ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತ್ಯೇಕ ಹಾಲು ಒಕ್ಕೂಟ ಮಾಡಲು ಅಭ್ಯಂತರವಿಲ್ಲ:ಕೆ.ವೈ.ನಂಜೇಗೌಡ


Team Udayavani, May 12, 2022, 9:47 PM IST

nanjunde-gowda

ಚಿಕ್ಕಬಳ್ಳಾಪುರ : ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟವನ್ನು ವಿಭಜನೆ ಮಾಡಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಒಕ್ಕೂಟ ಮಾಡಲು ತಮ್ಮ ಅಭ್ಯಂತರವಿಲ್ಲ ಒಕ್ಕೂಟ ರಚನೆ ವಿಚಾರದಲ್ಲಿ ನ್ಯಾಯಾಲಯದಿಂದ ಮೂರನೇ ವ್ಯಕ್ತಿಯೊಬ್ಬರು ತಂದಿರುವ ತಡೆಯಾಜ್ಞಕ್ಕೂ ನಮಗೆ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಕೋಚಿಮುಲ್ ಅಧ್ಯಕ್ಷ ಹಾಗೂ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಸ್ಪಷ್ಟಪಡಿಸಿದರು.

ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ವಂಟೂರು ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡವನ್ನು ಉದ್ಘಾಟಿಸಿ ನಂತರ ಸುಧ್ಧಿಗಾರರೊಂದಿಗೆ ಮಾತನಾಡಿದ ಅವರು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಹಾಲು ಉತ್ಪಾದಕರ ಶ್ರಮ ಮತ್ತು ಸಹಕಾರದಿಂದ ಒಕ್ಕೂಟ ಲಾಭದಾಯಕವಾಗಿ ನಡೆಯುತ್ತಿದೆ ಎರಡು ಜಿಲ್ಲೆಗಳ ಹಾಲು ಉತ್ಪಾದಕರಿಗೆ ಸೌಲಭ್ಯ ನೀಡುವ ವಿಚಾರದಲ್ಲಿ ಯಾವುದೇ ರೀತಿಯ ತಾರತಮ್ಯವನ್ನು ಮಾಡಿಲ್ಲ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಒಕ್ಕೂಟ ಮಾಡಲು ಆಡಳಿತ ಮಂಡಳಿಯ ಸರ್ವಸದಸ್ಯರ ಸಭೆಯಲ್ಲಿ ತೀರ್ಮಾನಿಸಲಾಗಿದೆ ಇಲ್ಲಿ ಯಾರೂ ಸಹ ವಿರೋಧಿಸುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ ಎಂದು ಟೀಕಾಕಾರರಿಗೆ ತಿರುಗೇಟು ನೀಡಿದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈಗಾಗಲೇ 260 ಕೋಟಿ ರೂ.ಗಳ ಖರ್ಚು ಮಾಡಿ ಸುಸಜ್ಜಿತ ಮೆಗಾ ಡೇರಿಯನ್ನು ನಿರ್ಮಿಸಲಾಗಿದೆ ಹಾಗೆಯೇ ಶಿಡ್ಲಘಟ್ಟ ತಾಲೂಕಿನಲ್ಲಿ ಹಾಲು ಉತ್ಪಾದಕರಿಗೆ ಅನುಕೂಲ ಕಲ್ಪಿಸಲು ಸಾದಲಿಯ ಬಳಿ ಕೆಎಂಎಫ್ ಸಹಕಾರದಿಂದ ಪಶು ಆಹಾರ ಘಟಕವನ್ನು ನಿರ್ಮಿಸುವ ಪ್ರಕ್ರಿಯೆ ಆರಂಭಿಸಲಾಗಿದೆ ಆದರೆ ಎಂವಿ ಕೃಷ್ಣಪ್ಪ ಅವರ ಹೆಸರಿನಲ್ಲಿ ಕೋಲಾರದಲ್ಲಿ ಗೋಲ್ಡನ್ ಡೇರಿ ಮಾಡಲು ಅಡ್ಡಗಾಲು ಹಾಕಿರುವುದು ಸರಿಯೇ ಎಂದು ಪ್ರಶ್ನಿಸಿದ ಅವರು ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಮಾಡಲು ತಮ್ಮ ಯಾವುದೇ ರೀತಿಯ ಅಭ್ಯಂತರವಿಲ್ಲ ಎಂದು ಪುನರ್ ಉಚ್ಚರಿಸಿದರು.

