ಕ್ಷಯಮುಕ್ತ ಭಾರತಕ್ಕಾಗಿ ಕೈ ಜೋಡಿಸಿ

ಕ್ಷಯ ರೋಗವನ್ನು ದೇಶದಲ್ಲಿ ಕೊನೆಗಾಣಿಸಿ ಕ್ಷಯಮುಕ್ತ ಭಾರತ ಎಂದು ಘೋಷಿಸುವ ಗುರಿ

Team Udayavani, Jul 22, 2022, 6:36 PM IST

ಕ್ಷಯಮುಕ್ತ ಭಾರತಕ್ಕಾಗಿ ಕೈ ಜೋಡಿಸಿ

ಚಿಕ್ಕಬಳ್ಳಾಪುರ: ಮನೆ ಬಾಗಿಲಿಗೆ ತೆರಳಿ ಕ್ಷಯರೋಗ ಪತ್ತೆ ಹಚ್ಚುವ ಜೊತೆಗೆ ಅದನ್ನು ನಿರ್ಮೂಲನೆ ಮಾಡುವಲ್ಲಿ ರಾಜ್ಯ ಸರ್ಕಾರ ಆ.15ರವರೆಗೆ ಎಲ್ಲಾ ಜಿಲ್ಲೆಯಲ್ಲಿ ಸಕ್ರಿಯ ಆಂದೋಲನವನ್ನು ಇತ್ತೀಚಿಗೆ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಕೇಂದ್ರದಿಂದ 11 ಸದಸ್ಯರ ಜೆಎಸ್‌ಎಸ್‌ ತಂಡವು ಚಿಕ್ಕಬಳ್ಳಾಪುರಕ್ಕೂ ಭೇಟಿ ನೀಡಿತ್ತು.

ನಗರ ಹೊರವಲಯದ ಜಿಪಂ ಮಿನಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನಾ  ಕಾರ್ಯಕ್ರಮವನ್ನು ಜೆ.ಎಸ್‌.ಎಸ್‌ ತಂಡವು ಉದ್ಘಾಟಿಸಿ, ನಂತರ ಜಿಲ್ಲೆಯ ಕ್ಷಯರೋಗ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಳ್ಳುವ ಮೂಲಕ ಪ್ರಗತಿ ಪರಿಶೀಲನೆ ನಡೆಸಿತು.

ಕ್ಷಯ ರೋಗ ಕೊನೆಗಾಣಿಸಿ: ಕರಪತ್ರ ಮತ್ತು ಭಿತ್ತಿಪತ್ರಗಳನ್ನು ಬಿಡುಗಡೆಗೊಳಿಸುವ ಮೂಲಕ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೇಂದ್ರ ತಂಡದ ಸದಸ್ಯ ಡಾ. ರಾಜೇಂದ್ರ ಪಿ.ಜೋಶಿ, 2025ರ ವೇಳೆಗೆ ಕ್ಷಯ ರೋಗವನ್ನು ದೇಶದಲ್ಲಿ ಕೊನೆಗಾಣಿಸಿ ಕ್ಷಯಮುಕ್ತ ಭಾರತ ಎಂದು ಘೋಷಿಸುವ ಗುರಿಯನ್ನು ಹೊಂದಲಾಗಿದೆ. ಎಲ್ಲರೂ ಈ ನಿಟ್ಟಿನಲ್ಲಿ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಕಫ‌ ಪರೀಕ್ಷಿಸಿಕೊಳ್ಳಲು ಸಲಹೆ ನೀಡಿ: ಜಿಲ್ಲೆಯಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಹಚ್ಚಲು ಆರೋಗ್ಯ ಇಲಾಖೆಯು ಮತ್ತಷ್ಟು ಅರಿವು ಮೂಡಿಸುವ ಚಟುವಟಿಕೆಗಳನ್ನು ರೂಪಿಸಬೇಕು. ರೋಗದ ಲಕ್ಷಣಗಳು ಕಂಡು ಬಂದಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಸರ್ಕಾರಿ ಆಸ್ಪತ್ರೆಗೆ ಬಂದು, ಕಫ ಪರೀಕ್ಷೆ ಮಾಡಿಸಿಕೊಳ್ಳುವಂತೆ ಹೆಚ್ಚು ಅರಿವು ಮೂಡಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಕ್ಷಯಮುಕ್ತ ರಾಜ್ಯವನ್ನಾಗಿಸೋಣ: ಎಲ್ಲರೂ ಒಗ್ಗೂಡಿ ಕ್ಷಯ ರೋಗದ ವಿರುದ್ಧ ಹೋರಾಟ ನಡೆಸಿ, ಕರ್ನಾಟಕವನ್ನು ಕ್ಷಯಮುಕ್ತ ರಾಜ್ಯವನ್ನಾಗಿಸೋಣ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಜೊತೆಗೆ ಹೆಚ್ಚಿನ ಮಾಹಿತಿಗಾಗಿ ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಅಥವಾ ನಿಕ್ಷಯ್‌ ಸಹಾಯವಾಣಿ 1800116666ಕ್ಕೆ ಕರೆ ಮಾಡಬಹುದು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಜೆಎಸ್‌ಎಸ್‌ ತಂಡದ ಸದಸ್ಯರಾದ ಡಾ.ರಂಜನಿ ರಾಮಚಂದ್ರನ್‌, ಡಾ.ರಾಜೇಶ್‌ ಎಲ್‌. ಕಡೆಮಣಿ, ಡಾ.ಜಾರ್ಜ್‌ ಬೆಲಾ ಸ್ಟೇಕ್‌, ಡಾ.ಎಸ್‌.ಆನಂದ, ಡಾ.ಶೀಬು ಬಾಲಕೃಷ್ಣ, ಡಾ.ಶಿವವಲ್ಲಿನಾಥನ್‌ ಅರುಣಾಚಲಂ, ವಿN°àಶ್ವರನ್‌, ಸೋಮಸುಂದರನ್‌, ಡಾ.ಹರ್ಷಿದ್‌ ಲಾಂಡೆ, ಡಾ.ಸಮಂತಾ ಗ್ರೇಸ್‌, ಡಾ.ಕೊಪ್ಪಳ್‌ ಶ್ರೀವತ್ಸವಾ, ಜಿಲ್ಲಾ ಕುಟುಂಬ ಕಲ್ಯಾಣಾ ಧಿಕಾರಿ ಡಾ.ಎಸ್‌.ಎಸ್‌.ಮಹೇಶ್‌ ಕುಮಾರ್‌, ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಯೆಲ್ಲಾ ರಮೇಶ್‌ ಬಾಬು, ಡಾ.ಅನಿಲ್‌ ಸೇರಿದಂತೆ ಆರೋಗ್ಯ ಇಲಾಖೆಯ ಅಧಿ ಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.