ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮನೆ ಮೇಲೂ ಐಟಿ ದಾಳಿ
ಮಾಜಿ ಸಂಸದ ಆರ್.ಎಲ್.ಜಾಲಪ್ಪ ಪುತ್ರ , ಸೋದರಳಿಯ ಮನೆ ಮೇಲೆ ಐಟಿ ರೇಡ್
Team Udayavani, Oct 10, 2019, 12:20 PM IST
ಚಿಕ್ಕಬಳ್ಳಾಪುರ: ವಿಧಾನಸಭಾ ಉಪಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಸಂಸದ ಆರ್.ಎಲ್.ಜಾಲಪ್ಪ ಸೋದರಳಿಯ ಉದ್ಯಮಿ ಜಿ ಹೆಚ್ ನಾಗರಾಜ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಪ್ರಶಾಂತ ನಗರದಲ್ಲಿರುವ ಮಾತೃ ಮಂದಿರ ಮೇಲೆ ಬೆಂಗಳೂರುನಿಂದ ಆಗಮಿಸಿರುವ 10 ಕ್ಕೂ ಹೆಚ್ಚು ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಕೋಲಾರದಲ್ಲಿರುವ ಜಾಲಪ್ಪ ಮೆಡಿಕಲ್ ಕಾಲೇಜ್ ಕಾರ್ಯದರ್ಶಿಯಾಗಿ ಜಿ.ಹೆಚ್ ನಾಗರಾಜ್ ಕಾರ್ಯನಿರ್ವಹಿಸುತ್ತಿದ್ದಾರೆ. ಡಾ.ಕೆ.ಸುಧಾಕರ್ ಶಾಸಕ ಸ್ಥಾನದಿಂದ ಅನರ್ಹಗೊಂಡ ಬಳಿಕ ಘೋಷಣೆಯಾಗಿರುವ ಚಿಕ್ಕಬಳ್ಳಾಪುರ ಉಪಚುನಾವಣೆಗೆ ಜಿ.ಹೆಚ್. ನಾಗರಾಜ್ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದಾರೆ.
ಇದೇ ವೇಳೆ ಸೋಮೇಶ್ವರ ಬಡವಣೆಯಲ್ಲಿರುವ ಆರ್.ಎಲ್ ಜಾಲಪ್ಪ ಅವರ ಮೂರನೇ ಪುತ್ರ ಜೆ. ರಾಜೇಂದ್ರ ಅವರ ಮನೆ ಹಾಗೂ ನಗರದ ಹೊರವಲಯದಲ್ಲಿರುವ ಆರ್.ಎಲ್ ಜಾಲಪ್ಪ ತಾಂತ್ರಿಕ ವಿವಿಯಲ್ಲಿನ ಕಚೇರಿಯಲ್ಲಿ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.