ಜಪಾನ್‌ ಮಾದರಿಯ ಮಿಯಾವಾಕಿ ಅರಣ್ಯ ನೋಡಿ ಬನ್ನಿ!

Team Udayavani, Jul 25, 2023, 4:12 PM IST

ಜಪಾನ್‌ ಮಾದರಿಯ ಮಿಯಾವಾಕಿ ಅರಣ್ಯ ನೋಡಿ ಬನ್ನಿ!

ಚಿಕ್ಕಬಳ್ಳಾಪುರ: ಅವರೆಲ್ಲಾ ಕೈ ತುಂಬ ಸಂಬಳ ಪಡೆಯವರು, ಮನಸ್ಸು ಮಾಡಿದರೆ ವಾರಾಂತ್ಯದಲ್ಲಿ ಮೋಜು, ಮಸ್ತಿ ಅಂತ ತಿರುಗಾಡಿ ಸುಖದ ಸುಪ್ಪತ್ತಿಗೆಯಲ್ಲಿ ಜೀವನ ಕಳೆಯಬಹುದು. ಆದರೆ, ಅವರ ಹಸಿರು ಪ್ರೇಮ ಈಗ ಕಿರು ಅರಣ್ಯಗಳ ನಿರ್ಮಾಣದತ್ತ ನೆಟ್ಟಿದೆ. ಬರದ ಬವಣೆ ಅನುಭವಿಸಿರುವ ಜಿಲ್ಲೆಯಲ್ಲಿ ಅರಣ್ಯ ಪ್ರದೇಶ ಹೆಚ್ಚಿಸಲು ಚಿಕ್ಕಬಳ್ಳಾಪುರದ ಹಸಿರು ಸ್ವಯಂ ಸೇವಾ ಸಂಸ್ಥೆ ಸದಸ್ಯರು ಸದ್ದಿಲ್ಲದೇ ಮುಂದಾಗಿದ್ದಾರೆ.

ಅತಿ ಕಡಿಮೆ ಜಾಗದಲ್ಲಿ ಹೆಚ್ಚು ಕಾಡು ಬೆಳೆಸುವ ಮಿಯಾವಾಕಿ ಕಿರು ಅರಣ್ಯ ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಿ ಗಮನ ಸೆಳೆಯುತ್ತಿದೆ. ಇದೊಂದು ಜಪಾನ್‌ ಮಾದರಿ ಕ್ರಮವಾಗಿದೆ. ಈಗಾಗಲೇ ಈ ಹಸಿರು ತಂಡ ಎರಡು ವರ್ಷದ ಹಿಂದೆ ನಗರಸಭೆ ಉದ್ಯಾನವನದಲ್ಲಿ ನಿರ್ಮಿಸಿರುವ ಮಿಯಾವಾಕಿ ಕಿರು ಅರಣ್ಯವನ್ನು ರಾಜ್ಯ ಪೌರಾಡಳಿತ ನಿರ್ದೇಶನಾಲಯದ ಅಧಿಕಾರಿಗಳ ಗಮನ ಸೆಳೆದಿದೆ.

ಆರಂಭದಲ್ಲಿ ನಗರಸಭೆ ಉದ್ಯಾನವನ ಗುರಿ ಮಾಡಿ ಕೊಂಡು ಅಲ್ಲಿರುವ ಅಲ್ಪಸ್ವಲ್ಪ ಜಾಗದಲ್ಲಿ ಹೊಂಗೆ, ನೇರಳೆ ಮತ್ತಿತರ ಸಸಿ ನೆಟ್ಟು ಪೋಷಿಸಿದ್ದರು. ನಂತರ, ಪ್ರತಿವಾರವೂ ಅರಣ್ಯ ಸಂರಕ್ಷಣೆಗೆ ಟೊಂಕ ಕಟ್ಟಿ ನಿಲ್ಲುತ್ತಿದೆ.

ತಾವೇ ಗಿಡ ಖರೀದಿಸಿ ನಾಟಿ: ಹಸಿರು ತಂಡದ ಸದಸ್ಯರು ತಾವೇ ಸ್ವತಃ ಅರಣ್ಯ ಇಲಾಖೆಯಲ್ಲಿ ಸಿಗುವ ವಿವಿಧ ಬಗೆಯ ಅದರಲ್ಲೂ ಸ್ಥಳೀಯ ಪರಿಸರಕ್ಕೆ ಹೊಂದಿಕೊಳ್ಳುವ ಸಸಿಗಳನ್ನು ರಿಯಾಯ್ತಿ ದರದಲ್ಲಿ ಖರೀದಿಸಿ ನೆಡುತ್ತಾರೆ.