ಹೋರಾಟದ ಎಚ್ಚರಿಕೆ: ಹಾಲು ಉತ್ಪಾದಕರಿಗೆ ಹೆಚ್ಚಿನ ಅನನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಒಕ್ಕೂಟಗಳು ಕಾರ್ಯನಿರ್ವಹಿಸುತ್ತಿವೆ ಆದರೆ ಬೆಳಗಾವಿ ಮತ್ತು ಬೆಂಗಳೂರಿನ ವಿಧಾನಸಭೆಯ ಅಧಿವೇಶನದಲ್ಲಿ ಹಾಲಿನ ಎಂಆರ್‍ಪಿ ದರವನ್ನು ಹೆಚ್ಚಿಸಲು ಪ್ರಸ್ತಾಪ ಮಾಡಿದ್ದೇನೆ ಆದರೆ ಸರ್ಕಾರ ಯಾವುದೇ ರೀತಿಯ ಸ್ಪಷ್ಟ ತೀರ್ಮಾನವನ್ನು ತೆಗೆದುಕೊಂಡಿಲ್ಲ ಕೆಎಂಎಫ್ ಅಧ್ಯಕ್ಷರು ಈ ವಿಚಾರದಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿ ಹಾಲಿನ ದರವನ್ನು ಹೆಚ್ಚಳ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಆಶ್ವಾಸನೆ ನಿಡಿದ್ದಾರೆ ಒಂದು ವೇಳೆ ಅದು ಕಾರ್ಯಗತವಾಗದ ಪಕ್ಷದಲ್ಲಿ ರಾಜ್ಯದ 14 ಒಕ್ಕೂಟಗಳ ಅಧ್ಯಕ್ಷರು ಸರ್ಕಾರದ ವಿರುದ್ದ ಅನಿವಾರ್ಯವಾಗಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

85 ಕೋಟಿ ಠೇವಣಿ ನಿಧಿ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಲ್ಲಿ ನಾನು ಅಧ್ಯಕ್ಷನಾಗಿ ಯಾವುದೇ ರೀತಿಯ ಏಕಪಕ್ಷಿಯಾಗಿ ತೀರ್ಮಾನವನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಆಡಳಿತ ಮಂಡಳಿಯ ನಿರ್ದೇಶಕರ ಸಲಹೆ ಸೂಚನೆಗಳನ್ನು ಆಲಿಸಿ ಹಾಲು ಉತ್ಪಾದಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ತೀರ್ಮಾನಗಳನ್ನು ತೆಗೆದುಕೊಳ್ಳಲಾಗುತ್ತದೆ ಜೊತೆಗೆ ಸರ್ಕಾರ ಒಕ್ಕೂಟಗಳ ಕಾರ್ಯವೈಖರಿಯನ್ನು ಸಹ ಅವಲೋಕನ ಮಾಡುತ್ತದೆ ಒಕ್ಕೂಟದಲ್ಲಿ ಕಟ್ಟಡಗಳನ್ನು ನಿರ್ಮಿಸಲು ಅಗತ್ಯ ಸಹಾಯಧನವನ್ನು ನೀಡುವ ಜೊತೆಗೆ 85 ಕೋಟಿ ರೂ.ಗಳನ್ನು ಠೇವಣಿ ಇಟ್ಟಿದ್ದೇವೆ ಜೊತೆಗೆ 5 ಕೋಟಿ ರೂ.ಗಳ ಆದಾಯದಲ್ಲಿ ಒಕ್ಕೂಟವಿದೆ ಈ ವಿಚಾರದಲ್ಲಿ ರಾಜಕೀಯ ದುರುದ್ದೇಶದಿಂದ ಒಕ್ಕೂಟ ನಷ್ಟದಲ್ಲಿದೆಯೆಂದು ಆರೋಪ ಮಾಡುವ ಬದಲಿಗೆ ಒಕ್ಕೂಟದ ಅಧಿಕಾರಿಗಳಿಂದಲೇ ಮಾಹಿತಿಯನ್ನು ಪಡೆದುಕೊಳ್ಳಬೇಕು ಅಪಪ್ರವಾರ ಮಾಡುವುದನ್ನು ನಿಲ್ಲಿಸಬೇಕೆಂದು ಪರೋಕ್ಷವಾಗಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ. ನಾಗರಾಜ್ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.

ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿಲ್ಲ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಹಾಲು ಒಕ್ಕೂಟವನ್ನು ವಿಭಜನೆ ಮಾಡುವುದರಿಂದ ಆಗುವ ತೊಂದರೆಗಳ ಮತ್ತು ಅನುಕೂಲಗಳ ಬಗ್ಗೆ ಸರ್ಕಾರ ಮತತು ಸಂಬಂಧಿಸಿದ ಸಚಿವರು ಜಿಲ್ಲೆಯ ಶಾಸಕರು ಮತ್ತು ಸಹಕಾರಿಗಳೊಂದಿಗೆ ಚರ್ಚೆಸಿಲ್ಲ ಹಿರಿಯರೊಂದಿಗೆ ಚರ್ಚೆ ಮಾಡಿ ತೀರ್ಮಾನ ಮಾಡಲು ಅವಕಾಶಗಳಿದ್ದರೂ ಸಹ ಗಣನೆಗೆ ತೆಗೆದುಕೊಂಡಿಲ್ಲ ಏಕಪಕ್ಷಿಯವಾಗಿ ಪ್ರತ್ಯೇಕವಾಗಿ ಹಾಲು ಒಕ್ಕೂಟ ಮಾಡಲು ತೀರ್ಮಾನಿಸಲಾಗಿದೆ ಅದು ಸರಿಯೇ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕೆಂದು ಛೇಡಿಸಿದರು.
ಈ ಸಂದರ್ಭದಲ್ಲಿ ಶಾಸಕ ವಿ.ಮುನಿಯಪ್ಪ,ಸಹಕಾರ ರತ್ನ ಪುರಸ್ಕೃತ ಕೆ.ಗುಡಿಯಪ್ಪ, ಕೋಚಿಮುಲ್ ಹಾಗೂ ಕೆಎಂಎಫ್ ನಿರ್ದೇಶಕ ಶ್ರೀನಿವಾಸ್ ರಾಮಯ್ಯ,ಮಹಿಳಾ ನಿರ್ದೇಶಕಿ ಸುನಂದಮ್ಮ,ಕೋಚಿಮುಲ್ ವ್ಯವಸ್ಥಾಪಕ ಕೆಂಪರಾಜು, ಎಂಪಿಸಿಎಸ್‍ನ ಅಧ್ಯಕ್ಷ ಬಿ.ರಾಮಾಂಜಿನಪ್ಪ,ಉಪಾಧ್ಯಕ್ಷ ನಾರಾಯಣಸ್ವಾಮಿ,ಕೋಚಿಮುಲ್ ಉಪ ವ್ಯವಸ್ಥಾಪಕ ಎ.ವಿ.ಶಂಕರ್‍ರೆಡ್ಡಿ,ತಾಲೂಕು ಯುವ ಕಾಂಗ್ರೆಸ್‍ನ ಮಾಜಿ ಉಪಾಧ್ಯಕ್ಷ ಹರೀಶ್ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

GV-

New Bill: ಇನ್ನು ಪಂಚಾಯತ್‌ರಾಜ್‌ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ

BYV-yathnal

BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.