ಸಾಲಕ್ಕೆ ಜಮಾ ಕೃಷಿ ಸಮ್ಮಾನ್, ಜನಧನ್ ಹಣ!
ಕೋವಿಡ್ ಅಟ್ಟಹಾಸ: ಲಾಕ್‌ಡೌನ್ ಸಂಕಷ್ಟದಲ್ಲಿ ಕೈ ಹಿಡಿಯುವ ನಿರೀಕ್ಷೆಯಲ್ಲಿದ್ದ ಫಲಾನುಭವಿಗಳಿಗೆ ಶಾಕ್
Team Udayavani, Apr 22, 2020, 5:52 PM IST
ಸಾಂದರ್ಭಿಕ ಚಿತ್ರ
ಚಿಕ್ಕಬಳ್ಳಾಪುರ: ಲಾಕ್‌ಡೌನ್‌ನಿಂದ ಕಂಗಾಲಾಗಿರುವ ರೈತರಿಗೆ ಹಾಗೂ ಮಹಿಳೆಯರ ಕೈ ಹಿಡಿಯುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನಧನ್ ಖಾತೆದಾರರಿಗೆ ಮೊದಲ ಕಂತಾಗಿ 500 ರೂ. ಹಾಗೂ ಪ್ರಧಾನ ಮಂತ್ರಿ ಕೃಷಿ ಸನ್ಮಾನ್ ಯೋಜನೆಯಡಿ ಬಿಡುಗಡೆಗೊಂಡಿರುವ ತಲಾ 2000 ರೂ.ಗಳನ್ನು ಕೆಲವು ಬ್ಯಾಂಕ್‌ಗಳು ಸಾಲಕ್ಕೆ ಜಮಾ ಮಾಡಿಕೊಳ್ಳುತ್ತಿರುವ ಬಗ್ಗೆ ಆರೋಪಗಳು ಕೇಳಿ ಬರುತ್ತಿವೆ.
ಕೋವಿಡ್ ಸೋಂಕು ತಡೆಯುವ ಉದ್ದೇಶದಿಂದ ಇಡೀ ದೇಶವನ್ನು ಕೇಂದ್ರ ಸರ್ಕಾರ ಲಾಕ್‌ಡೌನ್ ಘೋಷಣೆ ಮಾಡಿದ್ದು ಮೇ.3 ರ ತನಕ ಮುಂದುವರಿಯಲಿದೆ. ಇದರ ನಡುವೆ ಸರ್ಕಾರಗಳು ಜನರ ಸಂಕಷ್ಟಗಳಿಗೆ ನೆರವಾಗಲು ಜನಧನ್ ಖಾತೆಗೆ 500 ರೂ. ಹಾಗೂ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ 2000 ರೂ. ಬಿಡುಗಡೆ ಮಾಡಿ ರೈತರ ಹಾಗೂ ಕೃಷಿ ಕೂಲಿಕಾರರ ಕೈ ಹಿಡಿದಿದೆ.
ಸಾಲಕ್ಕೆ ಜಮೆ: ಆದರೆ ಕೇಂದ್ರ ಸರ್ಕಾರ ಹಾಕಿದ ಹಣವನ್ನು ಖುಷಿಯಿಂದ ಡ್ರಾ ಮಾಡಲು ಹೋಗುತ್ತಿರುವ ಗ್ರಾಹಕರಿಗೆ ಶಾಕ್ ನೀಡುವ ಕೆಲಸವನ್ನು ಬ್ಯಾಂಕ್‌ಗಳು ಮಾಡುತ್ತಿದ್ದು,
ಕಷ್ಟಕಾಲದಲ್ಲಿ ಮಾನವೀಯತೆ ಮರೆತು ಸಾಲದ ಹಣಕ್ಕೆ ಪಿಂಚಣಿ, ಜನಧನ್ ಖಾತೆಗೆ ಹಾಕಿರುವ ಹಣವನ್ನು ಜಮೆ ಮಾಡಿಕೊಳ್ಳುತ್ತಿದ್ದು, ಸದ್ಯದ ಗ್ರಾಹಕರ ಸ್ಥಿತಿ ದೇವರು ವರ
