ಅಂತರಂಗದ ಗೆಲುವು ಸನ್ಯಾಸದ ಮೂಲ ಲಕ್ಷಣ


Team Udayavani, Jan 27, 2020, 3:00 AM IST

anatarangada

ಚಿಂತಾಮಣಿ: ಅಂತರಂಗದ ಗೆಲುವು ಸನ್ಯಾಸದ ಮೂಲ ಲಕ್ಷಣ. ಮನಸ್ಸಿನಲ್ಲಿ ಸನ್ಯಾಸಿಯಾಗಬೇಕು ಎಂದು ಕೈವಾರ ಕ್ಷೇತ್ರದ ಧರ್ಮಾಧಿಕಾರಿ ಡಾ.ಎಂ.ಆರ್‌.ಜಯರಾಮ್‌ ಅಭಿಪ್ರಾಯಪಟ್ಟರು. ಕೈವಾರದ ಶ್ರೀ ಯೋಗಿನಾರೇಯಣ ಮಠದಿಂದ ಚಿಂತಾಮಣಿ ತಾಲೂಕು ಕಸಬಾ ಕಲ್ಲಹಳ್ಳಿಯ ಆಂಜನೇಯಸ್ವಾಮಿ ದೇವಾಲಯದಲ್ಲಿ ಆಯೋಜಿಸಲಾಗಿದ್ದ ಆತ್ಮಬೋಧಾಮೃತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಆತ್ಮಬೋಧನೆ: ಗುರು ಉಪದೇಶದಿಂದ ಆತ್ಮಪ್ರಕಾಶವೆಂದು ಸಾರಿರುವ ಕೈವಾರದ ತಾತಯ್ಯನವರು ಅಂತರಂಗದ ಸಾಧಕ ಋಷಿಮುನಿಗಳು. ಪ್ರಾಣಶಕ್ತಿಯನ್ನು ಕೊಟ್ಟು ಜೀವವನ್ನು ಸೃಷ್ಟಿಸುವ ಶಕ್ತಿಯನ್ನು ತಾತಯ್ಯನವರು ಪಡೆದಿದ್ದರು. ತಾತಯ್ಯನವರು ಪ್ರತಿಯೊಬ್ಬ ಮಾನವರಿಗೂ ಅನುಕೂಲವಾಗುವಂತೆ ಸರಳವಾದ ಭಾಷೆಯಲ್ಲಿ ಆತ್ಮಬೋಧನೆ ಮಾಡಿದ್ದಾರೆ.

ಗುರುಗಳ ಸ್ಮರಣೆ ಮಾಡಬೇಕು:
ಆತ್ಮವಿಚಾರದ ಚಿಂತನೆಯನ್ನು ಮಾಡಿ ಜ್ಞಾನವನ್ನು ಗಳಿಸಿಕೊಳ್ಳಬೇಕು. ಆತ್ಮಚಿಂತನೆಯಿಂದ ಮಾನವನು ಮುಕ್ತಿಯೆಡೆಗೆ ತಲುಪಲು ಸಾಧ್ಯವಿದೆ. ಹಿಂದಿನ ಜನ್ಮಗಳಲ್ಲಿ ಮಾಡಿರುವ ಕರ್ಮಗಳೂ ಸಹ ಗುರುಕೃಪೆಯಿಂದ ನಾಶವಾಗುತ್ತದೆ. ಪ್ರತಿನಿತ್ಯವೂ ಬಿಡದೆ ನಿರಂತರವಾಗಿ ಗುರುಗಳ ಸ್ಮರಣೆ ಮಾಡಬೇಕು ಎಂದರು.

