ಅನಾರೋಗ್ಯದಿಂದ ಮಹಿಳೆ ಸಾವು : ಜೆಸಿಬಿ ಯಂತ್ರದಲ್ಲೇ ಮೃತದೇಹ ಸಾಗಣೆ
Team Udayavani, May 1, 2021, 3:27 PM IST
ಚಿಂತಾಮಣಿ: ಕೋವಿಡ್ ಗೆ ಹೆದರಿ ಅನಾರೋಗ್ಯದಿಂದ ಮೃತಪಟ್ಟ ಮಹಿಳೆಯ ಅಂತ್ಯಸಂಸ್ಕಾರ ಮಾಡಲು ಜನರು ಹಿಂದೇಟು ಹಾಕಿದ್ದರಿಂದ ಜೆಸಿಬಿ ಯಂತ್ರ ಬಳಸಿ, ಅಂತ್ಯ ಸಂಸ್ಕಾರ ಮಾಡಿದ ಘಟನೆ ತಾಲೂಕಿನ ಕುರಟಹಳ್ಳಿಯಲ್ಲಿ ನಡೆದಿದೆ.
ಮೃತ ಮಹಿಳೆ ಚಂದ್ರಕಲಾ. ಗುರುವಾರ ಬೆಳಗ್ಗೆ ತಾಲೂಕಿನ ಕುರಟಹಳ್ಳಿಯ ಹೋಟೆಲ್ ಬಳಿ ತನ್ನ ಮಗಳ ತೊಡೆಯ ಮೇಲೆ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ.ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರ ಬ ಹುದು ಎಂದು ಹೆದರಿದ ಜನರು ಹತ್ತಿರಕ್ಕೆ ಬರಲು ಹಿಂದೇಟು ಹಾಕಿದರು. ನಂತರ ಜೆಸಿಬಿಯಂತ್ರದ ಮೂಲಕ ಮೃತದೇಹ ಆಸ್ಪತ್ರೆಗೆ ಸಾಗಿಸಿ ಪರೀಕ್ಷೆ ಮಾಡಿಸಿ, ನಂತರ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಅನಾರೋಗ್ಯದಿಂದ ಬಳಲುತ್ತಿದ್ದ ಚಂದ್ರಕಲಾ ಅವರ ಪತಿ ಕೆಲ ವರ್ಷಗಳ ಹಿಂದೆಯೇ ಮೃತಪಟ್ಟಿದ್ದರು. ನಂತರ ಇವರು ಅನಾಥರಂತೆ ಚಿಂತಾಮಣಿ ಯಲ್ಲಿ ಕೂಲಿ ಕೆಲಸಮಾಡಿಕೊಂಡು ಜೀವನ ನಡೆಸುತ್ತಿದ್ದರು ಎನ್ನಲಾಗಿದೆ. ಇನ್ನು ಕಳೆದ ಒಂದು ವಾರದಿಂದ ಅನಾ ರೋಗ್ಯದಿಂದಬಳಲುತ್ತಿದ್ದ ಚಂದ್ರಕಲಾ, ತನ ° ಮಗಳೊಂದಿಗೆ ಕುರಟ ಹಳ್ಳಿಯ ಹೋಟೆಲ್ ಒಂದರ ಬಳಿ ಮಲಗಿದ್ದಾರೆ.
ಈ ವೇಳೆಗ್ರಾಮಸ್ಥರು ಬುಧವಾರ ರಾತ್ರಿ ಅವರ ಯೋಗಕ್ಷೇಮ ವಿಚಾರಿಸಿ ಊಟ ನೀಡಿ, ಬೆಳಗ್ಗೆ ಆಸ್ಪತ್ರೆಗೆ ಸೇರಿ ಸು ವಂತೆ ಮಗಳಿಗೆ ಹೇಳಿದ್ದಾರೆ. ಆದರೆ, ಗುರು ವಾರ ಬೆಳಗಿನ ಜಾವ ಮಗಳು ತನ್ನ ತಾಯಿ ಯನ್ನು ಎಬ್ಬಿಸಲು ಯತ್ನಿಸಿದಾಗ ತಾಯಿ ಮೃತಪಟ್ಟಿರುವುದು ಗೊತ್ತಾಗಿದೆ. ಈ ವೇಳೆ ಗ್ರಾಮಸ್ಥರು ಶವವನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಜೆಸಿಬಿ ಯಂತ್ರದ ಮೂಲಕ ಸಾಗಿಸಿ, ಶವ ಪರೀಕ್ಷೆ ಮಾಡಿಸಿ, ನಂತರ ಅದೇ ಜೆಸಿಬಿ ಯಂತ್ರದಲ್ಲಿ ಗ್ರಾಮಕ್ಕೆ ತಂದು ಅಂತ್ಯ ಸಂಸ್ಕಾರ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.