ಪ್ಲಾಸ್ಟಿಕ್‌ ತ್ಯಜಿಸಿ: ಈಗಾಗಲೇ ಚಿಕ್ಕಬಳ್ಳಾಪುರ ತಾಲೂಕಿನ ಹಲವು ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್‌ ಮುಕ್ತ ಮಾಡಲು ಜಾಗೃತಿ ಮೂಡಿಸಿ ಬಳಸಿ ಬಿಸಾಡಿದ್ದ ಪ್ಲಾಸ್ಟಿಕ್‌ಗಳನ್ನು ಟನ್‌ಗಟ್ಟಲೇ ಸಂಗ್ರಹಿಸಿ ವಿಲೇವಾರಿ ಮಾಡಿದ್ದಾರೆ. ಸಮಯ ಸಿಕ್ಕಾಗಲೆಲ್ಲಾ ಸರ್ಕಾರಿ ಶಾಲೆಗಳ ಅಂದ, ಚೆಂದ ಹೆಚ್ಚಿಸಲು ಕಾಂಪೌಂಡ್‌, ಗೋಡೆಗಳಿಗೆ ವರ್ಲಿ ಕಲೆ ಬಿಡಿಸುತ್ತಾರೆ. ತಂಡದಲ್ಲಿ ಐಟಿ, ಬಿಟಿ ಉದ್ಯೋಗಿಗಳು: ಹಸಿರು ತಂಡದಲ್ಲಿ ಬಹುತೇಕರು ಐಟಿ, ಬಿಟಿ ಉದ್ಯೋಗಿಗಳು. ಜತೆಗೆ ಕಾಲೇಜು ಉಪನ್ಯಾಸಕರು, ಶಾಲಾ, ಶಿಕ್ಷಕರು, ವಿದ್ಯಾರ್ಥಿಗಳು, ನಗರದ ವ್ಯಾಪಾರಿಗಳು, ಸರ್ಕಾರಿ ನೌಕರರು, ಸಿಬ್ಬಂದಿಯೂ ತಂಡದಲ್ಲಿದ್ದಾರೆ. ಸುಮಾರು 40ಕ್ಕೂ ಹೆಚ್ಚು ಮಂದಿ ಇದ್ದು ಪ್ರತಿ ವಾರ ಪರಿಸರ ಬೆಳೆಸುವ ಕಾರ್ಯದಲ್ಲಿ ತೊಡಗುತ್ತಾರೆ.

ಮಿಯಾವಾಕಿ ಕಿರು ಅರಣ್ಯ: ಈಗಾಗಲೇ ಚಿಕ್ಕಬಳ್ಳಾಪುರದ ಹಸಿರು ಸ್ವಯಂ ಸೇವಾ ಸಂಸ್ಥೆ ಸದಸ್ಯರು ಚಿಕ್ಕಬಳ್ಳಾಪುರ ನಗರಸಭೆ ವ್ಯಾಪ್ತಿಯ ಬಿ.ಬಿ.ರಸ್ತೆಯ ಸೌಮ್ಯಾ ಕಣ್ಣಾಸ್ಪತ್ರೆ ರಸ್ತೆ ನಗರಸಭೆ ಉದ್ಯಾನ ವನದಲ್ಲಿ ಮಿಯಾವಾಕಿ ಕಿರು ಅರಣ್ಯ ಬೆಳೆಸಿದ್ದಾರೆ. 2 ವರ್ಷದ ಹಿಂದೆ ನೆಟ್ಟಿರುವ ಗಿಡ ಈಗ ಮರಗಳಾಗಿವೆ. ಅಪಾರ ಜೀವ ವೈವಿಧ್ಯ ವಾಸಿಸಲು ಅನುಕೂಲವಾಗಿದೆ.

ಮಿಯಾವಾಕಿ ಕಿರು ಅರಣ್ಯ ಪ್ರದೇಶ ಬೆಳೆಸಲು ಸಾಕಷ್ಟು ತಯಾರಿ ಬೇಕು. ಗಿಡ ನೆಡಕ್ಕೂ ಮೊದಲು ಜೆಸಿಬಿಯಿಂದ ಭೂಮಿ ಹದ ಮಾಡಬೇಕಾ ಗುತ್ತದೆ. ಬಳಿಕ ಗಿಡ ನೆಟ್ಟ ಬಳಿಕ ಕನಿಷ್ಠ ವರ್ಷ ನೀರು ಚೆನ್ನಾಗಿ ಕೊಡಬೇಕು. ಜತೆಗೆ ಗೊಬ್ಬರ ಹಾಕಬೇಕು. ● ಮಧುಕೃಷ್ಣಪ್ಪ, ಹಸಿರು ಸ್ವಯಂ ಸೇವಾ ಸಂಸ್ಥೆ ಅಧ್ಯಕ್ಷರು, ಚಿಕ್ಕಬಳ್ಳಾಪುರದ ಐಟಿ ಉದ್ಯೋಗಿ

– ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.