಧನೆ ಮಾಡಲು ರಾಮಾಯಣ ಕಾವ್ಯ ಪ್ರೇರಣೆ ಯಾಗಿದೆ ಎಂದು ಹೇಳಿದರು.
ರಾಮಾಯಣ ಆಳವಾಗಿ ಆಧ್ಯಯನ ಮಾಡಿ: ರಾಮಾಯಣ ಮಹಾಕಾವ್ಯದಲ್ಲಿ ಮನುಷ್ಯನ ವ್ಯಕ್ತಿತ್ವ ವಿಕಸನಕ್ಕೆ ಪೂರಕ ಮೌಲ್ಯಾದರ್ಶಗಳಿದ್ದು, ಪ್ರತಿಯೊಬ್ಬರೂ ಇದನ್ನು ಆಳವಾಗಿ ಅಧ್ಯಯನ ಮಾಡಿ, ವಾಲ್ಮೀಕಿ ಆದರ್ಶ ಚಿಂತನೆ ಅನುಸರಿಸುವ ಅಗತ್ಯವಿದೆ. ಸ್ವಾಮಿ ನಿಷ್ಠೆ, ಸೋದರ ನಿಷ್ಠೆ, ಪತಿ ನಿಷ್ಠೆ, ಪತ್ನಿ ನಿಷ್ಠೆ, ಪಿತೃ ವಾಕ್ಯ ಪರಿಪಾಲನೆ ಸೇರಿ ಹಲವು ರೀತಿಯ ನಿಷ್ಠೆಗಳು ಈ ಕಾವ್ಯದಲ್ಲಿ ಕಾಣ ಸಿಗುತ್ತವೆ ಎಂದು ಸಚಿವರು ಮೆಲುಕು ಹಾಕಿದರು.
27 ಸಾವಿರ ಕೋಟಿ ರೂ. ಮೀಸಲು:
ಬಲಹೀನ ತಳ ಸಮುದಾಯಗಳ ಯುವಕರು ಉದ್ಯಮ ಆರಂಭಿಸಿ ಆರ್ಥಿಕವಾಗಿ ಸದೃಢರಾಗಬೇಕೆಂಬ ಉದ್ದೇಶಕ್ಕಾಗಿ 10 ಲಕ್ಷ ರೂ.ನಿಂದ 1 ಕೋಟಿ ರೂ. ವರೆಗೆ ಸಾಲ ನೀಡುವ ಸ್ಟಾಂಡ್ ಅಪ್ ಇಂಡಿಯಾ ಎಂಬ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಇದಕ್ಕಾಗಿ 27 ಸಾವಿರ ಕೋಟಿ ರೂ. ಸರ್ಕಾರ ಮೀಸಲಿಟ್ಟಿದೆ ಎಂದು ವಿವರಿಸಿದರು.
ಜಿಲ್ಲಾ ವಾಲ್ಮೀಕಿ ಭವನ ನಿರ್ಮಿಸುವ ಉದ್ದೇಶ ಕ್ಕಾಗಿ ಚಿಕ್ಕಬಳ್ಳಾಪುರ ನಗರದ ಹೃದಯ ಭಾಗದಲ್ಲಿ 30 ಗುಂಟೆ ಜಮೀನು ಮಂಜೂರಾತಿ ಆದೇಶ ಪತ್ರವನ್ನು ಇಲಾಖೆಗೆ ಹಸ್ತಾಂತರಿಸಿದರು.
ಇದನ್ನೂ ಓದಿ;- ಸಿನಿಮಾದ ‘ಸರ್‌ಪ್ರೈಸ್’ ಟೈಟಲ್
ಸಾಧಕರಿಗೆ ಸನ್ಮಾನ: ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಎಸ್ಟಿ ಸಮುದಾಯದಲ್ಲಿ ವಿಶೇಷ ಸಾಧನೆ ಮಾಡಿದವರನ್ನು ಸನ್ಮಾನಿಸ ಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಆರ್. ಲತಾ, ಜಿಪಂ ಸಿಇಒ ಪಿ.ಶಿವಶಂಕರ್, ಎಸ್ಪಿ ಮಿಥುನ್‌ಕುಮಾರ್, ನಗರಸಭೆ ಅಧ್ಯಕ್ಷ ಡಿ.ಎಸ್. ಅನಂದ್‌ರೆಡ್ಡಿ, ಶಿಡ್ಲಘಟ್ಟ ಮಾಜಿ ಶಾಸಕ ರಾಜಣ್ಣ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶ್ರೀಧರ್, ಚಿಕ್ಕಬಳ್ಳಾಪುರ ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಕೆ.ವಿ.ಗವಿರಾಯಪ್ಪ, ಖಜಾಂಚಿ ಕೆ.ಎನ್. ಆವಲಕೊಂಡರಾಯಪ್ಪ, ಸಂಘಟನಾ ಕಾರ್ಯದರ್ಶಿ ಮುನಿವೆಂಟಕಸ್ವಾಮಿ, ಸದಸ್ಯರಾದ ನರಸಿಂಹ ರಾಜು, ಸಮುದಾಯದ ಮುಖಂಡರಾದ ಶ್ರೀನಿ ವಾಸ್, ಭೂಅಭಿವೃದ್ಧಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ.ಟಿ. ನಾರಾಯಣಸ್ವಾಮಿ, ಪಿ.ಮುನಿರಾಜು ( ಜಿಪಂ ಮಾಜಿ ಸದಸ್ಯರು), ಮುನಿಕೃಷ್ಣ (ಚಿಕ್ಕಬಳ್ಳಾ ಪುರ ನಗರಸಭೆ ಮಾಜಿ ಅಧ್ಯಕ್ಷ), ಚಿಕ್ಕಬಳ್ಳಾಪುರ ತಾಲೂಕು ವಾಲ್ಮೀಕಿ ಸಂಘದ ಅಧ್ಯಕ್ಷ ಜಿ.ಮೂರ್ತಿ, ಉಪಾಧ್ಯಕ್ಷ ನಾರಾಯಣಸ್ವಾಮಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.