ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಸಚಿವ ಡಾ.ಕೆ.ಸುಧಾಕರ್
Team Udayavani, Feb 25, 2021, 2:25 PM IST
ಚಿಕ್ಕಬಳ್ಳಾಪುರ: ಜನಪ್ರಿಯ ನಂದಿ ಗಿರಿಧಾಮವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿಸಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ನಂದಿಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಂದಿಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶ ಆಕರ್ಷಕವಾಗಿದೆ. ಇದಕ್ಕೆ ಐತಿಹಾಸಿಕ, ಧಾರ್ಮಿಕ ಪ್ರಾಮುಖ್ಯತೆಯಿದ್ದು, ವಿಶೇಷವಾದ ಸಸ್ಯಸಂಪತ್ತು ಇದೆ. ಇವೆಲ್ಲವನ್ನೂ ಗಮನಿಸಿ ಪ್ರವಾಸೋದ್ಯಮ ಕ್ಷೇತ್ರವಾಗಿಸಬಹುದು. ಇದಕ್ಕಾಗಿ ನಮ್ಮ ಸರ್ಕಾರ ಈಗಾಗಲೇ 10 ಕೋಟಿ ರೂ. ಅನುದಾನ ನೀಡಿದೆ ಎಂದು ಮಾಹಿತಿ ನೀಡಿದರು.
ರೋಪ್ ವೇ ಕನಸು ನನಸು: ಕಳೆದ 15 ವರ್ಷಗಳಿಂದ ರೋಪ್ ವೇ ಬೇಕು ಎಂದು ಜನರು ಬೇಡಿಕೆ ಇಡುತ್ತಿದ್ದಾರೆ. ಅಂತಾರಾಷ್ಟ್ರೀಯ ಕಂಪನಿಯೊಂದು ಇದನ್ನು ಮಾಡಲು ಮುಂದಾಗಿ ನಂತರ ಕಾರಣಾಂತರದಿಂದ ಯೋಜನೆ ಕೈ ಬಿಟ್ಟಿತ್ತು. ಈಗ ಆ ಕನಸು ನನಸಾಗಲಿದೆ. ಇಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲು 10 ಎಕರೆಗೂ ಹೆಚ್ಚು ಜಾಗವನ್ನು ಪಡೆಯಲು ಪ್ರಯತ್ನಿಸಲಾಗಿದೆ. ಈ ರೀತಿ ಮಾಸ್ಟರ್ ಪ್ಲಾನ್ ಮಾಡಿ ಅನುಷ್ಠಾನಗೊಳಿಸಲಾಗುವುದು. ಮೂರ್ನಾಲ್ಕು ತಿಂಗಳಲ್ಲಿ ಕಾಮಗಾರಿ ಮುಗಿಯಬಹುದು ಎಂದರು.
ಇದನ್ನೂ ಓದಿ: ಮುಂದಿನ ಉಪ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧೆ: ಎಚ್ ಡಿ ಕುಮಾರಸ್ವಾಮಿ
ತಕ್ಷಣದಲ್ಲಿ ಟೆಂಡರ್ ಆಗಿ ಎಲ್ಲ ಬಗೆಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ನಂದಿಬೆಟ್ಟವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ರೂಪುಗೊಳಿಸಬೇಕಿದೆ. ಈ ತಾಣವು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 30 ಕಿ.ಮೀ. ದೂರದಲ್ಲಿದೆ. ಬೆಂಗಳೂರು ನಗರದಿಂದ ಒಂದು ಗಂಟೆಯಲ್ಲಿ ಬರಬಹುದು. ಈ ಪ್ರದೇಶವನ್ನು ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೂಡ ಎಲ್ಲ ಸಹಕಾರ ನೀಡಲಾಗುವುದು ಎಂದು ಉತ್ತೇಜಿಸಿದ್ದಾರೆ ಎಂದರು.
ಇದರ ಜೊತೆಗೆ ಎಕೋ-ಟೂರಿಸಂ, ಸುತ್ತಮುತ್ತಲಿನ ಐದು ಬೆಟ್ಟಗಳಿಗೆ ಚಾರಣ ದಾರಿಗಳು, ಪುರಾತತ್ವ ಸ್ಮಾರಕಗಳು, ನೆಲ್ಲಿಕಾಯಿ ಬಸವಣ್ಣ ಮತ್ತು ಮಂಟಪಗಳ ಸಂರಕ್ಷಣೆ, ಸುಂದರೀಕರಣ ಸೇರಿದಂತೆ ವಿಶ್ವದರ್ಜೆಯ ಪ್ರವಾಸಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ರಾಜ್ಯದಲ್ಲಿ ವಿಶಿಷ್ಟವಾದ ಪ್ರವಾಸಿ ತಾಣಗಳಿವೆ. ಮುಖ್ಯಮಂತ್ರಿಗಳು ಮಂಡಿಸಲಿರುವ ಆಯವ್ಯಯದಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಲಿದ್ದಾರೆ ಎಂದರು.
ಇದನ್ನೂ ಓದಿ: ಪೆಟ್ರೋಲ್-ಡೀಸೆಲ್ ಬೆಲೆ ನಿಯಂತ್ರಣ ಕೇಂದ್ರ ಸರ್ಕಾರದ ಕೈಯಲ್ಲಿಲ್ಲ: ಅಶ್ವಥ್ ನಾರಾಯಣ
ಪ್ಲಾಸ್ಟಿಕ್ ನಿಷೇಧ: ನಂದಿಬೆಟ್ಟದಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ಸಂಪೂರ್ಣ ನಿಷೇಧಿಸಲು ತೀರ್ಮಾನಿಸಲಾಗಿದೆ. ಯಾವುದೇ ರೀತಿಯ ಪ್ಲಾಸ್ಟಿಕ್ ಒಳಗೆ ತೆಗೆದುಕೊಂಡು ಹೋಗಲು ಅವಕಾಶ ನೀಡದಿರಲು ನಿರ್ಧರಿಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಪ್ರವಾಸೋದ್ಯಮ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ನಿರ್ದೇಶಕ ರಾಕೇಶ್, ಕೆಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ಜಿಲ್ಲಾಧಿಕಾರಿ ಆರ್ ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.