ವಿರಾಗಿಯಾಗಬೇಕು: ಮೋಕ್ಷವು ಬೇಕಾದರೆ ಮೊದಲನೆಯದಾಗಿ ವಿರಾಗಿಯಾಗಬೇಕು. ವೈರಾಗ್ಯವು ಮೋಕ್ಷದ ಮೊದಲ ಮೆಟ್ಟಿಲು. ವೈರಾಗ್ಯವು ಬಾಹ್ಯವಾದ ಕೇವಲ ತೋರಿಕೆಯ ತ್ಯಾಗದಿಂದ ಸಿದ್ಧಿಸುವುದಿಲ್ಲ. ವೈರಾಗ್ಯವು ಮನಸ್ಸಿನಿಂದ ಬರಬೇಕು. ಸಂಸಾರವನ್ನು ತ್ಯಜಿಸುವುದರಿಂದ ಸನ್ಯಾಸಿಗಳಾದೆವು ಎಂದು ಭಾವಿಸಿದರೆ ತಪ್ಪಾಗುತ್ತದೆ. ಕೇವಲ ಸಂಸಾರ, ಪುತ್ರ, ಬಂಧುಬಳಗವನ್ನು ಬಿಡುವುದರಿಂದ ಮಾತ್ರವೇ ವೈರಾಗ್ಯ ಬರುವುದಿಲ್ಲ. ಮನಸ್ಸಿನಲ್ಲಿ ಅವುಗಳ ಮೇಲಿನ ಆಸಕ್ತಿಯನ್ನು ಮನಸ್ಸಿನಲ್ಲಿ ಬಿಡದಿದ್ದರೆ ತೋರಿಕೆಯ ವಿರಾಗಿಯಾಗಿ ಹುಟ್ಟು-ಸಾವುಗಳ ಪ್ರಪಂಚದಲ್ಲೇ ಅಲೆದಾಡಿ ನರಳಬೇಕಾಗುತ್ತದೆ. ಎಲ್ಲವನ್ನೂ ಬಿಡಬಹುದು, ಆದರೆ ಮನಸ್ಸಿನಲ್ಲಿ ಆಸೆಗಳನ್ನು ಬಿಡುವುದು ಕಷ್ಟ. ಹಾಗೇ ಬಿಡುವುದೇ ವೈರಾಗ್ಯ ಎಂದರು.

ಕಾರ್ಯಕ್ರಮಕ್ಕೂ ಮೊದಲು ಗ್ರಾಮದಲ್ಲಿರುವ ಆಂಜನೇಯಸ್ವಾಮಿ ದೇವಾಲಯದವರೆಗೂ ಶೋಭಾಯಾತ್ರೆಯಲ್ಲಿ ಬರಲಾಯಿತು. ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಯೋಗಿನಾರೇಯಣ ಸಂಕೀರ್ತನಾ ಯೋಜನೆ ಸಂಚಾಲಕ ವಾನರಾಶಿ ಬಾಲಕೃಷ್ಣ ಭಾಗವತರ್‌ ಪ್ರಾಸ್ತಾವಿಕ ನುಡಿಗಳನ್ನು ನುಡಿದರು. ವಿದೂಷಿ ಸರೋಜಮ್ಮ ಪ್ರಾರ್ಥಿಸಿದರು. ಕಲ್ಲಹಳ್ಳಿ ಲಕ್ಷ್ಮೀನಾರಾಯಣಪ್ಪ ಸ್ವಾಗತಿಸಿದರು. ನರಸಿಂಹರೆಡ್ಡಿ ವಂದಿಸಿದರು.

ಗ್ರಾಮಸ್ಥರ ಪರವಾಗಿ ಡಾ.ಎಂ.ಆರ್‌.ಜಯರಾಮ್‌ ಅವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎ.ಚೌಡರೆಡ್ಡಿ, ಕೈವಾರ ಮಠದ ಉಪಾಧ್ಯಕ್ಷ ಜೆ.ವಿಭಾಕರರೆಡ್ಡಿ, ಖಜಾಂಚಿ ಆರ್‌.ಪಿ.ಎಂ.ಸತ್ಯನಾರಾಯಣ್‌, ನಿವೃತ್ತ ಕೆಎಎಸ್‌ ಅಧಿಕಾರಿ ಬಿ.ಎನ್‌.ಕೃಷ್ಣಯ್ಯ, ಎಪಿಎಂಸಿ ಅಧ್ಯಕ್ಷ ಕುರುಟಹಳ್ಳಿ ಕೃಷ್ಣಮೂರ್ತಿ, ಕಲ್ಲಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮದ ನೂರಾರು ಭಕ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.