ಸರ್ಕಾರಿ ಹಾಸ್ಟೆಲ್‌ಗಿಂತ ಜೈಲೇವಾಸಿ!


Team Udayavani, Aug 24, 2017, 3:34 PM IST

chikb 1.jpg

ಚಿಂತಾಮಣಿ: ನಮ್ಮ ರಾಜ್ಯದಲ್ಲಿ ಸರ್ಕಾರಿ ಹಾಸ್ಟೆಲ್‌ಗ‌ಳಿಗಿಂತ ಜೈಲುಗಳಲ್ಲಿ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುತ್ತಾರೆ. ನಮಗೆ ಜೈಲುಗಳಲ್ಲಿಯೇ ಅವಕಾಶ ಮಾಡಿಕೊಡಿ. ನಾವು
ಅಲ್ಲಿಯೇ ತಿಂಡಿ ಊಟ ಮಾಡಿಕೊಂಡು ಓದಿಕೊಳ್ಳುತ್ತೇವೆ ಎಂದು ನಗರದ ಬಂಬೂ ಬಜಾರ್‌ನಲ್ಲಿರುವ ಪರಿಶಿಷ್ಟ ಪಂಗಡ ಬಾಲಕರ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಬುಧವಾರ ಮುತ್ತಿಗೆ ಹಾಕಿ ಮಾತನಾಡಿದ ವಿದ್ಯಾರ್ಥಿಗಳು, ತಾಲೂಕಿನ ಜೈಲುನಲ್ಲಿರುವ ಖೈದಿಗಳಿಗೆ ಉತ್ತಮ ಆಹಾರ ನೀಡಿ ಎಲ್ಲಾ ರೀತಿಯ ಮೂಲಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಅಪರಾಧ ಮಾಡಿದ ಖೈದಿಗಳನ್ನು ಸುರಕ್ಷಿತವಾಗಿ ನೋಡಿ
ಕೊಳ್ಳುತ್ತಿರುವ ಈ ಸರ್ಕಾರ ವಿದ್ಯಾರ್ಥಿಗಳ ಜೀವನದ ಬಗ್ಗೆ ಕಾಳಜಿ ವಹಿಸದೆ ನಿರ್ಲಕ್ಷಿಸಿದೆ ಎಂದು ದೂರಿದರು. ಅಧಿಕಾರಿಗಳ ನಿರ್ಲಕ್ಷ್ಯಾ: ನಗರದ ಬಂಬೂ ಬಜಾರ್‌ನಲ್ಲಿರುವ ಪರಿಶಿಷ್ಟ ಪಂಗಡ ವಿದ್ಯಾರ್ಥಿ ನಿಲಯದಲ್ಲಿ ಕುಡಿಯುವ ನೀರಿನ ಸಮಸ್ಯೆ, ಕಳಪೆ ಆಹಾರ ವಿತರಣೆ, ಮೆನು ಕಡೆಗಣಿಸಿ ಊಟ
ವಿತರಣೆ ಸೇರಿದಂತೆ ಹಲವು ಮೂಲಭೂತ ಸಮಸ್ಯೆಗಳಿವೆ. ಇವನ್ನು ಪರಿಹರಿಸಲು ಒತ್ತಾಯಿಸಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೆ ಅಧಿಕಾರಿ, ನಮ್ಮ ಬಗ್ಗೆ ಅಥವಾ ನಮ್ಮ ಸಮಸ್ಯೆ ಬಗ್ಗೆ ಕ್ರಮ ಕೈಗೊಂಡಿಲ್ಲ ಎಂದು ವಿದ್ಯಾರ್ಥಿಗಳು ತಮ್ಮ ಆಳಲು ತೋಡಿಕೊಂಡಿದ್ದಾರೆ.
ಜೈಲುಗಳಲ್ಲೇ ಹೆಚ್ಚು ಸೌಲಭ್ಯ: ಜೈಲುಗಳಲ್ಲಿರುವ ಪ್ರತಿ ಖೈದಿಗೆ ದಿನದ ಆಹಾರ ಖರ್ಚಿಗೆಂದು 75 ರೂ. ನೀಡುತ್ತಾರೆ. ಆದರೆ, ವಿದ್ಯಾರ್ಥಿಗಳಿಗೆ ಮಾತ್ರ 42 ರೂ. ನೀಡುತ್ತಾರೆ. ಅಪರಾಧ ಮಾಡಿದ ವ್ಯಕ್ತಿಗಳಿಗೆ ಹೆಚ್ಚಿನ ಅನುದಾನ ನೀಡುತ್ತಿದ್ದು, ವಿದ್ಯಾಭ್ಯಾಸ ಮಾಡಿ, ದೇಶ ಕಟ್ಟುವ ವಿದ್ಯಾರ್ಥಿಗಳಿಗೆ ಕಡಿಮೆ ಅನುದಾನ ನೀಡಿ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ಸ್ಪಂದಿಸದ ನಿಲಯ ಪಾಲಕರು: ನಿಲಯದಲ್ಲಿ ಹಲವು ಸಮಸ್ಯೆಗಳು ವಿದ್ಯಾರ್ಥಿಗಳನ್ನು ಕಾಡುತ್ತಿದ್ದರೂ ನಿಲಯ ಪಾಲಕರು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ. ನಾವು ಸಮಸ್ಯೆ ಇದೆ ಎಂದು ಹೇಳಿದರೆ ವಿದ್ಯಾರ್ಥಿಗಳನ್ನು ಬಯ್ಯುತ್ತಾರೆಂದು ನೋವು ತೋಡಿಕೊಂಡರು. ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳನ್ನು ಒಂದೇ ಹಾಸ್ಟೆಲ್‌ಗ‌ಳಿಗೆ ಸೇರಿಸಬೇಕು. ಒಂದೇ ಕಡೆ ಒಂದೇ ರೀತಿಯ ಸೌಲಭ್ಯಗಳನ್ನು ಒದಗಿಸಬೇಕೆಂದು ಒತ್ತಾಯಿಸಿದರು.

ಟಾಪ್ ನ್ಯೂಸ್

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.