ಮನೆ ಬಾಗಿಲಿಗೆ ಜಾಬ್ ಕಾರ್ಡ್ ನೀಡಿ
Team Udayavani, Sep 7, 2020, 2:19 PM IST
ಶಿಡ್ಲಘಟ್ಟ: ಗ್ರಾಪಂ ವ್ಯಾಪ್ತಿಗಳಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳ ಮಾಹಿತಿಯನ್ನು ಇಲಾಖೆಯ ಪಂಚತಂತ್ರಾಂಶದಲ್ಲಿ ಅಪ್ಲೋಡ್ ಮಾಡಬೇಕೆಂದು ತಾಪಂ ಇಒ ಬಿ.ಶಿವಕುಮಾರ್ ಸೂಚಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಗ್ರಾಪಂ ಗಣಕಯಂತ್ರ ನಿರ್ವಾಹಕರು (ಆಪರೇಟರ್)ಗಳೊಂದಿಗೆ ಸಭೆ ನಡೆಸಿದ ಅವರು, ಗ್ರಾಮೀಣ ಪ್ರದೇಶದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಸರ್ಕಾರದ ಸೂಚನೆಯನ್ನು ಪಾಲಿಸಿ ಜಾಬ್ ಕಾರ್ಡ್‌ಗಳನ್ನು ತ್ವರಿತವಾಗಿ ವಿತರಿಸಬೇಕೆಂದು ಸೂಚಿಸಿದರು.
ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಪೂರಕವಾಗಿರುವ ನರೇಗಾ ಯೋಜನೆಯನ್ನು ಪ್ರತಿಯೊಬ್ಬರ ಮನೆಯ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ, ಜಾಬ್ ಕಾರ್ಡ್ ಅಥವಾ ಇನ್ನಿತರೆ ಸೌಲಭ್ಯ ಪಡೆಯಲು ಬರುವ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಬೇಕೆಂದು ಸೂಚಿಸಿದರು. ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗಾಗಿಕೈಗೊಂಡ ಯೋಜನೆಗಳಲ್ಲಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಡಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದ ಅವರು, ಸೆಪ್ಟೆಂಬರ್ ತಿಂಗಳಿನಲ್ಲಿ ಸೋಕ್ ಫಿಟ್ ನಿರ್ಮಾಣ ಮಾಡಲಾಗುತ್ತಿದ್ದು, ಇದಕ್ಕೆ ಸಂಪೂರ್ಣವಾಗಿ ಸಹಕರಿಸಬೇಕಲ್ಲದೇ, ಪಿಡಿಒಗೆ ಪೂರಕವಾಗಿ ತೆರಿಗೆ ವಸೂಲಿ ಮಾಡಲುಹೆಚ್ಚಿನ ಸಹಕಾರ ನೀಡಬೇಕೆಂದು ಸಲಹೆ ನೀಡಿದರು. ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
MUST WATCH
ಹೊಸ ಸೇರ್ಪಡೆ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.