ಬೂತ್ ಮಟ್ಟದಿಂದ ಜೆಡಿಎಸ್ ಸಂಘಟನೆ
Team Udayavani, Mar 12, 2022, 3:30 PM IST
ಗುಡಿಬಂಡೆ: ಜೆಡಿಎಸ್ ಪಕ್ಷ ಬಡವರ, ಜನಪರ, ಅಲ್ಪಸಂಖ್ಯಾತರ ಪರವಾಗಿ ಹೋರಾಟ ಮಾಡುವಂತಹ ಪಕ್ಷವಾಗಿದ್ದು, ಗುಡಿಬಂಡೆ- ಬಾಗೇಪಲ್ಲಿ ಕ್ಷೇತ್ರ ದಲ್ಲಿ ಬೂತ್ ಮಟ್ಟದಿಂದಲೇ ಪಕ್ಷದ ಬಲವರ್ಧನೆಗೆ ಶ್ರಮ ವಹಿಸುವುದಾಗಿ ಜೆಡಿ ಎಸ್ ಪಕ್ಷದ ಹಿಂದುಳಿದ ವರ್ಗಗಳ ಕಾರ್ಯದರ್ಶಿ ಪಿ.ನಾರಾಯಣ್ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತ ನಾಡಿ, ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಬಲಪಡಿಸುವ ಅಗತ್ಯತೆ ಹೆಚ್ಚಾಗಿದೆ. ಪಕ್ಷವನ್ನು ಗ್ರಾಮಿಣ ಮಟ್ಟದಿಂದಲೇ ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುತ್ತೇನೆ. ಈಗಾಗಲೇ ಕ್ಷೇತ್ರದಲ್ಲಿನ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡಿದ್ದೇನೆ. ನಮ್ಮ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳವಾಗಿದ್ದು, ಅವರ ಸಮಸ್ಯೆ ಗಳಿಗೂ ಸಹ ಪರಿಹಾರ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ನಿರಂತರವಾಗಿ ಕ್ಷೇತ್ರದ ಕಾರ್ಯಕರ್ತರೊಂದಿಗೆ
ಸ್ಥಳೀಯ ಸಮಸ್ಯೆಗಳ ಕುರಿತು ಚರ್ಚೆ ಮಾಡಿ ಬಗೆಹರಿಸುವ ಕ್ರಮಕ್ಕೆ ಮುಂದಾಗ ಬೇಕಾಗುತ್ತದೆ ಎಂದರು. ಬಳಿಕ ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಮಂಜುನಾಥ್ ಮಾತನಾಡಿ, ಜೆಡಿಎಸ್ ಪಕ್ಷದ ಕೆಲ ಮುಖಂಡರಿಂದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ಯಾರೇ ಕ್ಷೇತ್ರಕ್ಕೆ ಬಂದರೂ ಸ್ಥಳೀಯ ಕಾರ್ಯಕರ್ತರನ್ನು ಪರಿಗಣನೆಗೆ ತೆಗೆದುಕೊಂಡು ಕೆಲಸ ಮಾಡಬೇ ಕಿದೆ. ಆದರೆ ಕೆಲ ನಾಯಕರು ನಮ್ಮನ್ನು ಕಡೆಗಣಿಸಿದ್ದು ಸರಿಯಲ್ಲ. ಇನ್ನೂ ನಾವೇಲ್ಲ ಪಕ್ಷದ ಶಿಸ್ತಿನ ಸಿಪಾಯಿಗಳಾಗಿದ್ದು, ಪಕ್ಷದಿಂದ ಯಾರೇ ವ್ಯಕ್ತಿಯನ್ನು ಚುನಾವನೆಗೆ ಕಳುಹಿಸಿದರೇ ಅವರ ಪರವಾಗಿಯೇ ಕೆಲಸ ಮಾಡುತ್ತೇವೆ ಎಂದರು.
ಜೆಡಿಎಸ್ ಪಕ್ಷದ ಮುಖಂಡ ಭಾಸ್ಕರ ರೆಡ್ಡಿ, ಪಪಂ ಮಾಜಿ ಅಧ್ಯಕ್ಷ ಅಪ್ಸರ್ ಬಾಷ, ಸದಸ್ಯ ರಾಜಣ್ಣ, ಪಾಪಿರೆಡ್ಡಿ, ವೆಂಕಟರೆಡ್ಡಿ, ಬಾಗೇಪಲ್ಲಿ ನೂರುಲ್ಲಾ, ಮುನೀರ್ ಅಹ್ಮದ್, ರವಿ, ಶ್ರೀನಿವಾಸ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.