ಚಿಕ್ಕಬಳ್ಳಾಪುರ ಜಿಲ್ಲೆಗೆ ನ.23 ರಿಂದ ಜೆಡಿಎಸ್ ಪಂಚರತ್ನ ಯಾತ್ರೆ: ಜೆ.ಕೆ.ಕೃಷ್ಣರೆಡ್ಡಿ

ಅನುದಾನ ಹಂಚಿಕೆಯಲ್ಲಿ ತಾರತಮ್ಯ ಶ್ವೇತಪತ್ರ ಹೊರಡಿಸಿ: ಬೆಳ್ಳಿ ಲೋಕೇಶ್ ಆಗ್ರಹ

Team Udayavani, Nov 21, 2022, 10:29 PM IST

1-ddss

ಚಿಕ್ಕಬಳ್ಳಾಪುರ: ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳ ಅಭಿವೃಧ್ಧಿ ವಿಷಯದಲ್ಲಿ ಸಮಾನವಾಗಿ ಅನುದಾನವನ್ನು ಹಂಚಿಕೆ ಮಾಡಬೇಕಾದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ವಿರೋಧ ಪಕ್ಷಗಳ ಕ್ಷೇತ್ರಗಳ ಅಭಿವೃಧ್ಧಿಗಾಗಿ ಅನುದಾನ ಹಂಚಿಕೆ ವಿಚಾರದಲ್ಲಿ ತಾರತಮ್ಯ ನೀತಿಯನ್ನು ಅನುಸರಿಸಿದ್ದು ಈ ಬಗ್ಗೆ ಶ್ವೇತಪತ್ರವನ್ನು ಹೊರಡಿಸಬೇಕೆಂದು ಜೆಡಿಎಸ್ ಪಕ್ಷದ ವೀಕ್ಷಕ ಬೆಳ್ಳಿ ಲೋಕೇಶ್ ಆಗ್ರಹಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುಧ್ಧಿಗಾರರೊಂದಿಗೆ ಮಾತನಾಡಿದ ಅವರು ರಾಷ್ಟ್ರೀಯ ಪಕ್ಷಗಳ ಧೋರಣೆ ಮತ್ತು ನೀತಿಗಳಿಂದ ಜನ ರೋಸಿ ಹೋಗಿದ್ದಾರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕುಮಾರಣ್ಣ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ಅಧಿಕಾರ ನೀಡಲು ಒಲವು ವ್ಯಕ್ತಪಡಿಸಿದ್ದಾರೆ ರಾಜ್ಯದಲ್ಲಿ ಜನಪರ ಆಡಳಿತಕ್ಕಾಗಿ ಸ್ಪಷ್ಟಬಹುಮತ ನೀಡಿ ಪ್ರಾದೇಶಿಕ ಪಕ್ಷವನ್ನು ಬೆಳೆಸಬೇಕೆಂದು ಮನವಿ ಮಾಡಿದರು.

ಕರ್ನಾಟಕವೂ ದೇಶದಲ್ಲಿ ಅತಿ ಹೆಚ್ಚು ತೆರಿಗೆಯನ್ನು ಪಾವತಿ ಮಾಡಿದರು ಅನುದಾನವನ್ನು ಹಂಚಿಕೆ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಅವರು ತಾರತಮ್ಯ ಮಾಡುತ್ತಿದ್ದಾರೆ ಅದೇ ರೀತಿಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಹ ವಿರೋಧಪಕ್ಷಗಳ ಕ್ಷೇತ್ರಗಳ ಅಭಿವೃಧ್ಧಿ ವಿಷಯದಲ್ಲಿ ಮತ್ತು ಅನುದಾನ ಹಂಚಿಕೆಯಲ್ಲಿ ಮಲತಾಯಿ ಧೋರಣೆಯನ್ನು ಅನುಸರಿಸಿ ಬಿಜೆಪಿ ಪಕ್ಷದ ಶಾಸಕರ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನವನ್ನು ನೀಡುತ್ತಿದ್ದಾರೆ ಈ ವಿಚಾರದಲ್ಲಿ ಮುಖ್ಯಮಂತ್ರಿ ಶ್ವೇತಪತ್ರವನ್ನು ಹೊರಡಿಸಬೇಕೆಂದು ಒತ್ತಾಯಿಸಿದರು.

