ಪೊಲೀಸ್ ಠಾಣೆ ಸಮೀಪ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ
Team Udayavani, Mar 20, 2021, 4:58 PM IST
ಶಿಡ್ಲಘಟ್ಟ : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ ಪೊಲೀಸ್ ಠಾಣೆ ಸಮೀಪ ಕಾಂಗ್ರೆಸ್ ಮುಖಂಡ ಅಮ್ಜದ್ ರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಸಂಭವಿಸಿದೆ.
ಶಿಡ್ಲಘಟ್ಟ ದಿಬ್ಬೂರಹಳ್ಳಿ ಮಾರ್ಗ ಮಧ್ಯೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಕಾಂಗ್ರೆಸ್ ಮುಖಂಡ ಅಮ್ಜದ್ ಅವರನ್ನು ಹಿಂಬಾಲಿಸಿದ ದುಷ್ಕರ್ಮಿಗಳು ವಾಹನಕ್ಕೆ ಡಿಕ್ಕಿ ಹೊಡೆದು ನಂತರ ಮಚ್ಚುಗಳಿಂದ ಕೊಚ್ಚಿ ಮಾರುತಿ ಓಮನಿ ಕಾರ್ ನಲ್ಲಿ ಪರಾರಿಯಾಗಿದ್ದಾರೆ. ಜನನಿಬೀಡ ಪ್ರದೇಶದಲ್ಲಿ ಹಾಡುಹಗಲೆ ಸಿನಿಮಾ ಶೈಲಿಯಲ್ಲಿ ಕೊಲೆ ಮಾಡಿರುವ ದೃಶ್ಯವನ್ನು ಕಣ್ಣಾರೆ ಕಂಡ ನಾಗರೀಕರು ಭಯಭೀತರಾಗಿದ್ದಾರೆ.
ಶಿಡ್ಲಘಟ್ಟ ತಾಲೂಕಿನಲ್ಲಿ ರಾಜಕೀಯ ಹಾಗೂ ಸಾಮಾಜಿಕ ಚಟುವಟಿಕೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ಅಮ್ಜದ್ ಇತ್ತೀಚೆಗೆ ಕೋವಿಡ್ ಲಾಕ್‍ಡೌನ್ ಅವಧಿಯಲ್ಲಿ ಬಡವರಿಗೆ ಉಚಿತ ಆಹಾರ ಸಾಮಾಗ್ರಿಗಳನ್ನು ಪೂರೈಸಿ ಕೈಲಾದಷ್ಟು ಸಹಾಯ ಮಾಡುವ ಕಾಯಕವನ್ನು ರೂಢಿಸಿಕೊಂಡಿದ್ದರು. ಸಾರ್ವಜನಿಕ ಆಸ್ಪತ್ರೆ ಜಿಪಂ ತಾಂತ್ರಿಕ ಕಚೇರಿ ಹಾಗೂ ನಗರ ಪೊಲೀಸ್ ಠಾಣೆ ಆರಕ್ಷಕ ವೃತ್ತ ಕಚೇರಿಯ ಸಮೀಪ ಕೊಲೆಯಾಗಿದೆ.
ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಆರಕ್ಷಕ ಸಿಬ್ಬಂದಿ ದುಷ್ಕರ್ಮಿಗಳನ್ನು ಹಿಡಿಯಲು ಪ್ರಯತ್ನ ಮಾಡಿದರೂ ಸಫಲವಾಗಿಲ್ಲ.
ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಚಿಂತಾಮಣಿ ಉಪ ವಿಭಾಗದ ಡಿವೈಎಸ್ ಪಿ ಲಕ್ಷ್ಮಯ್ಯ, ಸಿಪಿಐ ಆನಂದ್, ಸುರೇಶ್, ಶ್ರೀನಿವಾಸ್, ಪಿಎಸ್‍ಐ ಸತೀಶ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮಾತನಾಡಿ ನಗರದ ರೈಲ್ವೆ ಕೆಳಸೇತುವೆ ಬಳಿ ದುಷ್ಕರ್ಮಿಗಳು ಅಮ್ಜದ್ ಎಂಬಾತನನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ ಆರೋಪಿಗಳ ಸುಳಿವು ಸಿಕ್ಕಿದ್ದು ಶೀಘ್ರದಲ್ಲಿ ಅವರನ್ನು ಬಂಧಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Madanthyar: ಬಾಲಕಿಯರ ಹಾಸ್ಟೆಲ್ ಕಟ್ಟಡ ಅನಾಥ!
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.