ಅಪ್ರಾಪ್ತರ ಮೇಲೆ ದೌರ್ಜನ್ಯ ಹೆಚ್ಚಳ
ಲೈಂಗಿಕ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ: ನ್ಯಾಯಾಧೀಶ ಕೋರಡ್ಡಿ ಕಳವಳ
Team Udayavani, Jul 27, 2019, 11:21 AM IST
ಚಿಕ್ಕಬಳ್ಳಾಪುರ ನಗರದ ವಿಷ್ಣುಪ್ರಿಯ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಸಸಿ ನೆಡಲಾಯಿತು. ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಎಸ್.ಹೆಚ್.ಕೋರಡ್ಡಿ, ನ್ಯಾಯಾಧೀಶೆ ರೂಪಾ ಉಪಸ್ಥಿತರಿದ್ದರು.
ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ನಾಗರಿಕ ಸಮಾಜ ತಲೆ ತಗ್ಗಿಸುವ ರೀತಿಯಲ್ಲಿ ಅಪ್ರಾಪ್ತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದರಲ್ಲೂ ಲೈಂಗಿಕ ದೌರ್ಜನ್ಯ ಪ್ರಕರಣಗಳೇ ಹೆಚ್ಚಾಗಿ ದಾಖಲಾಗುತ್ತಿರುವುದು ಕಳವಳಕಾರಿ ಸಂಗತಿ ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಎಸ್.ಎಚ್.ಕೋರಡ್ಡಿ ಹೇಳಿದರು.
ನಗರದ ಹೊರ ವಲಯದ ಜಡಲತಿಮ್ಮನಹಳ್ಳಿಯಲ್ಲಿರುವ ವಿಷ್ಣುಪ್ರಿಯ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಮ್ಮಿಕೊಂಡಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಕಾಲಕಾಲಕ್ಕೆ ಕಾನೂನುಗಳಿಗೆ ತಿದ್ದುಪಡಿ ತಂದು ಬಲಿಷ್ಠ ಕಾನೂನು ರೂಪಿಸಿದರೂ ಅಪರಾಧ ಪ್ರಕರಣಗಳು ಇಳಿಮುಖವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಕಠಿಣ ಶಿಕ್ಷೆ ಗುರಿ: ಪೋಕ್ಸೋ ಕಾಯ್ದೆಯಡಿ ಅಪರಾಧ ಸಾಬೀತಾದರೆ ಮರಣ ದಂಡನೆ ಸಹ ವಿಧಿಸುವಂತಹ ಅವಕಾಶಗಳು ಇವೆ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆಸಿದರೆ ಕಠಿಣ ಶಿಕ್ಷೆಗೆ ಗುರಿ ಆಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಜಾಗ್ರತೆ ವಹಿಸಿ: ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಮಹಿಳಾ ಸಿಬ್ಬಂದಿಗೆ ಸೂಕ್ತ ಭದ್ರತೆ ಒದಗಿಸುವುದು ಸಂಸ್ಥೆಯ ಜವಾಬ್ದಾರಿ. ಜೊತೆಗೆ ದೂರು ಪೆಟ್ಟಿಗಳನ್ನು ಸಹ ಅಳವಡಿಸಿ ಕಾಲಕಾಲಕ್ಕೆ ರಕ್ಷಣೆ ಹಾಗೂ ಭದ್ರತೆಯ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕೆಂದರು.
ಅರಿವು ಮೂಡಿಸಿ: ಸ್ವಸ್ಥ ಸಮಾಜ ನಿರ್ಮಾಣ ಆಗಬೇಕಾದರೆ ಪ್ರತಿಯೊಬ್ಬರು ಕಾನೂನುಗಳನ್ನು ಪಾಲಿಸಬೇಕು. ಕಾನೂನು ಅರಿವು ಇಲ್ಲದೇ ಬಹಳಷ್ಟು ಮಂದಿ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಕಾನೂನುಗಳ ಅರಿವು ಹೆಚ್ಚಾದಷ್ಟು ಸಮಾಜದಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖವಾಗುತ್ತದೆ.
ಆದ್ದರಿಂದ ಇಂದಿನ ವಿದ್ಯಾರ್ಥಿ ಯುವ ಸಮುದಾಯ ಕಾನೂನುಗಳ ಬಗ್ಗೆ ಹೆಚ್ಚು ತಿಳುವಳಿಕೆ ಹೊಂದಿ ತಾವು ಅನುಸರಿಸುವುದರ ಜೊತೆಗೆ ಪೋಷಕರಿಗೂ ಈ ಬಗ್ಗೆ ಅರಿವು ಮೂಡಿಸಬೇಕೆಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಷ್ಣುಪ್ರಿಯ ಕಾಲೇಜಿನ ಅಧ್ಯಕ್ಷ ರಾಮಚಂದ್ರ ರೆಡ್ಡಿ ವಹಿಸಿದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೆಚ್.ದೇವರಾಜ್, ವಕೀಲರ ಸಂಘದ ಜಿಲ್ಲಾಧ್ಯಕ್ಷ ಕೆ.ಎಚ್.ತಮ್ಮೇಗೌಡ, ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್, ಜಂಟಿ ಕಾರ್ಯದರ್ಶಿ ಬಾಲಕೃಷ್ಣ, ವಕೀಲರಾದ ನಾರಾಯಣಮೂರ್ತಿ ಸೇರಿದಂತೆ ವಿಷ್ಣುಪ್ರಿಯ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.