ಚಿಂತಾಮಣಿ ಕ್ಷೇತ್ರದ ಶಾಸಕ ಜೆ.ಕೆ.ಕೃಷ್ಣರೆಡ್ಡಿ ಮಾತನಾಡಿ ಕುಂಭಧ್ರೋಣ ಮಳೆಯಿಂದ ಮುಂದೂಡಲ್ಪಟ್ಟಿದ್ದ ಪಂಚರತ್ನ ಯಾತ್ರೆಯನ್ನು ಕೋಲಾರ ಜಿಲ್ಲೆಯ ಮುಳವಾಗಿಲಿನಿಂದ ಪುನಃ ಆರಂಭಿಸಿ ಬಂಗಾರಪೇಟೆ, ಮಾಲೂರು, ಕೋಲಾರದಲ್ಲಿ ಪಂಚರತ್ನ ಯಾತ್ರೆ ನಡೆದಿದ್ದು ನಾಳೆ ಶ್ರೀನಿವಾಸಪುರ ತಾಲೂಕಿನಲ್ಲಿ ಯಾತ್ರೆಯನ್ನು ನಡೆಸಿ ಆನಂತರ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಶ್ರೀ ಕ್ಷೇತ್ರ ಕೈವಾರ ಯೋಗಿನಾರಾಯಣ ಮಠದ ಆವರಣದಲ್ಲಿ ನ.23 ರಂದು ಪೂಜೆ ಸಲ್ಲಿಸಿ ದಿನಪೂರ್ತಿ ಕ್ಷೇತ್ರಾದ್ಯಂತ ಸಂಚರಿಸಿ ಬಳಿಕ 24 ರಂದು ಶಿಡ್ಲಘಟ್ಟ,ನ.25 ಬಾಗೇಪಲ್ಲಿ, ನ.26 ಗೌರಿಬಿದನೂರು, ನ.27 ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪಂಚರತ್ನ ಯಾತ್ರೆ ನಡೆಯಲಿದೆ ಐದು ದಿನಗಳ ಕಾಲ ಜಿಲ್ಲೆಯಲ್ಲಿ ಯಾತ್ರೆ ನಡೆಯಲಿದೆ ಎಲ್ಲಾ ಕ್ಷೇತ್ರಗಳಲ್ಲಿ ಜೆಡಿಎಸ್ ನಾಯಕರು ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ ಜಿಲ್ಲೆಯಲ್ಲಿ ಯಾತ್ರೆಯನ್ನು ಯಶಸ್ವಿಗೊಳಿಸಲು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಮಾತನಾಡಿ ಮಂಚೇನಹಳ್ಳಿ ತಾಲೂಕಿನಿಂದ ಯಾತ್ರೆ ಚಿಕ್ಕಬಳ್ಳಾಪುರ ತಾಲೂಕಿನ ಪೋಶೆಟ್ಟಹಳ್ಳಿ, ಮುಷ್ಟೂರು, ಗೊಲ್ಲಹಳ್ಳಿ,ಪೆರೆಸಂದ್ರ, ದಿಬ್ಬೂರು, ನಾಯನಹಳ್ಳಿ ಸಹಿತ ಎಳೆಂಟು ಕಡೆ ಕಾರ್ಯಕ್ರಮ ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಈಗಾಗಲೇ ಹೋಬಳಿ ಮಟ್ಟದಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸಿದ್ದು ಜಿಲ್ಲೆಯಾದ್ಯಂತ ನಡೆಯಲಿರುವ ಪಂಚರತ್ನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಪಕ್ಷದ ಕಾರ್ಯಕರ್ತರು ಮತ್ತು ಕುಮಾರಣ್ಣ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕೆ.ಎಂ.ಮುನೇಗೌಡ ಮಾತನಾಡಿ ರಾಷ್ಟ್ರೀಯ ಪಕ್ಷಗಳಾಗಿರುವ ಬಿಜೆಪಿ ಮತ್ತು ಕಾಂಗ್ರೆಸ್ ಜನರ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ ಜನಸಾಮಾನ್ಯರು ಅನೇಕ ರೀತಿಯ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ ಹೀಗಾಗಿ ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ಕುಮಾರಣ್ಣ ಅವರನ್ನು ಮುಖ್ಯಮಂತ್ರಿ ಮಾಡಿದರೆ ಕರ್ನಾಟಕವನ್ನು ದೇಶದಲ್ಲಿ ಮಾದರಿಯಾಗಿ ಅಭಿವೃಧ್ಧಿಗೊಳಿಸಿ ಸ್ವಚ್ಛ ಮತ್ತು ಪಾರದರ್ಶಕ ಆಡಳಿತ ಬರುವ ಜೊತೆಗೆ ಶಿಕ್ಷಣ, ಆರೋಗ್ಯ, ವಸತಿ, ಉದ್ಯೋಗ, ರೈತ ಚೈತನ್ಯ ಪಂಚರತ್ನ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಹಕಾರಿಯಾಗುತ್ತದೆ ಎಲ್ಲರು ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ಸಹಕರಿಸಬೇಕೆಂದು ವಿನಂತಿಸಿದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಪಕ್ಷದ ವೀಕ್ಷಕರಾದ ಹರೀಶ್ ಗೌಡ, ಕವಿತಾರೆಡ್ಡಿ, ಅಜ್ಜವಾರ ಕೆ.ಆರ್.ರೆಡ್ಡಿ, ಮುಕ್ತ ಮುನಿಯಪ್ಪ, ವರುಣ್, ಸ್ವರೂಪ್, ಆದಿ,ಲಕ್ಷ್ಮಣರೆಡ್ಡಿ,ಬೈರ್‍ರೆಡ್ಡಿ,ಗೌರಿಬಿದನೂರು ನರಸಿಂಹಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

10-gudibande

Gudibande: ಕಲ್ಯಾಣಿಯಲ್ಲಿ ಬಿದ್ದು ಯುವಕ ಸಾವು

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

13-

Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.