ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನ.19 ರಿಂದ ಜೆಡಿಎಸ್ ಪಂಚರತ್ನ ಯಾತ್ರೆ: ಕೆ.ಪಿ.ಬಚ್ಚೇಗೌಡ
Team Udayavani, Nov 10, 2022, 10:04 PM IST
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕುಮಾರಣ್ಣ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ಅಧಿಕಾರ ನೀಡಿದರೆ ಐದು ವರ್ಷಗಳ ಅವಧಿಯಲ್ಲಿ ಪಂಚರತ್ನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಕೆಲಸವನ್ನು ಮಾಡುತ್ತೇವೆ ಎಂದು ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಹೇಳಿದರು.
ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಉದಯವಾಣಿಯೊಂದಿಗೆ ಮಾತನಾಡಿದ ಅವರು ಕುಂಭಧ್ರೋಣ ಮಳೆಯಿಂದ ಮುಂದೂಡಲ್ಪಟ್ಟಿದ್ದ ಪಂಚರತ್ನ ಯಾತ್ರೆಯನ್ನು ನ.14 ರಿಂದ ಕೋಲಾರ ಜಿಲ್ಲೆಯ ಮುಳಬಾಗಿಲಿನಿಂದ ಪುನಃ ಆರಂಭವಾಗುತ್ತದೆ ಆನಂತರ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿಗೆ ನ.19 ರಂದು ಆಗಮಿಸುತ್ತದೆ ಎಂದರು.
ನವೆಂಬರ್ 19 ರಂದು ಚಿಂತಾಮಣಿ ತಾಲೂಕಿನಲ್ಲಿ ಯಾತ್ರೆಯನ್ನು ಆರಂಭಿಸಿ ಬಳಿಕ ಜೆಕೆ ಭವನದಲ್ಲಿ ಕುಮಾರಸ್ವಾಮಿ ಅವರು ವಾಸ್ತವ್ಯ ಮಾಡಲಿದ್ದಾರೆ ಬಳಿಕ ನ.20 ರಂದು ಶಿಡ್ಲಘಟ್ಟ ತಾಲೂಕಿಗೆ ಪ್ರವೇಶ ಮಾಡಿ ಸಾದಲಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಿ ಸ್ಥಳೀಯರೊಂದಿಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಅದೇ ರೀತಿ ನ.21 ರಂದು ಬಾಗೇಪಲ್ಲಿ ತಾಲೂಕಿಗೆ ಬಂದು ಎಸ್.ಎಸ್.ಪ್ಯಾಲೇಸ್‍ನಲ್ಲಿ ವಾಸ್ತವ್ಯ ಹೂಡಿ ಆನಂತರ ನ.22 ರಂದು ಗೌರಿಬಿದನೂರು ತಾಲೂಕಿನಲ್ಲಿ ಸಂಚರಿಸಿ ರಾಮಚಂದ್ರಪುರದಲ್ಲಿ ಗ್ರಾಮ ವಾಸ್ತವ್ಯ ಮಾಡಿ ಬಳಿಕ ನ.23 ರಂದು ಚಿಕ್ಕಬಳ್ಳಾಪುರ ತಾಲೂಕಿಗೆ ಯಾತ್ರೆ ಪ್ರವೇಶ ಮಾಡಲಿದೆ ಎಂದರು.
