ಫೆ.3ಕ್ಕೆ ಕನಿಷ್ಠ ವೇತನಕ್ಕಾಗಿ ಅನಿರ್ದಿಷ್ಟಾವಧಿ ಧರಣಿ
Team Udayavani, Jan 28, 2020, 3:00 AM IST
ಚಿಕ್ಕಬಳ್ಳಾಪುರ: ರಾಜ್ಯದ ಬಿಸಿಯೂಟ ನೌಕರರಿಗೆ ತಿಂಗಳ 21 ಸಾವಿರ ರೂ., ಕನಿಷ್ಠ ವೇತನ ನೀಡಬೇಕು, ಸೇವಾ ಭದ್ರತೆ ಜೊತೆಗೆ ನಿವೃತ್ತಿ ವೇತನ ನೀಡುವಂತೆ ಆಗ್ರಹಿಸಿ ಬರುವ ಫೆ.3 ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಆರ್.ಮಂಜುಳಾ ಹೇಳಿದರು.
ತಾಲೂಕಿನ ಪೆರೇಸಂದ್ರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಬಿಸಿಯೂಟ ನೌಕರರ ಸಭೆಯಲ್ಲಿ ಮಾತನಾಡಿದ ಅವರು, ಅನೇಕ ಬಾರಿ ಬಿಸಿಯೂಟ ನೌಕರರು ಕನಿಷ್ಠ ವೇತನ, ನಿವೃತ್ತಿ ಪಿಂಚಣಿಗೆ ಆಗ್ರಹಿಸಿ ಹೋರಾಟ, ಪ್ರತಿಭ ಟನೆಗಳನ್ನು ನಡೆಸಿದರೂ ಸರ್ಕಾರ ಸ್ಪಂದಿಸಿಲ್ಲವಾದ್ದರಿಂದ ಬೇಡಿಕೆ ಈಡೇರುವವರೆಗೂ ಅನಿರ್ಧಿಷ್ಟಾವದಿ ಧರಣಿ ನಡೆಸಲಾಗುವುದು ಎಂದರು.
ಕೋಟ್ ತೀರ್ಪು ಗಾಳಿಗೆ ತೂರಿದ ಕೇಂದ್ರ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸ್ಕಿಂ ವರ್ಕರ್ಸ್‌ರಾದ ಬಿಸಿಯೂಟ ಕೆಲಸಗಾರರನ್ನು ಕಾರ್ಮಿಕರಾಗಿ ಪರಿಗಣಿಸಲು ಸಾಧ್ಯವಿಲ್ಲ. ಅವರನ್ನು ಕನಿಷ್ಠ ವೇತನ ಕಾಯ್ದೆಯಡಿ ತರಲು ತಯಾರಿಲ್ಲ. ಸಮಾನ ಕೆಲಸಕ್ಕಾಗಿ ಸಮಾನ ವೇತನ ಎನ್ನುವ ಸುಪ್ರೀಂ ಕೋರ್ಟ್ ತೀರ್ಪುನ್ನು ಕೇಂದ್ರ ಸರ್ಕಾರ ಗಾಳಿಗೆ ತೂರಿದೆ ಎಂದು ಹೇಳಿದರು.
ಕೇಂದ್ರದ ವಿರುದ್ಧ ಆಕ್ರೋಶ: 2001-2002ರಲ್ಲಿ ಆರಂಭವಾದ ಮಧ್ಯಾಹ್ನದ ಬಿಸಿಯೂಟ ಯೋಜನೆ ದೇಶದ ಮಹತ್ವದ ಯೋಜನೆ. ಆದರೆ ಮಹಿಳೆಯರಿಗೆ ಕೇವಲ 2600 ರೂ. ಹಾಗೂ 2700 ರೂ., ಬಿಟ್ಟರೆ ಯಾವುದೇ ಸೌಲಭ್ಯಗಳು ಇಲ್ಲ. ಕೇಂದ್ರ ಸರ್ಕಾರ ಬಿಸಿಯೂಟ ನೌಕರರಿಗೆ ವೇತನ, ಪಿಂಚಣಿ ಹಾಗೂ ಇತರೇ ಸೌಲಭ್ಯಗಳನ್ನು ನೀಡದೇ ಮೇಲಿಂದ ಮೇಲೆ ಮೋಸ ಮಾಡುತ್ತಿದೆಯೆಂದು ಕೆ.ಆರ್.ಮಂಜುಳಾ ಕಿಡಿಕಾರಿದರು.
ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲಲ್ಲ: ಕೇಂದ್ರ ಸರ್ಕಾರ ಬಿಸಿಯೂಟ ಯೋಜನೆಗೆ ಹೆಚ್ಚಿನ ಅನುದಾನ ನೀಡಬೇಕೆಂದು ಹಾಗೂ ಯೋಜನೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುವುದನ್ನು ಖಂಡಿಸಿ ಫೆ.3 ರಂದು ಇಡೀ ರಾಜ್ಯಾದ್ಯಂತ ಬಿಸಿಯೂಟ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ನೌಕರರು, ಅಡುಗೆ ಮಾಡುವುದನ್ನು ಸ್ಥಗಿತಗೊಳಿಸಿ ಹೋರಾಟವನ್ನು ಅನಿರ್ದಿಷ್ಟಾವಧಿ ಕಾಲ ಹಮ್ಮಿಕೊಳ್ಳಲಾಗಿದೆ. ಸರ್ಕಾರ ನಮ್ಮ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸುವವರೆಗೂ ಹೋರಾಟ ಸ್ಥಗಿತವಿಲ್ಲ ಎಂದರು.
