ಕೋವಿಡ್ ನಿಯಂತ್ರಣ ನೆಪದಲ್ಲಿ ಖಜಾನೆ ಖಾಲಿ
Team Udayavani, Dec 7, 2020, 8:10 PM IST
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಿಸುವ ನೆಪದಲ್ಲಿ ಬಿಜೆಪಿ ಸರ್ಕಾರಖಜಾನೆ ಖಾಲಿ ಮಾಡಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿಗೆ ಚಿಕಿತ್ಸೆ ನೀಡಲು ಲಕ್ಷಾಂತರ ರೂ.ಲೂಟಿ ಮಾಡುತ್ತಿದ್ದರೂ ಸಹ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ ಎಂದು ಜಿಲ್ಲೆಯ ಶಿಡ್ಲಘಟ್ಟ ಕ್ಷೇತ್ರದ ಜೆಡಿಎಸ್ ಮುಖಂಡ ಮೇಲೂರು ರವಿಕುಮಾರ್ ಟೀಕಿಸಿದರು.
ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಕ್ಷೇತ್ರದ ಗ್ರಾಪಂ ಚುನಾವಣೆಯ ಸಂಘಟನಾ ಪೂರ್ವಸಿದ್ಧತಾ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರ, ರೈತರು ಮತ್ತು ಜನಸಾಮಾನ್ಯರ ಹಿತವನ್ನು ನಿರ್ಲಕ್ಷಿಸಿದ್ದು, ಜೆಡಿಎಸ್‌ನಿಂದ ಮಾತ್ರ ರೈತರು ಮತ್ತು ಬಡಜನರ ಕಲ್ಯಾಣ ಸಾಧ್ಯ ಎಂದರು.
ಗ್ರಾಪಂ ಅಧಿಕಾರ ನೀಡಿ: ಕ್ಷೇತ್ರದಲ್ಲಿ ನಿರುದ್ಯೋಗ ಸಮಸ್ಯೆ ಹೋಗಲಾಡಿಸಲು ಮತ್ತು ಬಡವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಶೈಕ್ಷಣಿಕ ಕೇಂದ್ರ ಮಾಡಲು 30 ಗ್ರಾಪಂಗಳಲ್ಲಿ 25ಗ್ರಾಪಂಗಳ ಆಡಳಿತವನ್ನು ನೀಡಬೇಕೆಂದು ಮನವಿ ಮಾಡಿದ ಅವರು, ಗ್ರಾಪಂಗಳಲ್ಲಿ ಅಧಿಕಾರ ಹಿಡಿದರೆ ಕ್ಷೇತ್ರದಲ್ಲಿ ಹೊಸ ಇತಿಹಾಸ ಸೃಷ್ಟಿಸುವ ಜೊತೆಗೆ ನಿರುದ್ಯೋಗ ಸಮಸ್ಯೆನಿವಾರಿಸಿ ಶೈಕ್ಷಣಿಕ ಕೇಂದ್ರವಾಗಿ ಅಭಿವೃದ್ಧಿಗೊಳಿಸಲಾಗುವುದು ಎಂದು ಭರವಸೆ ನೀಡಿದರು.
ಕೇಂದ್ರ ಸರ್ಕಾರ ಉದ್ಯಮಿಗಳನ್ನು ಅಭಿವೃದ್ಧಿ ಗೊಳಿಸುವ ಯೋಜನೆಯನ್ನು ಜಾರಿಗೊಳಿಸಿದೆ. ತೈಲಬೆಲೆ ಹೆಚ್ಚಳ ಮಾಡಿ ಜನಸಾಮಾನ್ಯರ ಮೇಲೆ ಬರೆ ಎಳೆಯುತ್ತಿದ್ದಾರೆ. ಬಡವರ ಪರವಾಗಿ ಯೋಜನೆಗಳ ಮಾಡುವ ಬದಲು ಶ್ರೀಮಂತರನ್ನು ಮತ್ತಷ್ಟು ಶ್ರೀಮಂತ ಗೊಳಿಸುತ್ತಿರುವುದೇ ಅವರ ಸಾಧನೆ ಎಂದು ಲೇವಡಿ ಮಾಡಿದರು.
ಸವಾಲಾಗಿ ಸ್ವೀಕರಿಸಿ: ಜಿಪಂ ಸದಸ್ಯ ಬಂಕ್ ಮುನಿಯಪ್ಪ ಮಾತನಾಡಿ, ಗ್ರಾಮ ಪಂಚಾಯಿತಿ ಚುನಾವಣೆ ಮಹತ್ವ ಪಡೆದುಕೊಂಡಿದೆ. ಜೆಡಿಎಸ್ ಕಾರ್ಯಕರ್ತರು ಯಾಮಾರಿದರೆಕಷ್ಟವಾಗುತ್ತದೆ. ಮೇಲೂರು ರವಿಕುಮಾರ್ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದರೂ ಕ್ಷೇತ್ರದ ಜನರ ಸೇವೆ ಮಾಡಿಕೊಂಡು ಬಂದಿದ್ದಾರೆ. ಗ್ರಾಪಂ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಪಡೆಯುವ ಮೂಲಕ ಅವರಕೈಬಲಪಡಿಸಬೇಕು. ಗ್ರಾಪಂ ಚುನಾವಣೆಯಲ್ಲಿ ಜೆಡಿಎಸ್‌ಬೆಂಬಲಿತರು ಅಧಿಕಾರದಲ್ಲಿದ್ದರೆ ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಹಸ್ತಕ್ಷೇಪ ಮಾಡಲು ಸಾಧ್ಯವಾಗುವುದಿಲ್ಲ. ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಕಾರ್ಯನಿರ್ವಹಿಸಬೇಕೆಂದು ಸಲಹೆ ನೀಡಿದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷ ರಾಜಶೇಖರ್, ಎಪಿಎಂಸಿ ಮಾಜಿ ಅಧ್ಯಕ್ಷ ಉಜಗೂರು ರಾಮಯ್ಯ, ತಾದೂರು ರಘು, ತಾಪಂ ಮಾಜಿ ಅಧ್ಯಕ್ಷ ಕೆ.ಲಕ್ಷ್ಮೀ ನಾರಾಯಣ,ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ನಾರಾಯಣಸ್ವಾಮಿ, ಮಾಜಿ ಅಧ್ಯಕ್ಷ ಮುನಿ ವೆಂಕಟ ಸ್ವಾಮಿ,ಚೀಮನಹಳ್ಳಿಗೋಪಾಲ, ಕದಸಂಸ ಜಿಲ್ಲಾ ಸಂಚಾಲಕ ಮೇಲೂರು ಮಂಜುನಾಥ, ಕೊತ್ತನೂರು ಲಕ್ಷ್ಮೀಪತಿ, ಕುಂದಲಗುರ್ಕಿ ಚಂದ್ರು, ಮುಗಿಲಡಪಿ ನಂಜಪ್ಪ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.