ಜಿಲ್ಲಾ ಉತ್ಸವದಿಂದ ರಾಜಕೀಯ ಲಾಭ ಸಾಧ್ಯವೇ?


Team Udayavani, Jan 17, 2023, 2:59 PM IST

tdy-15

ಚಿಕ್ಕಬಳ್ಳಾಪುರ: ನಗರದಲ್ಲಿ ಕಳೆದ ಎಂಟು ದಿನಗಳಿಂದ ನಡೆದ ಚಿಕ್ಕಬಳ್ಳಾಪುರ ಉತ್ಸವದಿಂದ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಅವರಿಗೆ ರಾಜಕೀಯ ಲಾಭವಾಗಿದೆಯೇ? ಎಂಬ ಪ್ರಶ್ನೆ ಕ್ಷೇತ್ರಾದ್ಯಂತ ಜನರಲ್ಲಿ ಉದ್ಭವವಾಗಿದೆ.

ಜಿಲ್ಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಮೈಸೂರು ದಸರಾ ಮಾದರಿಯಲ್ಲಿ ಚಿಕ್ಕಬಳ್ಳಾಪುರ ಉತ್ಸವವನ್ನು ಅದ್ದೂರಿಯಾಗಿ ಆಚರಿಸಿ ಯಶಸ್ಸು ಕಂಡಿರುವ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಅವರಿಗೆ ರಾಜಕೀಯ ಲಾಭ ದೊರೆಯುವುದೇ ಎಂಬ ವಿಚಾರಗಳು ಮತ್ತು ಚರ್ಚೆಗಳು ಕ್ಷೇತ್ರಾದ್ಯಂತ ನಡೆಯುತ್ತಿದೆ.

ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ, ಧರ್ಮ ಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹಾಗೂ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಸಮ್ಮು ಖದಲ್ಲಿ ಐತಿಹಾಸಿಕ ಚಿಕ್ಕಬಳ್ಳಾಪುರ ಉತ್ಸವವನ್ನು ಉದ್ಘಾಟಿ ಸಿದ ಆರೋಗ್ಯ ಸಚಿವ ಡಾ.ಸುಧಾಕರ್‌ ಅವರ ಬಗ್ಗೆ ಜಿಲ್ಲೆಯ ರಾಜಕೀಯ ವಲಯದಲ್ಲಿ ವ್ಯಾಪಕವಾಗಿ ಚರ್ಚೆ ನಡೆಯುತ್ತಿದೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ ಪಿ ಬಚ್ಚೇಗೌಡ, ಕೆಪಿಸಿಸಿ ಸದಸ್ಯ ವಿನಯ್‌ ಎನ್‌ ಶ್ಯಾಮ್‌ ಸಹಿತ ಅನೇಕ ನಾಯಕರ ವಿರೋಧ ಮತ್ತು ಟೀಕೆಯ ನಡುವೆಯೂ ಆರೋಗ್ಯ ಸಚಿವರು ಚಿಕ್ಕಬಳ್ಳಾಪುರ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲು ಶಕ್ತಿಮೀರಿ ಪ್ರಯತ್ನ ಮಾಡಿ ಅದರಲ್ಲಿ ಯಶಸ್ವಿಯಾದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಂದೆಂದೂ ಕಾಣದ ಮಳೆಯಿಂದ ಬರಪೀಡಿತ ಪ್ರದೇಶದಿಂದ ಮಲೆನಾಡು ಪ್ರದೇಶವಾಗಿದೆ ಪರಿವರ್ತನೆಗೊಂಡ ಹಿನ್ನೆಲೆಯಲ್ಲಿ ಊರು ಜಾತ್ರೆ ಮಾಡುವ ಸಲುವಾಗಿ ಹಾಗೂ ಜಿಲ್ಲೆಯ ಐತಿಹಾಸಿಕ, ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಧಾರ್ಮಿಕ ಕ್ಷೇತ್ರಗಳ ಪರಿಚಯವನ್ನು ಇಡೀ ವಿಶ್ವಕ್ಕೆ ಮಾಡುವ ಸಲುವಾಗಿ ಮತ್ತು ಜಿಲ್ಲೆಯ ಅಭಿವೃದ್ಧಿಗಾಗಿ ಚಿಕ್ಕಬಳ್ಳಾಪುರ ಉತ್ಸವವನ್ನು ಆಚರಿಸಲಾಗಿದೆ ಎಂದು ಡಾ.ಕೆ. ಸುಧಾಕರ್‌ ಸ್ಪಷ್ಟಪಡಿಸಿದ್ದಾರೆ.

ಮತ್ತೂಂದೆಡೆ ಕ್ಷೇತ್ರದ ಮಾಜಿ ಶಾಸಕ ಕೆಪಿ ಬಚ್ಚೇಗೌಡ ಹಾಗೂ ಕೆಪಿಸಿಸಿ ಸದಸ್ಯ ವಿನಯ್‌ ಎನ್‌ ಶ್ಯಾಮ್‌ ಅವರು ಸುಧಾಕರ್‌ ಅವರ ಕಾರ್ಯವೈಖರಿ ವಿರುದ್ಧ ವಾಗ್ಧಾಳಿ ನಡೆಸಿ ಅಸಮಾಧಾನಪಡಿಸಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗಿದೆ ಇದರಿಂದಾಗಿ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ ಜನರು ಮನೆಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ ಯಾವ ಪುರುಷಾರ್ಥಕ್ಕಾಗಿ ಚಿಕ್ಕಬಳ್ಳಾಪುರ ಉತ್ಸವವನ್ನು ಮಾಡಲಾಗಿದೆ ಎಂದು ಪ್ರಶ್ನಿಸಿದರಲ್ಲದೆ ಸಂಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸುವ ಬದಲಾಗಿ ಮನರಂಜನೆ ಮಾಡುವುದು ಎಷ್ಟು ಸರಿ ಎಂಬ ಪ್ರಶ್ನೆಗಳೂ ಹುಟ್ಟಿಕೊಂಡಿವೆ.