ಪಿಂಚಣಿ ಸೌಲಭ್ಯ ಕಲ್ಪಿಸಿ: ಸಂಘದ ಜಿಲ್ಲಾ ಗೌರವಾಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಿಸಿಯೂಟ ನೌಕರರಿಗೆ ಎಲ್‌ಸಿ ಮಾದರಿಯಲ್ಲಿ ಪಿಂಚಣಿ ಸೌಲಭ್ಯ ಕಲ್ಪಿಸಬೇಕು. ನೌಕರರನ್ನು ಕಾಯಂ ಸ್ವರೂಪದ ಉದ್ಯೋಗಿಗಳಾಗಿ ಸೃಷ್ಟಿಸಬೇಕು, ಯೋಜನೆ ಖಾಸಗೀಕರಣವನ್ನು ಕೂಡಲೇ ಕೈ ಬಿಡಬೇಕೆಂದು ಆಗ್ರಹಿಸಿದರು.
ಬೆಂಕಿಯಲ್ಲಿ ಆರೇಳು ಗಂಟೆ ಕೆಲಸ ಮಾಡುವ ಅಡುಗೆ ಸಿಬ್ಬಂದಿಗೆ ಸರ್ಕಾರಗಳು ಕನಿಷ್ಟ ವೇತನ ಕೂಡದೇ ಅಲ್ಪವೇತನಕ್ಕೆ ದುಡಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಇಂದಿನ ಅಗತ್ಯ ವಸ್ತುಗಳ ಬೆಲೆ ಹೆಚ್ಚಳಗೊಂಡು ಜನ ಸಾಮಾನ್ಯರ ಬದುಕು ದುಸ್ತರವಾಗಿದೆ.
ಇತಂಹ ಸಂದರ್ಭದಲ್ಲಿ ಸರ್ಕಾರಗಳು ಬಿಸಿಯೂಟ ನೌಕರರಿಗೆ 2600, 2700 ವೇತನ ಕೊಟ್ಟರೆ ಜೀವನ ನಡೆಸಲು ಸಾಧ್ಯವೇ ಎಂದು ಪ್ರಶ್ನಿಸಿ, ಫೆ.3 ರಿಂದ ಆರಂಭಗೊಳ್ಳಲಿರುವ ಅನಿರ್ದಿಷ್ಟಾವಧಿ ಹೋರಾಟ ನಿರ್ಣಾಯಕ ಹಂತ ತಲುಪಲಿದೆ. ಸರ್ಕಾರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು. ಬಿಸಿಯೂಟ ನೌಕರರ ಸಂಘದ ಪದಾಧಿಕಾರಿಗಳಾದ ಭಾಗ್ಯಮ್ಮ, ನಾರಾಯಣಮ್ಮ, ಶಾಂತಮ್ಮ, ಅಲವೇಲಮ್ಮ, ಪರೀಧಾ, ಶಾರದ, ಕೊರೇನಹಳ್ಳಿ ಭಾಗ್ಯಮ್ಮ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
ಬಿಸಿಯೂಟ ನೌಕರರ ಬೇಡಿಕೆಗಳೇನು?
* ಬಿಸಿಯೂಟ ನೌಕರರಿಗೆ 21 ಸಾವಿರ ಕನಿಷ್ಠ ವೇತನ ಕೊಡಬೇಕು.
* ಎಲ್‌ಐಸಿ ಆಧಾರಿತ ಪಿಂಚಣಿ ಯೋಜನೆ ರೂಪಿಸಬೇಕು.
* ಬಿಸಿಯೂಟ ಖಾಸಗೀಕರಣ ಕೂಡಲೇ ಕೈ ಬಿಡಬೇಕು.
* ನೌಕರರಿಗೆ ವಿಮಾ ಸೌಲಭ್ಯ, ರಜೆ ಮತ್ತಿತರ ಸೌಲಭ್ಯ ಒದಗಿಸಬೇಕು.
* ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕು.
* ಅಡುಗೆ ಕೇಂದ್ರಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕು.
* ಕೇಂದ್ರೀಕೃತ ಅಡುಗೆ ಯೋಜನೆ ಕೈ ಬಿಡಬೇಕು.
* ಬಿಸಿಯೂಟಕ್ಕೆ ಗುಣಮಟ್ಟದ ಆಹಾರ ಪದಾರ್ಥ ವಿತರಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ
Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್. ಸಂತೋಷ್ ಹೆಗ್ಡೆ
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
Kota: ಸಾಸ್ತಾನ ಟೋಲ್: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.