ಚಿಕ್ಕಬಳ್ಳಾಪುರ ತಾಲೂಕಿನ ನಂದಿಯ ದೇವಸ್ಥಾನದಲ್ಲಿ ಗ್ರಾಮ ವಾಸ್ತವ್ಯ ಹೂಡಲು ನಿರ್ಧರಿಸಲಾಗಿದೆ ಅದಕ್ಕಾಗಿ ಅನುಮತಿ ಕೋರಿದ್ದೇವೆ ಎಂದ ಮಾಜಿ ಶಾಸಕರು ಮಂಚೇನಹಳ್ಳಿ ತಾಲೂಕಿನಿಂದ ಯಾತ್ರೆ ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಹಳ್ಳಿ, ಮುಷ್ಟೂರು,ಗೊಲ್ಲಹಳ್ಳಿ,ಪೆರೆಸಂದ್ರ,ನಾಯನಹಳ್ಳಿ ಸಹಿತ ಎಳೆಂಟು ಕಡೆ ಕಾರ್ಯಕ್ರಮ ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಈಗಾಗಲೇ ಹೋಬಳಿ ಮಟ್ಟದಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸಿದ್ದು ಜಿಲ್ಲೆಯಾದ್ಯಂತ ನಡೆಯಲಿರುವ ಪಂಚರತ್ನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಪಕ್ಷದ ಕಾರ್ಯಕರ್ತರು ಮತ್ತು ಕುಮಾರಣ್ಣ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರಲ್ಲದೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಾತ್ರೆ ಪೂರ್ಣಗೊಂಡು ನ.24 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿಗೆ ತೆರಳುತ್ತದೆ ಎಂದರು.
ಒಮ್ಮೆ ಜೆಡಿಎಸ್‍ಗೆ ಅಧಿಕಾರ ಕೊಡಿ
ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕೆ.ಎಂ.ಮುನೇಗೌಡ ಮಾತನಾಡಿ ರಾಷ್ಟ್ರೀಯ ಪಕ್ಷಗಳಾಗಿರುವ ಬಿಜೆಪಿ ಮತ್ತು ಕಾಂಗ್ರೆಸ್ ಜನರ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ ಜನಸಾಮಾನ್ಯರು ಅನೇಕ ರೀತಿಯ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ ಹೀಗಾಗಿ ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ಕುಮಾರಣ್ಣ ಅವರನ್ನು ಮುಖ್ಯಮಂತ್ರಿ ಮಾಡಿದರೆ ಕರ್ನಾಟಕ ರಾಜ್ಯದಲ್ಲಿ ಒಂದು ಸ್ವಚ್ಛ ಮತ್ತು ಪಾರದರ್ಶಕ ಆಡಳಿತ ಬರುವ ಜೊತೆಗೆ ಶಿಕ್ಷಣ, ಆರೋಗ್ಯ,ವಸತಿ,ಉದ್ಯೋಗ,ರೈತ ಚೈತನ್ಯ ಪಂಚರತ್ನ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಹಕಾರಿಯಾಗುತ್ತದೆ ಎಲ್ಲರು ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ಸಹಕರಿಸಬೇಕೆಂದು ವಿನಂತಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕುಮಾರಣ್ಣ ಅವರ ನೇತೃತ್ವದಲ್ಲಿ ನಡೆಯುವ ಪಂಚರತ್ನ ಯಾತ್ರೆಯಲ್ಲಿ 05 ಪಂಚರತ್ನ ವಾಹನಗಳು, ಒಂದು ವೇದಿಕೆ ಬಸ್, ಒಂದು ಧ್ವನಿವರ್ಧಕಗಳ ವಾಹನ, ಡಿಜೆ ಸೌಂಡ್ ಸಿಸ್ಟಮ್ ಹಾಗೂ ಕುಮಾರಣ್ಣ ಅವರು ವಾಸ್ತವ್ಯ ಹೂಡಲಿರುವ ಸಲಕರಣೆಗಳ ವಾಹನ ಜೊತೆಯಲ್ಲಿ ಇರಲಿದೆ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ 2 ಸಾರ್ವಜನಿಕ ಸಭೆಗಳನ್ನು ನಡೆಸಲು ನಿರ್ಧರಿಸಲಾಗಿದೆ ಪಂಚರತ್ನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲೆಯಾದ್ಯಂತ ಪಕ್ಷದ ಮುಖಂಡರು ಪೂರ್ವಭಾವಿ ಸಭೆಗಳನ್ನು ನಡೆಸಿದ್ದಾರೆ ಎಲ್ಲರು ಪಂಚರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.