ಒಟ್ಟಾರೇ ಚಿಕ್ಕಬಳ್ಳಾಪುರ ಉತ್ಸವ ಮಾತ್ರ ಜಿಲ್ಲೆಯಲ್ಲಿ ಭಾರಿ ಸದ್ದು ಮಾಡಿದ್ದು ಇದು ಆರೋಗ್ಯ ಸಚಿವರಿಗೆ ಲಾಭವಾಗುತ್ತಾ? ಅಥವಾ ಇಲ್ಲವೋ ಕಾದು ನೋಡಬೇಕಾಗಿದೆ.

ಮತಬ್ಯಾಂಕ್‌ ಭದ್ರ ಎಂಬ ಚರ್ಚೆ : ಚಿಕ್ಕಬಳ್ಳಾಪುರ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕು ವಿಧಾನಸಭಾ ಕ್ಷೇತ್ರಗಳ ಶಾಸಕರನ್ನು ಕಡೆಗಣಿಸಿ ವಿವಿಧ ಪಕ್ಷಗಳ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜಿಲ್ಲಾ ಉತ್ಸವವನ್ನು ಆಚರಿಸಿದರೆ ಇದು ಚಿಕ್ಕಬಳ್ಳಾಪುರ ಉತ್ಸವವಲ್ಲ ಬಿಜೆಪಿ ಮತ್ತು ಸುಧಾಕರ್‌ ಉತ್ಸವ ಎಂದು ಟೀಕೆಗಳು ವಿರೋಧಪಕ್ಷದ ನಾಯಕರು ಮಾಡಿದರು. ಇದರ ನಡುವೆಯೂ ಉತ್ಸವಕ್ಕೆ ಜನ ಉತ್ಸಾಹದಿಂದ ಭಾಗವಹಿಸಿದರು. ಇದರಿಂದಾಗಿ ಸಹಜವಾಗಿ ಆರೋಗ್ಯ ಸಚಿವರಿಗೆ ಪ್ಲಸ್‌ ಪಾಯಿಂಟ್‌ ಆಯಿತು. ಮತ್ತೂಂದೆಡೆ ಚುನಾವಣಾ ವರ್ಷದಲ್ಲಿ ಚಿಕ್ಕಬಳ್ಳಾಪುರ ಉತ್ಸವ ಮಾಡುವ ಮೂಲಕ ಸುಧಾಕರ್‌ ಅವರು ತಮ್ಮ ಮತ ಬ್ಯಾಂಕ್‌ ಭದ್ರಪಡಿಸಿಕೊಂಡಿದ್ದಾರೆ ಎಂಬ ವಿಚಾರಗಳು ಸಹ ರಾಜಕೀಯ ವಲಯದಲ್ಲಿ ವಿಶ್ಲೇಷಣೆ ನಡೆಯುತ್ತಿದೆ.

ರಾಜಕೀಯ ಲಾಭಕ್ಕೆ ಬಳಕೆಯಾದ ಉತ್ಸವ : ವಿರೋಧ ಪಕ್ಷಗಳ ಯಾವುದೇ ಟೀಕೆ ಟಿಪ್ಪ ಣಿಗಳು ಮತ್ತು ವಾಗ್ಧಾಳಿಗಳನ್ನು ಲೆಕ್ಕಿಸದೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಸಹಿತ ರಾಜ್ಯ ಸಚಿವ ಸಂಪುಟದ ಪ್ರಮುಖ ಸಚಿವರನ್ನು ಚಿಕ್ಕಬಳ್ಳಾಪುರ ಉತ್ಸವಕ್ಕೆ ಕರೆ ತಂದಿದ್ದರಲ್ಲದೆ ನಾಡಿನ ಮತ್ತು ದೇಶದ ಹೆಸ ರಾಂತ ನಟ ನಟಿಯರು ಕಲಾವಿದರು ಮತ್ತು ಕಲಾವಿದರನ್ನು ಕರೆಸಿ ಚಿಕ್ಕಬಳ್ಳಾಪುರ ಉತ್ಸವವನ್ನು ಯಶಸ್ವಿಯಾಗಿ ಮಾಡಿದ ಆರೋಗ್ಯ ಸಚಿವರಿಗೆ ರಾಜಕೀಯ ಲಾಭ ಆಗುತ್ತಾ ಇಲ್ಲ ಎಂಬುದರ ಬಗ್ಗೆ ಚರ್ಚೆಗಳು ನಡೆದಿವೆ.

– ಎಂ.ಎ.ತಮೀಮ್‌ ಪಾಷ

 

ಟಾಪ್ ನ್ಯೂಸ್

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.