“ದೇಶದಲ್ಲಿ ನುಡಿದಂತೆ ನಡೆದಿದ್ದು ಸಿದ್ದು ಸರ್ಕಾರ ಮಾತ್ರ’


Team Udayavani, Dec 28, 2017, 3:18 PM IST

CHIKKB.jpg

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ 2013ರಲ್ಲಿ ಅಧಿಕಾರಕ್ಕೆ ಬರುವ ಮುಂಚೆ ಪಕ್ಷ ನೀಡಿದ್ದ 165 ಭರವಸೆಗಳನ್ನು ಶೇ.99 ರಷ್ಟು ಈಡೇರಿಸಿದೆ. ಅದೇ ರೀತಿ ದೇಶದಲ್ಲಿ ನುಡಿದಂತೆ ನಡೆಯುತ್ತಿರುವ ಸರ್ಕಾರ ಯಾವುದಾದರೂ ಇದ್ದರೆ ಅದು ಕೇವಲ ಕಾಂಗ್ರೆಸ್‌ ಸರ್ಕಾರ ಮಾತ್ರ ಎಂದು ಶಾಸಕ ಡಾ.ಕೆ.ಸುಧಾಕರ್‌ ತಿಳಿಸಿದರು.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಂಚೇನಹಳ್ಳಿ ಹೋಬಳಿ ಬಿಸಲಹಳ್ಳಿಯಲ್ಲಿ ವ್ಯವಸಾಯ ಸೇವಾ ಸಹಕಾರ ಸಂಘದಿಂದ ಬುಧವಾರ ಸ್ತ್ರೀಶಕ್ತಿ ಸಂಘಗಳಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸಿ ಅವರು ಮಾತನಾಡಿದರು.

ಬಿಜೆಪಿ ಹುಸಿ ಭರವಸೆ: ಕೇಂದ್ರ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅನೇಕ ಭರವಸೆಗಳು ಹುಸಿಯಾಗಿದೆ. ಪ್ರತಿ ಖಾತೆಗೆ 15 ಲಕ್ಷ ರೂ. ಹಾಕುವುದು, ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ, ಕಪ್ಪು ಹಣ ಪತ್ತೆ ಮಾಡುವುದನ್ನು ಬಿಜೆಪಿ ಸರ್ಕಾರ ಸಂಪೂರ್ಣ ಮರೆತಿದೆ. ರಾಜ್ಯ ಬಿಜೆಪಿ ನಾಯಕರು ಕೂಡ ಕಳೆದ ಬಾರಿ ಜನ ಅವರಿಗೆ ಅವಕಾಶ ಕೊಟ್ಟಾಗ ಏನು ಮಾಡಲಿಲ್ಲ. ಈಗ ನಾವೇ ಅಧಿಕಾರಕ್ಕೆ ಬರುತ್ತೇ ವೆಂದು ಹಗಲು ಕನಸು ಕಾಣುತ್ತಿದ್ದಾರೆಂದು ಕಿಡಿಕಾರಿದರು. 

ಕೇಂದ್ರ ಸರ್ಕಾರ ರೈತ ವಿರೋಧಿ: ಸತತ ನಾಲ್ಕೈದು ವರ್ಷಗಳಿಂದ ತೀವ್ರ ಬರಗಾಲಕ್ಕೆ ತುತ್ತಾಗಿದ್ದ ರಾಜ್ಯದ ರೈತರು ಸಹಕಾರ ಬ್ಯಾಂಕ್‌ಗಳಲ್ಲಿ ಮಾಡಿದ್ದ 50 ಸಾವಿರ ರೂ. ವರೆಗಿನ ಸಾಲವನ್ನು ರಾಜ್ಯ ಸರ್ಕಾರ ಮನ್ನಾ ಮಾಡಿತು. ಇದರಿಂದ ಸರ್ಕಾರಕ್ಕೆ ಒಟ್ಟು 8,150 ಕೋಟಿ ರೂ. ಹೊರೆ ಆಯಿತು.

ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಹಿತ ಕಾಪಾಡಿದರು. ಆದರೆ, ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಮಾಡಿದ್ದ ಸಾಲವನ್ನು ಮನ್ನಾ ಮಾಡದೇ ನಾವು ರೈತ ವಿರೋಧಿಗಳು ಎಂಬುದನ್ನು ನಿರೂಪಿಸಿದೆ. ಹಿಂದೆ ಯುಪಿಎ ಸರ್ಕಾರದಲ್ಲಿ ಪ್ರಧಾನಿ ಮನಮೋಹನ ಸಿಂಗ್‌ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 70 ಸಾವಿರ ಕೋಟಿ ಸಾಲವನ್ನು ಮನ್ನಾ ಮಾಡಿದರು. ಆದರೆ, ಈಗಿನ ಪ್ರಧಾನಿಗೆ ರೈತರ ಸಾಲ ಮನ್ನಾ ಏಕೆ ಸಾಧ್ಯವಾಗುವುದಿಲ್ಲ ಎಂದು ಪ್ರಶ್ನಿಸಿದರು. ಚುನಾವಣೆ ಸಂದರ್ಭದಲ್ಲಾದರೂ ಪ್ರಧಾನಿ ನರೇಂದ್ರ ಮೋದಿ ರೈತರ ಸಾಲ ಮನ್ನಾ ಮಾಡಿದರೆ ಅದನ್ನು ಪಕ್ಷಾತೀತವಾಗಿ ಸ್ವಾಗತಿಸುತ್ತದೆಯೆಂದರು.

ಲಕ್ಷ ಕೃಷಿ ಹೊಂಡ: ರೈತರು, ಮಹಿಳೆಯರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಸದೃಢರಾಗಿ ಸಮಾಜದ
ಮುಖ್ಯವಾಹಿನಿಗೆ ಬರಬೇಕೆಂಬ ಉದ್ದೇಶದಿಂದ ಸರ್ಕಾರ 3 ಲಕ್ಷ ರೂ. ವರೆಗೂ ಬಡ್ಡಿ ರಹಿತ ಸಾಲ ನೀಡುತ್ತಿದೆ. ಜೊತೆಗೆ
ಲಕ್ಷಕ್ಕೂ ಅಧಿಕ ಕೃಷಿ ಹೊಂಡ ನಿರ್ಮಿಸಲಾಗಿದೆ ಎಂದರು.

24 ಸಂಘಗಳಿಗೆ 71.33 ಲಕ್ಷ ವಿತರಣೆ: ಬಿಸಲಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ ವತಿಯಿಂದ ಒಟ್ಟು 24 ಸ್ತ್ರೀಶಕ್ತಿ ಸಂಘಗಳ ಮಹಿಳಾ ಸದಸ್ಯರಿಗೆ ಶೂನ್ಯ ಬಡ್ಡಿದರದಲ್ಲಿ ಒಟ್ಟು 71.33 ಲಕ್ಷ ರೂ. ಸಾಲದ ಚೆಕ್‌ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಬ್ಯಾಂಕ್‌ ಅಧ್ಯಕ್ಷ ವಿರೂಪಕ್ಷಗೌಡ, ಜಿಪಂ ಸದಸ್ಯ ಪಿ.ಎನ್‌.ಪ್ರಕಾಶ್‌, ಡಿಸಿಸಿ ಬ್ಯಾಂಕ್‌ ಹಿರಿಯ ನಿರ್ದೇಶಕರಾದ ಶ್ರೀರಾಮರೆಡ್ಡಿ, ಹನುಮೇಗೌಡ, ಹನುಂತರೆಡ್ಡಿ, ತಾಪಂ ಸದಸ್ಯರಾದ ಮೋಹನ್‌, ಬಾಲಕೃಷ್ಣ, ಮಾಜಿ ಜಿಪಂ ಸದಸ್ಯರಾದ ಜಗನ್ನಾಥ, ಮುಖಂಡರಾದ ಸುರೇಶ್‌, ಸುದರ್ಶನರೆಡ್ಡಿ, ಸುಬ್ಟಾರೆಡ್ಡಿ, ರಿಯಾಜ್‌, ಗೆಂಗಿರೆಡ್ಡಿ, ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರಾದ ನಾರಾಯಣಸ್ವಾಮಿ ಇತರರಿದ್ದರು. 

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.