ಬಡ್ಡಿರಹಿತ ಸಾಲ ಸೌಲಭ್ಯ
Team Udayavani, Jul 18, 2020, 9:12 AM IST
ಶಿಡ್ಲಘಟ್ಟ: ಕ್ಷೇತ್ರದ ಪ್ರತಿಯೊಬ್ಬ ಮಹಿಳೆಯರಿಗೆ ಬಡ್ಡಿರಹಿತ ಸಾಲ ಸೌಲಭ್ಯ ಕಲ್ಪಿಸುವ ಯೋಜನೆಯನ್ನು ರೂಪಿಸ ಲಾಗಿದ್ದು, ಹಂತ ಹಂತವಾಗಿ ಅನುಷ್ಠಾನ ಗೊಳಿಸಲಾಗುವುದು ಎಂದು ಶಾಸಕ ವಿ.ಮುನಿಯಪ್ಪ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ ಫಲಾನು ಭವಿಗಳಿಗೆ ಸಹಾಯಧನದ ಚೆಕ್ ವಿತರಿಸಿ ಮಾತನಾಡಿದ ಅವರು, ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಡಿಸಿಸಿ ಬ್ಯಾಂಕ್ ಮೂಲಕ ಮಹಿಳಾ ಸ್ವಸಹಾಯ ಸಂಘಗಳಿಗೆ ಬಡ್ಡಿರಹಿತ ಸಾಲ ಸೌಲಭ್ಯ ನೀಡಲಾಗುತ್ತದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮತ್ತು ಆಡಳಿತ ಮಂಡಳಿಯ ನಿರ್ದೇಶಕರ ಸಹಕಾರದಿಂದ ಕ್ಷೇತ್ರದ ಮಹಿಳೆಯರಿಗೆ ಬಡ್ಡಿರಹಿತ ಸಾಲ ಸೌಲಭ್ಯ ಯೋಜನೆಗೆ ಚಾಲನೆ ನೀಡಿ ಕೋಟ್ಯಂತರ ರೂ.ಬಡ್ಡಿರಹಿತ ಸಾಲ ಸೌಲಭ್ಯ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಸೌಲಭ್ಯ ವಿಸ್ತರಣೆಯಾಗಲಿದೆ ಎಂದು ಭರವಸೆ ನೀಡಿದರು.
ಸಿಡಿಪಿಒ ವೈ. ನಾಗವೇಣಿ, ಮಹಿಳಾ ಅಭಿವೃದ್ಧಿ ನಿಗಮದ ನಿರೀಕ್ಷಕಿ ಎ.ಸಿ.ಶೋಭಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಲೆಕ್ಕಾಧಿಕಾರಿ ಮಮತಾ, ಶಾಸಕರ ಆಪ್ತ ಕಾರ್ಯದರ್ಶಿ ನಾರಾಯಣಗೌಡ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.