ಕೊಟ್ಟರೂ ಪೂಜಾರಿ ಕೊಡಲಿಲ್ಲ ಎನ್ನುವಂತಾಗಿದೆ. ಲಾಕ್‌ಡೌನ್‌ನಿಂದ ಬಡ ಹಾಗೂ ಮಧ್ಯಮ ವರ್ಗದ ಜನರ ಜೀವನ ತೀವ್ರ ಸಂಕಷ್ಟದಲ್ಲಿದೆ. ಆದರೆ ಜಿಲ್ಲೆಯ ಕೆಲ ಖಾಸಗಿ
ಹಾಗೂ ಸಾರ್ವಜನಿಕ ಬ್ಯಾಂಕ್‌ಗಳು ಜನರ ನೆರವಿಗೆ ಕೊಟ್ಟ ಹಣವನ್ನು ಸಾಲಕ್ಕೆ ಮುರಿದುಕೊಳ್ಳುವ ಕಾಯಕದಲ್ಲಿ ನಿರತವಾಗಿದ್ದು, ಜನರ ಆಕ್ರೋಶಕ್ಕೆ ತುತ್ತಾಗಿವೆ. ಜಿಲ್ಲೆಯಲ್ಲಿ ಅತಿ ಹಿಂದುಳಿದ ಬಾಗೇಪಲ್ಲಿ, ಗುಡಿಬಂಡೆ, ಚಿಂತಾಮಣಿ ತಾಲೂಕುಗಳಲ್ಲಿ ಇತಂಹ ಆರೋಪಗಳು ಸಾರ್ವಜನಿಕರಿಂದ ವ್ಯಕ್ತವಾಗಿದ್ದು, ಈ ಬಗ್ಗೆ ಸಂಬಂದಪಟ್ಟ ಜಿಲ್ಲಾಡಳಿತದ ಅಧಿಕಾರಿಗಳು ಎಚ್ಚೆತ್ತಿಕೊಂಡು ಬ್ಯಾಂಕ್‌ಗಳಿಗೆ ಸೂಕ್ತ ನಿರ್ದೇಶನ ನೀಡಬೇಕಿದೆ.
ಪಿಂಚಣಿ ಹಾಗೂ ಜನಧನ್ ಖಾತೆಗೆ ಜಮೆ ಆಗಿರುವ ಹಣವನ್ನು ಬ್ಯಾಂಕ್‌ಗಳು ಸಾಲಕ್ಕೆ ಜಮೆ ಮಾಡಿಕೊಳ್ಳುವಂತಿಲ್ಲ. ಈ ಬಗ್ಗೆ ಯಾವುದೇ ಬ್ಯಾಂಕ್‌ನಲ್ಲಿ ಆಗಿದ್ದರೂ ನಾಗರಿಕರು ದೂರು
ಕೊಡಬಹುದು. ನರೇಗಾ ಕೂಲಿ ಹಣ ಸಾಲಕ್ಕೆ ಹಿಡಿಯುತ್ತಿದ್ದರ ಬಗ್ಗೆ ದೂರು ಬಂದ ತಕ್ಷಣ ಸ್ಪಂದಿಸಿ ಬ್ಯಾಂಕ್‌ಗಳಿಗೆ ಎಚ್ಚರಿಕೆ ನೀಡಲಾಗಿದೆ. ಬಸವರಾಜ್, ಲೀಡ್ ಬ್ಯಾಂಕ್ ವ್ಯವಸ್ಥಾಪಕರು
ವೃದ್ಧಗೆ ಬಿಡುಗಡೆಗೊಂಡಿರುವ ಪಿಂಚಣಿ, ಮಹಿಳೆಯ ಜನಧನ್ ಖಾತೆಗೆ ಜಮೆ ಆಗಿರುವ ಹಣ ಕೆಲವು ಬ್ಯಾಂಕ್‌ಗಳು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿವೆ. ಲಾಕ್‌ಡೌನ್ ಮುಗಿದ ಮೇಲೆ ಕಟ್ಟು ತ್ತೇವೆಂದು ಹೇಳಿದರೂ ಕೇಳುತ್ತಿಲ್ಲ. ಸರ್ಕಾರ ಬಲಗೈಯಲ್ಲಿ ಕೊಟ್ಟು ಎಡಗೈಯಲ್ಲಿ ಪಡೆಯುತ್ತಿದೆ. ಬಿಳ್ಳೂರು ನಾಗರಾಜ್, ಕೃಷಿ ಕೂಲಿಕಾರರ ಸಂಘದ ರಾಜ್ಯ ಸಮಿತಿ ಸದಸ್ಯ
ಕಾಗತಿ ನಾಗರಾಜಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.