ಜಿಲ್ಲಾಡಳಿತ ವಿರುದ್ದ ದಸಂಸ ಅನಿರ್ದಿಷ್ಟಾವಧಿ ಧರಣಿ


Team Udayavani, Aug 12, 2017, 1:46 PM IST

ambd.jpg

ಚಿಕ್ಕಬಳ್ಳಾಪುರ: ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್‌ ಇಲಾಖೆ ದಲಿತ ಚಳವಳಿ ದಮನಕ್ಕೆ ಮುಂದಾಗಿವೆ ಎಂದು ಆರೋಪಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೋ.ಬಿ.ಕೃಷ್ಣಪ್ಪ ಬಣದ ಕಾರ್ಯಕರ್ತರು ಎಸಿ
ಕಚೇರಿ ಎದುರು ಧರಣಿ ಆರಂಭಿಸಿದರು. ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ವಿವಿಧ ಇಲಾಖೆಗಳಿಗೆ ಸರ್ಕಾರದಿಂದ ಮಂಜೂರಾಗಿರುವ ಕೋಟ್ಯಂತರ ರೂ. ಅನುದಾನವನ್ನು ದಲಿತರ ಅಭಿವೃದ್ಧಿಗೆ ಬಳಸದೇ ಹಣ ದುರುಪಯೋಗ ಮಾಡಿಕೊಳ್ಳಲಾಗಿದೆ. ಕೂಡಲೇ ಈ ಅಕ್ರಮಗಳ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಹಾಗೂ ದಲಿತ ಮುಖಂಡರ ವಿರುದ್ಧ ರೌಡಿ ಶೀಟರ್‌ ಪ್ರಕರಣಗಳನ್ನು ದಾಖಲಿಸುತ್ತಿರುವ ಪೊಲೀಸರ
ಕ್ರಮವನ್ನು ಖಂಡಿಸಿ ಧರಣಿ ನಡೆಸುತ್ತಿದ್ದಾರೆ. ಎಸಿ ಕಚೇರಿ ಎದುರು ಧರಣಿ: ಜಿಲ್ಲಾ ಕೇಂದ್ರದಲ್ಲಿ ಉಪಭಾಗಾಧಿಕಾರಿಗಳ ಕಚೇರಿ ಎದುರು ಕದಸಂಸ ರಾಜ್ಯ ಸಂಘಟನಾ ಸಂಚಾಲಕ ಬಿ.ಎನ್‌. ಗಂಗಾಧರಪ್ಪ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಗಿದೆ. ಜಿಲ್ಲಾಡಳಿತ ದಲಿತರ ಸಮಸ್ಯೆಗಳಿಗೆ ಸ್ಪಂದಿಸುವುದರ ಬದಲು ದಲಿತ ಚಳವಳಿ ದಮನಕ್ಕೆ ಮುಂದಾಗಿದೆ. ದಲಿತರು ವಾಸ ಮಾಡುವ ಅನೇಕ ಕಡೆ ಮೂಲ ಸೌಕರ್ಯಗಳಿಲ್ಲ. ಬಗರ್‌ ಹುಕುಂ ಅಡಿ ಅರ್ಜಿ ಸಲ್ಲಿಸಿರುವ ದಲಿತರಿಗೆ ತುಂಡು ಭೂಮಿ ಮಂಜೂರು ಮಾಡಿಲ್ಲ. ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯಗಳು ಮೂಲ ಸೌಕರ್ಯಗಳಿಲ್ಲದೇ ಅನಾಥಾಶ್ರಮಗಳಾಗಿವೆ. ಜಿಲ್ಲೆಯಲ್ಲಿ ಅಂಬೇಡ್ಕರ್‌, ಜಗಜೀವನರಾಂ, ವಾಲ್ಮೀಕಿ ಭವನಗಳ ನಿರ್ಮಾಣದಲ್ಲಿ ಅಕ್ರಮವೆಸಲಾಗಿದೆ.ಹಲವಾರು ಕಡೆ ಭವನ ನಿರ್ಮಿಸದೇ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಕದಸಂಸ ಮುಖಂಡರು ಆರೋಪಿಸಿದರು. ಧರಣಿ ಹಿಂಪಡೆಯಲ್ಲ: ಈ ವೇಳೆ ಮಾತನಾಡಿದ ಕದಸಂಸ ರಾಜ್ಯ ಸಂಘಟನಾ ಸಂಚಾಲಕ ಬಿ.ಎನ್‌. ಗಂಧಾಧರಪ್ಪ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್‌ ಇಲಾಖೆ ನಮ್ಮ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಹೋರಾಟವನ್ನು ಹಿಂಪಡೆಯುವುದಿಲ್ಲ ಎಂದು ಎಚ್ಚರಿಸಿದರು. ಕದಸಂಸ ಜಿಲ್ಲಾ ಸಂಘಟನಾ ಸಂಚಾಲಕರಾದ ಡಿ.ಎಂ.ನರಸಿಂಹಯ್ಯ, ತಾಲೂಕು ಸಂಚಾಲಕ ತಿಪ್ಪೇನಹಳ್ಳಿ ನಾರಾಯಣ್‌, ತಾಲೂಕು ಸಂಘಟನಾ ಸಂಚಾಲಕರಾದ ಎಸ್‌.ಎಂ.ರಾಜಣ್ಣ, ಜಿ.ಸಿ.ವೆಂಕಟೇಶ್‌, ಕಣಿತಹಳ್ಳಿ ಗಂಗಾಧರ್‌, ಕೊಳವನ ಹಳ್ಳಿ ನಾಗೇಶ್‌, ಆರ್‌.ಡಿ.ನಾಗರಾಜ್‌, ಮುದ್ದಲಹಳ್ಳಿ
ಹನುಮಪ್ಪ, ಬಿ.ಎನ್‌.ಹರೀಶ್‌ ಕುಮಾರ್‌, ನವಿಲುಗುರ್ಕಿ, ಶ್ರೀರಾಪುರ ಜಯರಾಮ್‌, ಮಲ್ಲಪ್ಪ, ಎನ್‌.ಶ್ರೀನಿವಾಸ್‌, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.